ಮನೆಯಲ್ಲೇ ಇರಿ ಹೊರಗೆ ತಿರುಗಾಡಬೇಡಿ ಎಂದ ಪೊಲೀಸರ ಮೇಲೆ ಏಕಾಏಕಿ ಹಲ್ಲೆ, ಆಸ್ಪತ್ರೆಗೆ ದಾಖಲು
ಕೂಡಲೇ ಪೊಲೀಸರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರನ್ನು ಕೂಡಲೇ ಡಿಸ್ ಚಾರ್ಜ್ ಮಾಡಲಾಗಿದೆ.
Team Udayavani, Apr 17, 2020, 9:10 PM IST
Representative Image
ಜೈಪುರ್: ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಮುಂದುವರಿಸಲಾಗಿದೆ. ಅಲ್ಲದೇ ಜನರ ಓಡಾಟ ನಿರ್ಬಂಧಿಸುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಹೀಗಾಗಿ ಮನೆಯಲ್ಲಿಯೇ ಇರಿ, ಹೊರಗೆ ಓಡಾಡಬೇಡಿ ಎಂದು ಬುದ್ದಿವಾದ ಹೇಳಿದ ಪೊಲೀಸರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ಮೂವರು ಪೊಲೀಸರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಕೂಡಲೇ ಪೊಲೀಸರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಇಬ್ಬರನ್ನು ಕೂಡಲೇ ಡಿಸ್ ಚಾರ್ಜ್ ಮಾಡಲಾಗಿದ್ದು, ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.
ಕೋಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಸೈ ಮೋಹಲ್ಲಾದ ಪಾಂಚ್ ಬಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 8ಗಂಟೆಗೆ ಪೊಲೀಸರು ಪಹರೆ ನಡೆಸುತ್ತಿದ್ದು, ಈ ವೇಳೆ ಕೆಲವರನ್ನು ಗಮನಿಸಿದ್ದು, ಕರ್ಫ್ಯೂ ಜಾರಿಯಲ್ಲಿದ್ದು ಅನಾವಶ್ಯಕವಾಗಿ ತಿರುಗಾಡಬೇಡಿ, ಮನೆಯಲ್ಲಿಯೇ ಇರಿ ಎಂದು ಹೇಳಿದ್ದರು. ಆಗ ಏಕಾಏಕಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.