ಉತ್ತರಪ್ರದೇಶ-ಲಾಕ್ ಡೌನ್ ಆದೇಶ ಉಲ್ಲಂಘನೆ: 71 ಸಾವಿರಕ್ಕೂ ಅಧಿಕ ಜನರ ವಿರುದ್ಧ ದೂರು ದಾಖಲು
ಭಾರತೀಯ ದಂಡ ಸಂಹಿತೆ 188ರ ಅನ್ವಯ ದೂರು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Apr 21, 2020, 1:51 PM IST
Representative Image
ಲಕ್ನೋ: ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿದ್ದರೂ ಕೂಡಾ ಆದೇಶವನ್ನು ಉಲ್ಲಂಘಿಸಿದ ಸುಮಾರು 71 ಸಾವಿರ ಜನರ ವಿರುದ್ಧ ದೂರು ದಾಖಲಿಸಿದ್ದು, 24 ಸಾವಿರಕ್ಕೂ ಅಧಿಕ ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಾಗಿ ಉತ್ತರಪ್ರದೇಶ ಪೊಲೀಸರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಲಾಕ್ ಡೌನ್ ಆದೇಶ ಉಲ್ಲಂಘಿಸಿ, ಅನುಚಿತವಾಗಿ ವರ್ತಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆ 188ರ ಅನ್ವಯ ದೂರು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಲಾಕ್ ಡೌನ್ ಆದೇಶ ಉಲ್ಲಂಘಿಸಿದ 71,782 ಮಂದಿಯಲ್ಲಿ 24, 446 ಜನರ ವಿರುದ್ಧ ಎಫ್ ಐಆರ್ ದಾಖಲಿಸಿರುವುದಾಗಿ ಹೆಚ್ಚುವರಿ ಗೃಹ ಕಾರ್ಯದರ್ಶಿ ಅವಾನೀಶ್ ಅವಾಸ್ಥಿ ಪಿಟಿಐಗೆ ತಿಳಿಸಿದ್ದಾರೆ. ಅಲ್ಲದೇ ಜೈಲಿನಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇವರನ್ನೆಲ್ಲಾ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಆದೇಶ ಮೀರಿ ಲಾಕ್ ಡೌನ್ ಉಲ್ಲಂಘಿಸಿದವರಿಂದ 9.5 ಕೋಟಿ ರೂಪಾಯಿಗಿಂತಲೂ ಅಧಿಕವಾಗಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ 1,184 ಮಂದಿಗೆ ಕೋವಿಡ್ 19 ಸೋಂಕು ತಗುಲಿದ್ದು, 140 ಮಂದಿ ಗುಣಮುಖರಾಗಿದ್ದಾರೆ. 18 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.