ಚಾಮರಾಜನಗರ: ಕೋವಿಡ್‌ನಿಂದ ಓರ್ವ ಸಾವು: ಕೋವಿಡೇತರ ಕಾರಣದಿಂದ ಇಬ್ಬರು ಸಾವು

ಜಿಲ್ಲೆಯಲ್ಲಿ ಸಾವಿರ ದಾಟಿದ ಸೋಂಕಿತರ ಸಂಖ್ಯೆ

Team Udayavani, Aug 7, 2020, 8:00 PM IST

ಚಾಮರಾಜನಗರ: ಕೋವಿಡ್‌ನಿಂದ ಓರ್ವ ಸಾವು: ಕೋವಿಡೇತರ ಕಾರಣದಿಂದ ಇಬ್ಬರು ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ 19 ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಮತ್ತು ಕೋವಿಡೇತರ ಕಾರಣದಿಂದ ಇಬ್ಬರು ಮೃತಪಟ್ಟಿದ್ದಾರೆ.

53 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿವೆ. 38 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1043 ಆಗಿದೆ. 393 ಸಕ್ರಿಯ ಪ್ರಕರಣಗಳಿವೆ.

ಕೊಳ್ಳೇಗಾಲ ಪಟ್ಟಣ 57 ವರ್ಷದ ವ್ಯಕ್ತಿ ಆ. 1ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲೂಕಿನ ಮೇಲಾಜಿಪುರದ 75 ವರ್ಷದ ವೃದ್ಧರು ಸ್ಕ್ರಾಟೆಲ್ ಗ್ಯಾಂಗ್ರಿನ್‌ನಿಂದ ಬಳಲುತ್ತಿದ್ದು, ಆ. 4ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಗುರುವಾರ ಮೃತಪಟ್ಟರು. ಮರಣಾನಂತರ ಕೋವಿಡ್ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ಕೆಜಿಎಫ್‌ನ 55 ವರ್ಷದ ವ್ಯಕ್ತಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಗುಂಡ್ಲುಪೇಟೆಯ ತಮ್ಮ ಬಂಧುಗಳ ಮನೆಗೆ ಬಂದಿದ್ದರು. ಆ. 6ರಂದು ಮೃತಪಟ್ಟಿದ್ದರು. ಮರಣದ ಬಳಿಕ ಪರೀಕ್ಷೆ ನಡೆಸಿದಾಗ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.

ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಒಟ್ಟು 13 ಜನರು ಮೃತಪಟ್ಟಿದ್ಧಾರೆ. ಕೋವಿಡೇತರ ಕಾರಣದಿಂದ ಒಟ್ಟು 4 ಮಂದಿ ಸಾವಿಗೀಡಾಗಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ 626 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 573 ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ.

ಚಾಮರಾಜನಗರ ತಾಲೂಕಿನಿಂದ 23, ಕೊಳ್ಳೇಗಾಲ ತಾಲೂಕಿನಿಂದ 12, ಗುಂಡ್ಲುಪೇಟೆ ತಾಲೂಕಿನಿಂದ 11, ಯಳಂದೂರು ತಾಲೂಕಿನಿಂದ 5, ಹನೂರು ತಾಲೂಕಿನಿಂದ 02 ಪ್ರಕರಣಗಳು ಶುಕ್ರವಾರ ವರದಿಯಾಗಿವೆ.

ಮಾದರಿಯಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ:
ಕೋವಿಡ್ ಪಾಸಿಟಿವ್ ಇದ್ದು, ಇನ್ನಿತರ ಕಾರಣಗಳಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಅಂತ್ಯಕ್ರಿಯೆಯನ್ನು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಿ. ವೃಷಭೇಂದ್ರಪ್ಪ ನೇತೃತ್ವದಲ್ಲಿ ಬಿಜೆಪಿ ಪದಾಧಿಕಾರಿಗಳ ನಡೆಸಿ ಮಾದರಿಯಾಗಿದ್ದಾರೆ.

ಗುಂಡ್ಲುಪೇಟೆಯಲ್ಲಿ ಕ್ಯಾನ್ಸರ್‌ನಿಂದ ಮೃತಪಟ್ಟು, ಕೋವಿಡ್ ಪಾಸಿಟಿವ್ ಇದ್ದ 55 ವರ್ಷದ ವ್ಯಕ್ತಿಯ ಅಂತ್ಯಕ್ರಿಯೆಯನ್ನು ನಗರದ ಹೊರ ವಲಯದಲ್ಲಿ ನಡೆಸಲಾಯಿತು.

ಗ್ಯಾಂಗ್ರಿನ್‌ನಿಂದ ಮೃತಪಟ್ಟು ಪಾಸಿಟಿವ್ ಆದ ಮೇಲಾಜಿಪುರ ಗ್ರಾಮದ 75 ವರ್ಷದ ವೃದ್ಧರ ಅಂತ್ಯಕ್ರಿಯೆಯನ್ನು ಕುಟುಂಬದವರ ಕೋರಿಕೆಯ ಮೇಲೆ, ಅದೇ ಗ್ರಾಮದ ಅವರ ತೋಟದಲ್ಲಿ ನಡೆಸಲಾಯಿತು.

ವೃಷಭೇಂದ್ರಪ್ಪ ಅವರ ಜೊತೆ, ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಸೂರ್ಯಕುಮಾರ್, ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷ ಆನಂದ್, ಮುಖಂಡ ಮೂಡ್ಲುಪುರ ನಂದೀಶ್,  ಜಿಲ್ಲಾ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಂಜುನಾಥ್, ಯುವ ಮುಖಂಡ ಹರಿ ಹಾಗೂ ಕಿರಣ್ ಭಾಗವಹಿಸಿ ಅಂತ್ಯಕ್ರಿಯೆ ನಡೆಸಿಕೊಟ್ಟರು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.