ಪ್ರಧಾನಮಂತ್ರಿ ಕಛೇರಿಯಿಂದ ಕೋವಿಡ್ ನಿಯಂತ್ರಣ ಕ್ರಮಗಳ ಪರಿಶೀಲನೆ
Team Udayavani, Apr 12, 2020, 12:05 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ ವೈರಸ್‌ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳನ್ನು ಶುಕ್ರವಾರ ಪ್ರಧಾನಮಂತ್ರಿ ಕಾರ್ಯಾಲಯವು ಪರಿಶೀಲಿಸಿದೆ. ವೈಯಕ್ತಿಕ ಸುರಕ್ಷಾ ಸಾಧನಗಳ (ಪಿಪಿಇ) ಉತ್ಪಾದನೆ ಪ್ರಕ್ರಿಯೆಯು ತೀವ್ರಗತಿಯಲ್ಲಿ ಸಾಗುತ್ತಿದೆ ಎಂದು ಪಿಎಂಒಗೆ ಮಾಹಿತಿ ನೀಡಲಾಗಿದೆ.
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆದಿದ್ದು, ಕೋವಿಡ್ ಸವಾಲನ್ನು ಎದುರಿಸಲು ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಚರ್ಚೆ ನಡೆದಿದೆ. ದೇಶಾದ್ಯಂತ ಈವರೆಗೆ 1,45,916 ಸ್ಯಾಂಪಲ್ ಗಳ ಪರೀಕ್ಷೆ ನಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಸ್ತೃತ ಪರೀಕ್ಷಾ ಪ್ರಕ್ರಿಯೆ ಕುರಿತು ಪ್ರಧಾನಿ ಕಾರ್ಯಾಲಯ ತೃಪ್ತಿ ವ್ಯಕ್ತಪಡಿಸಿದೆ.
ಪಿಪಿಇಗಳ ತಯಾರಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜತೆಗೆ ಜಿಲ್ಲಾ ಮಟ್ಟದಲ್ಲಿ ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಸಂಸ್ಥೆಗಳ ನೆರವನ್ನು ಪಡೆದುಕೊಂಡು, ಸಂಪನ್ಮೂಲಗಳ ಸದ್ಬಳಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಸಮುದಾಯಗಳ ಕಡೆಗೆ ತಜ್ಞರ ದೃಷ್ಟಿ
ಭಾರತದಲ್ಲಿ ಕೋವಿಡ್ ಸೋಂಕು ಸಮುದಾಯದ ಮಟ್ಟದಲ್ಲಿ ಹರಡುತ್ತಿರುವ ಅನುಮಾನಗಳು ದಟ್ಟವಾಗಿ ಆವರಿಸಿವೆ. ಇದಕ್ಕೆ ಪೂರಕವಾಗಿ, ಐಸಿಎಂಆರ್ ಇತ್ತೀಚೆಗೆ, ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸುಮಾರು 52 ಪ್ರಾಂತ್ಯಗಳಲ್ಲಿ ನಡೆಸಿರುವ ಕೋವಿಡ್ ವೈರಸ್ ಪರೀಕ್ಷೆಯಲ್ಲೂ ಈ ಅನುಮಾನ ದೃಢಪಟ್ಟಿದೆ.
ಫೆ. 15ರಿಂದ ಏ. 2ರ ಅವಧಿಯಲ್ಲಿ ಐಸಿಎಂಆರ್, ಈ ಪರೀಕ್ಷೆಗಳನ್ನು ನಡೆಸಿತ್ತು. ಇದರಲ್ಲಿ, ಕೇವಲ ಕೋವಿಡ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳಲ್ಲದೆ, ಅತಿ ತೀವ್ರವಾದ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಇಲ್‌ನೆಸ್ – ಎಸ್‌ಎಆರ್‌ಐ) ರೋಗಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. 20 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 52 ಜಿಲ್ಲೆಗಳಿಂದ ಒಟ್ಟು 5,911 ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 104 ಜನರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಪರೀಕ್ಷೆಯಿಂದ ಹೊರಬಿದ್ದ ಆತಂಕಕಾರಿ ವಿಚಾರವೇನೆಂದರೆ, ಸೋಂಕು ದೃಢಪಟ್ಟಿರುವ 104 ರೋಗಿಗಳಲ್ಲಿ 40 ಜನರು ಯಾವುದೇ ವಿದೇಶ ಪ್ರವಾಸ ಮಾಡಿಲ್ಲ ಹಾಗೂ ಸೋಂಕಿತರ ಜೊತೆಗೆ ನಂಟನ್ನೂ ಹೊಂದಿಲ್ಲ. ಈ 40 ಜನರು 15 ರಾಜ್ಯಗಳ 36 ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.