ಲಾಕ್‌ಡೌನ್‌ ಸಡಿಲಿಕೆ; ವಿಶ್ವಾದ್ಯಂತ ಕೋವಿಡ್‌ ಏರಿಕೆ

ಜನರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ.

Team Udayavani, Jun 24, 2020, 12:20 PM IST

ಲಾಕ್‌ಡೌನ್‌ ಸಡಿಲಿಕೆ; ವಿಶ್ವಾದ್ಯಂತ ಕೋವಿಡ್‌ ಏರಿಕೆ

ಟೊರಾಂಟೊ: ಲಾಕ್‌ಡೌನ್‌ ಸಡಿಲಿಕೆ ಬಳಿಕ ಕೆನಡಾದಲ್ಲಿ ಬಟ್ಟೆ ಅಂಗಡಿಗಳು ತೆರೆದುಕೊಂಡಿದ್ದು ಗ್ರಾಹಕರನ್ನು ಸ್ವಾಗತಿಸಲಾಗುತ್ತಿದೆ.

ವೆಲ್ಲಿಂಗ್ಟನ್‌: ಲಾಕ್‌ಡೌನ್‌ ಸಡಿಲಗೊಳಿಸಿದರೆ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತವೆ ಎಂಬ ಮಾತು ಮತ್ತೆ ನಿಜವಾಗಿದ್ದು, ವಿಶ್ವಾದ್ಯಂತ ಪ್ರಕರಣಗಳು ತೀವ್ರ ಏರಿಕೆ ಕಂಡಿವೆ. ಅಮೆರಿಕ, ದ.ಏಷ್ಯಾ, ಪಶ್ಚಿಮ ಯುರೋಪ್‌ಗ್ಳಲ್ಲಿ ಸೋಂಕು ಪ್ರಮಾಣ ತೀವ್ರ ಹೆಚ್ಚಳವಾಗುತ್ತಿದ್ದು ಆತಂಕಕಾರಿಯಾಗಿದೆ.

ಭಾರತವೊಂದರಲ್ಲೇ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಿತ್ಯ ಕಂಡುಬರುತ್ತಿದೆ. ಲ್ಯಾಟಿನ್‌ ಅಮೆರಿಕ ದೇಶಗಳಾದ ಮೆಕ್ಸಿಕೋ, ಕೊಲಂಬಿಯಾ, ಬ್ರಜಿಲ್‌ನಲ್ಲಿ ಸೋಂಕಿ ಹರಡುವಿಕೆ ಅವ್ಯಾಹತವಾಗಿದೆ. ಅಮೆರಿಕ ವೊಂದರಲ್ಲೇ ಕೋವಿಡ್‌ ಪ್ರಕರಣಗಳು 23 ಲಕ್ಷಕ್ಕೂ ಹೆಚ್ಚು ಕಂಡುಬಂದಿದ್ದು, ಆದರೂ ಆರ್ಥಿಕತೆ ದೃಷ್ಟಿಯಿಂದ ಸರಕಾರ ಲಾಕ್‌ಡೌನ್‌ ಸಡಿಲಿಕೆಗೆ ಮುಂದಾಗಿದೆ.

ಈಗಾಗಲೇ ಅಲ್ಲಿನ ನಗರಗಳಲ್ಲಿ ಜನರು ಅಡ್ಡಾಡತೊಡಗಿದ್ದು, ಸಾರಿಗೆ, ಹೊಟೇಲು, ರೆಸ್ಟೋರೆಂಟ್‌ಗಳು ತೆರೆದುಕೊಂಡಿವೆ. ಆದರೆ ಜನರು ಮಾಸ್ಕ್ ಧರಿಸುವ, ಸಾಮಾಜಿಕ ಅಂತರ ಕಾಪಾಡುವ ಗೋಜಿಗೆ ಹೋಗದಿರುವುದರಿಂದ ಸೋಂಕಿನ ಪ್ರಮಾಣ ಹೆಚ್ಚತೊಡಗಿದೆ. ಇದೇ ವೇಳೆ ಅಮೆರಿಕ ಅಧ್ಯಕ್ಷೀಯ ಚುನಾವಣೆ ಕುರಿತ ರ್ಯಾಲಿಗಳು ನಡೆಯತೊಡಗಿದ್ದು, ಸೋಂಕು ಹೆಚ್ಚಳದ ಆತಂಕ ಇನ್ನೂ ಹೆಚ್ಚಿದೆ. ವಿಶ್ವ ಆರೋಗ್ಯ ಸಂಸ್ಥೆಯ ತುರ್ತುಪರಿಸ್ಥಿತಿ ಕೇಂದ್ರದ ಮುಖ್ಯಸ್ಥರಾದ ಡಾ| ಮೈಖೇಲ್‌ ರೇಯಾನ್‌ ಅವರು ಹೇಳುವಂತೆ, ಲಾಕ್‌ಡೌನ್‌ ಸಡಿಲವಾದಂತೆ ಸೋಂಕಿತರು ಹೆಚ್ಚಿದ್ದು ಹೌದು. ಆದರೆ ನಿರ್ದಿಷ್ಟವಾಗಿ ಹೇಳಬೇಕಾದರೆ ಪರೀಕ್ಷೆ ಸಂಖ್ಯೆಯನ್ನು ಹೆಚ್ಚಳಗೊಳಿಸಬೇಕು. ಆಗಲೇ ನೈಜ ಪ್ರಮಾಣ ತಿಳಿದುಬರುತ್ತದೆ. ಈಗ ದೊಡ್ಡ ದೇಶಗಳಲ್ಲಿ ಸೋಂಕಿನ ಪ್ರಮಾಣ ತುತ್ತ ತುದಿಗೆ ತಲುಪುತ್ತಿದ್ದು, ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ನಿರ್ದೇಶಕ ಟೆಡ್ರೊಸ್‌ ಆಧನಾಮ್‌ ಅವರ ಪ್ರಕಾರ ಆರಂಭದಲ್ಲಿ ಕೋವಿಡ್‌ 10 ಲಕ್ಷ ಗಡಿ ತಲುಪಲು 3 ತಿಂಗಳು ಬೇಕಾಗಿದ್ದು, ಈಗ ಕೇವಲ 8 ದಿನಗಳಲ್ಲಿ ವಿಶ್ವದಲ್ಲಿ 10 ಲಕ್ಷ ಪ್ರಕರಣಗಳು ಕಂಡುಬರುತ್ತಿವೆ. ವೈರಸ್‌ ತಡೆಗೆ ದೇಶಗಳು ಒಂದಾಗಿ ಹೋಗದಿರುವುದು ಮತ್ತು ಇದರ ವಿರುದ್ಧ ವಿಶ್ವ ನಾಯಕತ್ವ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.  ಆರಂಭದಲ್ಲಿ ಕೆಲವು ದೇಶಗಳು ವೈರಸ್‌ ಹರಡುವಿಕೆಯನ್ನು ನಿಯಂತ್ರಿಸಿದೆ ಎನ್ನಲಾದರೂ ಮತ್ತೆ ಹಲವು ಪ್ರಕರಣಗಳು ಕಂಡುಬರುತ್ತಿವೆ.

ಕೆಲವು ದೇಶಗಳಲ್ಲಿ ವೈರಸ್‌ ಹಬ್ಬುವಿಕೆ ಪ್ರಮಾಣ ಕಡಿಮೆ ಇದೆ ಎಂದರೆ ಅಲ್ಲಿ ಸೋಂಕಿನ ಪರೀಕ್ಷೆ ಕಡಿಮೆ ಇರುತ್ತದೆ. ಅಷ್ಟೇ ಅಲ್ಲದೆ ಹಲವು ಮಂದಿಗೆ ಸೋಂಕಿನ ಗುಣಲಕ್ಷಣ ಇಲ್ಲದಿರಬಹುದು ಇದೂ ಸಂಖ್ಯೆ ಕಡಿಮೆ ಇರಲು ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.