ದೇಶಾದ್ಯಂತ ಒಂದೇ ದಿನ 3,970 ಮಂದಿಗೆ ಸೋಂಕು
Team Udayavani, May 17, 2020, 6:01 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಒಂದೇ ದಿನದಲ್ಲಿ ದೇಶಾದ್ಯಂತ ಸುಮಾರು 4 ಸಾವಿರ ಮಂದಿಗೆ ಸೋಂಕು ತಗಲಿದೆ.
ಶುಕ್ರವಾರ ಬೆಳಗ್ಗೆ 8ರಿಂದ ಶನಿವಾರ ಬೆಳಗ್ಗೆ 8ರವರೆಗೆ ದೇಶಾದ್ಯಂತ 3,970 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿಗೆ 103 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಅಲ್ಲದೆ, ಈ ವರೆಗೆ ಶೇ. 35.08ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಮೃತಪಟ್ಟ 103 ಮಂದಿಯ ಪೈಕಿ ಅತಿ ಹೆಚ್ಚು ಅಂದರೆ 49 ಮಂದಿ ಮಹಾರಾಷ್ಟ್ರದವರು ಮತ್ತು 20 ಮಂದಿ ಗುಜರಾತ್ ನವರು ಎಂದು ಸಚಿವಾಲಯದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತರಲ್ಲಿ ಶೇ.70ಕ್ಕೂ ಹೆಚ್ಚು ಮಂದಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದವರು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಐವರು ಯೋಧರಿಗೆ ಪಾಸಿಟಿವ್: ಶನಿವಾರ ದೆಹಲಿಯಲ್ಲಿ ಐವರು ಸಿಆರ್‌ಪಿಎಫ್ ಯೋಧರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸಿಆರ್‌ಪಿಎಫ್ ನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 285ಕ್ಕೇರಿದೆ.
ಭಾರತಕ್ಕೆ 200 ವೆಂಟಿಲೇಟರ್ ಪೂರೈಕೆ: ಟ್ರಂಪ್ ಘೋಷಣೆ
ಕೋವಿಡ್ ವಿರುದ್ಧ ಹೋರಾಡಲು ಅಮೆರಿಕ 200 ಸಂಚಾರಿ ವೆಂಟಿಲೇಟರ್‌ಗಳನ್ನು ಭಾರತಕ್ಕೆ ಕಳುಹಿಸಿಕೊಡಲಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವಿಷಯವನ್ನು ಪ್ರಕಟಿಸಿದ್ದಾರೆ. ಇದೇ ವೇಳೆ, ಕೋವಿಡ್ ಗೆ ಲಸಿಕೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಭಾರತೀಯ ಮೂಲದ ಅಮೆರಿಕ ಸಂಶೋಧಕರ ಯತ್ನವನ್ನು ಶ್ಲಾಘಿಸಿದ್ದಾರೆ.
ಅಂದಹಾಗೆ, ಅಮೆರಿಕ ಕಳುಹಿಸಲಿರುವ ಪ್ರತಿ ವೆಂಟಿಲೇಟರ್‌ನ ಬೆಲೆ ಸುಮಾರು 9.6 ಲಕ್ಷ ರೂ. ಗಳಾಗಲಿದೆ (13,000 ಡಾಲರ್). ಈ ತಿಂಗಳ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಇವು ಭಾರತವನ್ನು ತಲುಪಲಿವೆ. ಇವುಗಳ ಒಟ್ಟು ವೆಚ್ಚ, ಸಾರಿಗೆ ವೆಚ್ಚ ಹೊರತುಪಡಿಸಿ 19.20 ಕೋಟಿ ರೂ. ಗಳಾಗಲಿದೆ (2.6ಮಿಲಿಯನ್ ಡಾಲರ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.