ಲಾಕ್‌ಡೌನ್‌ ಪರಿಣಾಮ : 531 ಮಿಲಿಯನ್‌ ಮಂದಿ ಸುರಕ್ಷಿತ

ಎರಡು ಪ್ರತ್ಯೇಕ ಸಂಶೋಧನಾ ವರದಿಯಲ್ಲಿ ಎರಡು ಭಿನ್ನ ಅಂಕಿಅಂಶ ಪ್ರಕಟ

Team Udayavani, Jun 12, 2020, 12:33 PM IST

ಲಾಕ್‌ಡೌನ್‌ ಪರಿಣಾಮ : 531 ಮಿಲಿಯನ್‌ ಮಂದಿ ಸುರಕ್ಷಿತ

ಮಾಸ್ಕೋ: ಲಾಕ್‌ಡೌನ್‌ ಸಡಿಲಿಕೆ ಬಳಿಕ ಇಲ್ಲಿನ ಪ್ರದೇಶವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜನ.

ಕ್ಯಾಲಿಫೋರ್ನಿಯ: ಜಾಗತಿಕ ಮಟ್ಟದಲ್ಲಿ ಕೋವಿಡ್ ಲಾಕ್‌ಡೌನ್‌ ಜಾರಿಗೊಳಿಸಿದ ಕಾರಣ ಸುಮಾರು 531 ಮಿಲಿಯನ್‌ ಮಂದಿಗೆ ಸೋಂಕು ಹರಡುವುದು ತಪ್ಪಿರಬಹುದು ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಜಾಗತಿಕ ಮಟ್ಟದಲ್ಲಿ ಲಾಕ್‌ಡೌನ್‌ ಪರಿಣಾಮಗಳ ಬಗ್ಗೆ ನಡೆಸಿರುವ ಎರಡು ಹೊಸ ಅಧ್ಯಯನಗಳು ತಿಳಿಸುವ ಪ್ರಕಾರ, ಕೆಲವು ದೇಶಗಳಲ್ಲಿ ಲಾಕ್‌ಡೌನ್‌ ಅನ್ನು ಸರಿಯಾಗಿ ಅನುಷ್ಠಾನಗೊಳಿಸಿರುವುದರಿಂದ ಸೋಂಕು ಇಳಿಮುಖವಾಗಿದೆ ಮತ್ತು ದೊಡ್ಡ ಪ್ರಮಾಣದಲ್ಲಿ ಇತರರಿಗೆ ಹರಡುವುದನ್ನು ನಿಯಂತ್ರಿಸಲಾಗಿದೆ. ಪರಿಣಾಮವಾಗಿ ಮಿಲಿಯಗಟ್ಟಲೆ ಜನರು ಸೋಂಕಿಗೊಳಗಾಗದೆ ಸುರಕ್ಷಿತರಾಗಿ ಉಳಿದಿದ್ದಾರೆ ಎಂದು ತಿಳಿದು ಬಂದಿದೆ.

ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯದ ವತಿ ಯಿಂದ ನಡೆಸಲಾದ ಬೆರ್ಕ್‌ಲೀ ವರದಿಯ ಪ್ರಕಾರ, ಚೀನ, ದಕ್ಷಿಣ ಕೊರಿಯ, ಇರಾನ್‌, ಇಟೆಲಿ, ಫ್ರಾನ್ಸ್‌ ಮತ್ತು ಯುನೈಟೆಡ್‌ ಸ್ಟೇಟ್ಸ್‌ನಲ್ಲಿ ಲಾಕ್‌ಡೌನ್‌ನಿಂದಾಗಿ ಸುಮಾರು 531 ಮಿಲಿಯನ್‌ ಜನರಿಗೆ ಸೋಂಕು ಹರಡುವುದು ತಪ್ಪಿದೆ ಅಥವಾ ವಿಳಂಬವಾಗಿದೆ ಎಂದು ತಿಳಿಸಲಾಗಿದೆ. ಈ ವರದಿಯು ಜೂನ್‌ 8ರ “ನೇಚರ್‌’ನಲ್ಲಿ ಪ್ರಕಟವಾಗಿದೆ.

ಲಂಡನ್‌ನ ಇಂಪೀರಿಯಲ್‌ ಕಾಲೇಜ್‌ನ ವಿಜ್ಞಾನಿಗಳು ನಡೆಸಿದ ಇನ್ನೊಂದು ಅಧ್ಯಯನದ ಪ್ರಕಾರ, ಲಾಕ್‌ಡೌನ್‌ನಿಂದಾಗಿ ಸುಮಾರು 11 ಯೂರೋಪಿಯನ್‌ ದೇಶಗಳ ಅಂದಾಜು 3.1 ಮಿಲಿಯನ್‌ ಜನರು ಸೋಂಕಿನಿಂದ ರಕ್ಷಿಸಲ್ಪಟ್ಟಿದ್ದಾರೆ ಎಂದು ತಿಳಿದು ಬರುತ್ತದೆ. ವೈರಸ್‌ ತಡೆಯಲು ಕ್ರಮ ಕೈಗೊಳ್ಳುವ ಮೊದಲು ಮತ್ತು ಅನಂತರದ ಪರಿಸ್ಥಿತಿಯನ್ನು ಗಮನಿಸಿದರೆ, ಯೂರೋಪ್‌ನಲ್ಲಿ ಕ್ರಮ ಕೈಗೊಂಡ ಬಳಿಕ ಸೋಂಕಿನ ಪ್ರಮಾಣವು ಸರಾಸರಿ 81ರಷ್ಟು ಇಳಿಕೆಯಾಗಿದೆ ಎಂದು “ನೇಚರ್‌’ನ ವರದಿಯು ತಿಳಿಸಿದೆ. ಪ್ರತಿ ಸೋಂಕಿತನು ಸರಾಸರಿ ಒಬ್ಬನಿಂದ ಕಡಿಮೆ ವ್ಯಕ್ತಿಗೆ ವೈರಸ್‌ ಹರಡಿದ್ದಾನೆ ಎಂದು ತಿಳಿದು ಬರುತ್ತದೆ. ಹರಡುವಿಕೆ ಪ್ರಮಾಣವು ಇಷ್ಟು ಕನಿಷ್ಠ ಮಟ್ಟದಲ್ಲಿರುವುದನ್ನು ಗಮನಿಸಿದರೆ ಲಾಕ್‌ಡೌನ್‌ ಮುಗಿಯುವ ಹೊತ್ತಿಗೆ ವೈರಸ್‌ ಕೂಡ ನಿರ್ಮೂಲವಾಗುವ ಸಾಧ್ಯತೆಯಿದೆ ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ.

“ಕೋವಿಡ್ ನಿಯಂತ್ರಣಕ್ಕಾಗಿ ಬೇರೆ ಬೇರೆ ದೇಶಗಳು ವಿವಿಧ ರೀತಿಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿವೆ. ಇವುಗಳೆಲ್ಲ ಸರಿಯಾಗಿ ಕೆಲಸ ಮಾಡಿವೆ. ಅಸಂಖ್ಯಾಕ ಮಂದಿಯ ಜೀವ ರಕ್ಷಿಸಿದೆ’ ಎಂದು ರಲೈಘ…ನಲ್ಲಿರುವ ನಾರ್ತ್‌ ಕ್ಯಾಲಿಫೋರ್ನಿಯ ಸ್ಟೇಟ್‌ ಯೂನಿವರ್ಸಿಟಿಯ ರೋಗ ಸಂಬಂಧಿ ಗಣಿತ ಶಾಸ್ತ್ರಜ್ಞ ಅಲುನ್‌ ಲೋಯ್ಡ ಅವರು ತಿಳಿಸಿದ್ದಾರೆ. ಆದರೆ ಈ ದೇಶಗಳೆಲ್ಲ ಈಗ ನಿರ್ಬಂಧಗಳನ್ನು ತೆಗೆದು ಹಾಕುತ್ತಿದ್ದು, ಇದರಿಂದಾಗಿ ಸೋಂಕು ಹೆಚ್ಚಾಗುವ ಅಪಾಯವಿದೆ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.