ಕೋವಿಡ್ 19: ಲಾಕ್ ಡೌನ್ ಉಲ್ಲಂಘಿಸಿದ ಆರೋಪದಡಿ ಹಿಗ್ಗಾಮುಗ್ಗಾ ಥಳಿತ, ರೈತ ಸಾವು?
ಜೂಜಾಟ ನಡೆಯುವ ಸ್ಥಳ ಎಲ್ಲಿದೆ ಎಂದು ಪ್ರಶ್ನಿಸಿದ್ದರು ಎಂದು ಸಾಯುವ ಮೊದಲು ಮಾಡಿರುವ ವಿಡಿಯೋದಲ್ಲಿ ಆರೋಪಿಸಿದ್ದಾರೆ.
Team Udayavani, Apr 20, 2020, 10:58 PM IST
ಜಬಲ್ ಪುರ್(ಮಧ್ಯಪ್ರದೇಶ): ಕೋವಿಡ್ ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್ ಡೌನ್ ಉಲ್ಲಂಘಿಸಿದ ಆರೋಪದಡಿ ಪೊಲೀಸರು ಹಿಗ್ಗಾಮುಗ್ಗಾ ಹೊಡೆದ ಪರಿಣಾಮ 50ವರ್ಷದ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ನಗರ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಏಪ್ರಿಲ್ 16ರಂದು ರೈತ ಬನ್ಶಿ ಕುಶ್ವಾಹ್ ಅವರು ಗದ್ದೆಯಲ್ಲಿ ಕೆಲಸ ಮಾಡಿ ಮನೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ರೈತನನ್ನು ಅಡ್ಡಗಟ್ಟಿದ ಪೊಲೀಸರು ಈ ಪ್ರದೇಶದಲ್ಲಿ ಜೂಜಾಟ ನಡೆಯುವ ಸ್ಥಳ ಎಲ್ಲಿದೆ ಎಂದು ಪ್ರಶ್ನಿಸಿದ್ದರು ಎಂದು ಸಾಯುವ ಮೊದಲು ಮಾಡಿರುವ ವಿಡಿಯೋದಲ್ಲಿ ಆರೋಪಿಸಿದ್ದಾರೆ.
ಆದರೆ ಜೂಜಾಟದ ಸ್ಥಳದ ಬಗ್ಗೆ ತನಗೆ ಏನೂ ಗೊತ್ತಿಲ್ಲ ಎಂದು ಹೇಳಿದ ಕೂಡಲೇ ಪೊಲೀಸರು ಹಿಗ್ಗಾಮುಗ್ಗಾ ಹೊಡೆಯಲು ಆರಂಭಿಸಿದ್ದರು. ನಂತರ ಲಾಠಿಯಲ್ಲಿ ಹೊಡೆದ ಪರಿಣಾಮ ನಾನು ಪ್ರಜ್ಜೆತಪ್ಪಿ ಬಿದ್ದಿದ್ದೆ. ನಂತರ ನನ್ನ ಸ್ಥಳೀಯರು ಮನೆಗೆ ಕರೆತಂದಿರುವುದಾಗಿ ತಿಳಿಸಿದ್ದಾನೆ.
ಭಾನುವಾರ ರೈತನ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಶ್ವಾಹ್ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಪ್ರಾಥಮಿಕ ತನಿಖೆ ಪ್ರಕಾರ ರೈತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಈತ ನಡೆದ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗಾಗಲಿ, ಹಿರಿಯ ಅಧಿಕಾರಿಗಳಿಗೆ ದೂರು ನೀಡಿಲ್ಲ ಎಂದು ಸಮಜಾಯಿಷಿ ನೀಡಿರುವುದಾಗಿ ವರದಿ ತಿಳಿಸಿದೆ. ರೈತನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.