ಕಾಸರಗೋಡು: ಒಬ್ಬರಿಗೆ ಸೋಂಕು; ಇಬ್ಬರು ಗುಣಮುಖ
Team Udayavani, Apr 29, 2020, 4:49 AM IST
ಕಾಸರಗೋಡು: ಜಿಲ್ಲೆಯ ಅಜಾನೂರಿನ 24ರ ಹರೆಯದ ಯುವಕನಿಗೆ ಮಂಗಳವಾರ ಕೋವಿಡ್ 19 ಸೋಂಕು ದೃಢ ಗೊಂಡಿದೆ. ಇದೇ ವೇಳೆ ಇಬ್ಬರು ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 176 ಮಂದಿಗೆ ಸೋಂಕು ಬಾಧಿಸಿದ್ದು, 162 ಮಂದಿ ಗುಣಮುಖರಾಗಿ ದ್ದಾರೆ. ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಎಲ್ಲ 89 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಜನರಲ್ ಆಸ್ಪತ್ರೆಯ ವೈದ್ಯರ ತಂಡ ಮತ್ತು ಸಿಬಂದಿ ಸಾಧನೆ ಮಾಡಿದ್ದಾರೆ.
ಕೇರಳದಲ್ಲಿ ನಾಲ್ವರಿಗೆ ಸೋಂಕು
ಕಣ್ಣೂರು ಜಿಲ್ಲೆಯ ಮೂವರಿಗೆ ಮತ್ತು ಕಾಸರಗೋಡು ಜಿಲ್ಲೆಯ ಒಬ್ಬರ ಸಹಿತ ಕೇರಳದಲ್ಲಿ ಮಂಗಳವಾರ ಒಟ್ಟು ನಾಲ್ವರಲ್ಲಿ ಸೋಂಕು ದೃಢಗೊಂಡಿದೆ. ಇದೇ ವೇಳೆ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ಇಬ್ಬರಂತೆ ನಾಲ್ವರು ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ ಇಬ್ಬರು ವಿದೇಶದಿಂದ ಬಂದವರು ಮತ್ತು ಇಬ್ಬರಿಗೆ ಸೋಂಕಿತರೊಂದಿಗಿನ ಸಂಪರ್ಕದಿಂದ ರೋಗ ಬಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.