ಎರಡು ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ ಖರೀದಿ: ಡಿಸಿಎಂ ಮಾಹಿತಿ
Team Udayavani, Apr 16, 2020, 9:50 PM IST
ಬೆಂಗಳೂರು: ಕೋವಿಡ್ ಪತ್ತೆಗಾಗಿ ಹೆಚ್ಚುವರಿಯಾಗಿ ಎರಡು ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್‍ಗಳನ್ನು ಖರೀದಿಸಲು ಗುರುವಾರ ಇಲ್ಲಿ ನಡೆದ ಕೋವಿಡ್ ಕುರಿತ ಕಾರ್ಯಪಡೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
‘ಚೀನಾ ಸರ್ಕಾರ ಪಟ್ಟಿ ಮಾಡಿರುವ ಅಧಿಕೃತ ಸಂಸ್ಥೆಗೇ ಟೆಸ್ಟ್ ಕಿಟ್‍ಗಳನ್ನು ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದ್ದು, ಅವು ಬಂದ ನಂತರ ಟೆಸ್ಟ್ ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು’ ಎಂದು ಅಶ್ವತ್ಥನಾರಾಯಣ ಸುದ್ದಿಗಾರರಿಗೆ ತಿಳಿಸಿದರು.
‘ಕೋವಿಡ್ ರೋಗ ಲಕ್ಷಣಗಳು ಇರುವ ವ್ಯಕ್ತಿಯ ಕಫ ಮಾದರಿಗಳನ್ನು ಸಂಗ್ರಹಿಸಲು ರಾಜ್ಯದಲ್ಲಿ 250 ಕಿಯೋಸ್ಕ್ ಗಳನ್ನು ಸ್ಥಾಪಿಸಲಾಗುವುದು. ಇಂತಹ ಕಿಯೋಸ್ಕ್ ಗಳು ತಾಲ್ಲೂಕಿಗೆ ಒಂದರಂತೆ ಆರಂಭಿಸಲಾಗುವುದು. ಈ ಮೂಲಕ ಮಾದರಿ ಸಂಗ್ರಹ ಪ್ರಕ್ರಿಯೆಯನ್ನು ಮತ್ತಷ್ಟು ಹೆಚ್ಚಿಸಿ, ರೋಗ ಹರಡುವುದನ್ನು ತಡೆಯಲಾಗುವುದು’ ಎಂದು ಅವರು ವಿವರಿಸಿದರು.
‘ರಂಜಾನ್ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡದಿರಲು ಹಾಗೂ ಮನೆಗಳಲ್ಲಿಯೇ ಪ್ರಾರ್ಥನೆ ಮಾಡಿಕೊಳ್ಳುವಂತೆ ಸೂಚಿಸಲು ತೀರ್ಮಾನಿಸಲಾಗಿದೆ. ವೈಯಕ್ತಿಕ ಅಂತರವನ್ನು ಕಾಪಾಡಿಕೊಳ್ಳುವುದನ್ನು ಕಡ್ಡಾಯ ಮಾಡಿದ್ದು, ಇದನ್ನು ಸ್ಥಳೀಯ ಮಟ್ಟದಲ್ಲಿ ಮುಸ್ಲಿಂ ಧರ್ಮಗುರುಗಳ ಮೂಲಕವೂ ಜನರಲ್ಲಿ ಜಾಗೃತಿ ಮೂಡಿಸಲು ಸಲಹೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.
‘ವೈದ್ಯರ ರಕ್ಷಣಾ ಕವಚಗಳು (ಪಿಪಿಇ) ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಇವೆ. ಅಗತ್ಯ ಇರುವ 25 ಸಾವಿರ ಆರ್.ಟಿ.ಪಿ.ಸಿ.ಆರ್. ಕಿಟ್‍ಗಳ ಖರೀದಿಗೂ ಒಪ್ಪಿಗೆ ನೀಡಲಾಗಿದೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಜಿಲ್ಲಾ ಆಸ್ಪತ್ರೆ ಗಳಲ್ಲಿ ಕನಿಷ್ಠ 50 ರಿಂದ 100 ಹಾಸಿಗೆಗಳಿಗೆ ಕೇಂದ್ರಿಕೃತ ಆಮ್ಲಜನಕ ಸರಬರಾಜು ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಯಿತು ಎಂದರು. ರಕ್ತ/ಕಫ ಮಾದರಿಗಳ ಸಂಗ್ರಹಕ್ಕೆ ಸಂಬಂಧಿಸಿದಂತೆ ಡಾ.ಸುದರ್ಶನ ನೇತೃತ್ವದ ವೈದ್ಯರ ತಂಡ ಕೊಟ್ಟಿರುವ ವರದಿಯನ್ನು ಅಂಗೀಕರಿಸಲಾಯಿತು.
ಕೋವಿಡ್ ರೋಗಿಗಳಿಗೆ ಸರ್ಕಾರ ನಿಗದಿಪಡಿಸಿರುವ ಆಸ್ಪತ್ರೆಗಳಲ್ಲೇ ಚಿಕಿತ್ಸೆ ನೀಡಬೇಕು. ಕೆ.ಸಿ.ಜನರಲ್ ಸೇರಿದಂತೆ ಬೇರೆ ಮಾಮೂಲಿ ರೋಗಿಗಳು ಹೋಗುವ ಕಡೆಗೆ ಚಿಕಿತ್ಸೆ ನೀಡಬಾರದು ಎನ್ನುವ ತೀರ್ಮಾನವನ್ನೂ ಸಭೆಯಲ್ಲಿ ಮಾಡಲಾಯಿತು.
ಸಹಾಯವಾಣಿ:
ಕೋವಿಡ್ ಸಲುವಾಗಿಯೆ ಪ್ರತ್ಯೇಕ ಸಹಾಯವಾಣಿ ತೆರೆಯಲಾಗುವುದು. ಕನಿಷ್ಟ 300 ಜನರು, 50 ಸಾವಿರ ಕರೆಗಳನ್ನು ಸ್ವೀಕರಿಸಲಿದ್ದಾರೆ ಎಂಬ ಮಾಹಿತಿಯನ್ನೂ ಸಹ ಉಪಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ನೀಡಿದರು.
ಟ್ರೇಸಿಂಗ್ ಪೂರ್ಣ:
ದೆಹಲಿಯ ತಬ್ಲೀಗಿ ಜಮಾತ್ ಮತ್ತು ನಂಜನಗೂಡಿನ ಜೂಬಿಲಿಯಂಟ್ ಕಾರ್ಖಾನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಟ್ರೇಸಿಂಗ್ ಪೂರ್ಣವಾಗಿದ್ದು, ಪಾಸಿಟಿವ್ ಇರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕ್ವಾರಂಟೈನ್‍ನಲ್ಲಿ ಇರುವವರ ಮೇಲೆ ನಿಗಾ ಇಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.