ಕೋವಿಡ್ ಲಾಕ್ ಡೌನ್ ಎಫೆಕ್ಟ್: ಭೋಪಾಲ್ ನಲ್ಲಿ ಮೆಡಿಸಿನ್ ಮತ್ತು ಹಾಲು ಮಾತ್ರ ಜನರಿಗೆ ಲಭ್ಯ
ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳು ಲಭ್ಯವಾಗಲಿದೆ ಎಂದು ತಿಳಿಸಿದ್ದರು.
Team Udayavani, Apr 5, 2020, 8:48 PM IST
ಭೋಪಾಲ್:ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಧ್ಯಪ್ರದೇಶ ಕಠಿಣ ಲಾಕ್ ಡೌನ್ ಕ್ರಮ ಅನುಸರಿಸುತ್ತಿದ್ದು, ರಾಜ್ಯದ
ಎರಡನೇ ದೊಡ್ಡ ನಗರವಾದ ಭೋಪಾಲ್ ನಲ್ಲಿ ಎಲ್ಲಾ ಅಂಗಡಿಗಳು ಬಂದ್ ಆಗಿದ್ದು ಮೆಡಿಸಿನ್ ಮತ್ತು ಹಾಲು ಮಾತ್ರ ಗ್ರಾಹಕರಿಗೆ
ಲಭ್ಯವಿದೆ. ಭೋಪಾಲ್ ನಲ್ಲಿ ಈವರೆಗೆ 15 ಪ್ರಕರಣಗಳು ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ವಾರಗಳ ಹಿಂದೆ ದೇಶಾದ್ಯಂತ 21
ದಿನಗಳ ಲಾಕ್ ಡೌನ್ ಘೋಷಿಸಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳು ಲಭ್ಯವಾಗಲಿದೆ ಎಂದು
ತಿಳಿಸಿದ್ದರು.
ಕಾಂಗ್ರೆಸ್ ನೇತೃತ್ವದ ಕಮಲ್ ನಾಥ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಂಡ ನಂತರ ರಾಜ್ಯದಲ್ಲಿ ನೂತನವಾಗಿ ಶಿವರಾಜ್
ಸಿಂಗ್ ಚವಾಣ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿತ್ತು. ನಂತರ ಇಡೀ ಇಂದೋರ್ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್
ಡೌನ್ ಘೋಷಿಸಿತ್ತು. ರಾಜ್ಯದಲ್ಲಿ 128 ಮಂದಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢವಾಗಿದೆ. ಒಟ್ಟು 179 ಪ್ರಕರಣಗಳು
ಪತ್ತೆಯಾಗಿದೆ. 11 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.