ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಹೇಗಿದೆ;ಆಕ್ಲೆಂಡ್‌ನಲ್ಲಿ ಲಾಕ್‌ಡೌನ್ ಒಂದು ವಾರ ವಿಸ್ತರಣೆ
Team Udayavani, Aug 25, 2020, 1:47 AM IST
ದಿಲ್ಲಿ: ಅಶೋಕ ಹೊಟೇಲ್‌ಗೆ ಸೋಂಕು ನಿವಾರಕ ಸಿಂಪಡಣೆ.
ಮಣಿಪಾಲ: ಕೆಲವು ರಾಷ್ಟ್ರಗಳಲ್ಲಿ ಕೋವಿಡ್ ಇನ್ನೂ ತನ್ನ ಸಾಮ್ರಾಜ್ಯವನ್ನು ವಿಸ್ತರಿಸುತ್ತಿದೆ. ಕೆಲವು ರಾಷ್ಟ್ರಗಳು ಲಾಕ್‌ಡೌನ್ ಅನ್ನು ಹಿಂಪಡೆದಿದ್ದು, ಯಥಾಸ್ಥಿತಿಗೆ ಮರಳುತ್ತಿದೆ. ಇಲ್ಲಿ ಜಾಗತಿಕವಾಗಿ ಕೊರೊನಾದ ಸ್ಥಿತಿಗತಿಗಳನ್ನು ವಿವರಿಸಲಾಗಿದೆ.
ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್ ಸೋಮವಾರ ಆಕ್ಲೆಂಡ್‌ನಲ್ಲಿ ಲಾಕ್‌ಡೌನ್ ಅನ್ನು ಒಂದು ವಾರ ವಿಸ್ತರಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಹೊಸ ಪ್ರಕರಣಗಳು ಹೊರಬಂದ ಬಳಿಕ ನ್ಯೂಜಿಲೆಂಡ್‌ನಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಇದು ಲೆವೆಲ್ ಟು ಲಾಕ್ ಡೌನ್ ಆಗಿರುತ್ತದೆ ಎಂದು ಜೆಸಿಂಡಾ ಹೇಳಿದರು. ಇದರಲ್ಲಿ ಜನರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ. ಆದರೆ ಮಾಸ್ಕ್ ಹಾಗೂ ಸಾಮಾಜಿಕ ದೂರವನ್ನು ಅನುಸರಿಸುವುದು ಅಗತ್ಯವಾಗಿರುತ್ತದೆ.
ಚೀನ: ದೇಶೀಯ ಸೋಂಕಿನ ಪ್ರಕರಣಗಳಿಲ್ಲ ಚೀನದಲ್ಲಿ ಸತತ ಎಂಟನೇ ದಿನವೂ ಯಾವುದೇ ದೇಶೀಯ ವೈರಸ್ ಪ್ರಕರಣಗಳು ವರದಿಯಾಗಿಲ್ಲ. ಆದರೆ 24 ಗಂಟೆಗಳಲ್ಲಿ 16 ಸೋಂಕಿತರಲ್ಲಿ ಕೊರೊನಾ ಕಂಡುಬಂದಿದ್ದು, ಅವರೆಲ್ಲರೂ ವಿದೇಶದವರಾಗಿದ್ದಾರೆ. ಈವರೆಗೆ ದೇಶದಲ್ಲಿ 84,967 ಪ್ರಕರಣಗಳು ವರದಿಯಾಗಿದ್ದು, 4634 ಜನರು ಪ್ರಾಣ ಕಳೆದುಕೊಂಡಿ¨ªಾರೆ. ಬೀಜಿಂಗ್ ಸೇರಿದಂತೆ ಹಲವು ಸ್ಥಳಗಳಲ್ಲಿ ಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದೆ. ಬೀಜಿಂಗ್ ಜನರು ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.