ಸೋಂಕು ಪೀಡಿತರಿಗೆ ಪ್ಲಾಸ್ಮಾ ಥೆರಪಿಗೆ ಮುಂದಾದ ದಿಲ್ಲಿ
Team Udayavani, Apr 17, 2020, 6:29 AM IST
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ವೈರಸ್ ಪೀಡಿತರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಪ್ರಾಯೋಗಿಕವಾಗಿ ಬಳಸಲು ನಿರ್ಧರಿಸಲಾಗಿದೆ.
ಇದಕ್ಕಾಗಿ ಕೇಂದ್ರ ಸರಕಾರದ ಅನುಮತಿ ಪಡೆಯಲಾಗಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ಕೋವಿಡ್ ಸೋಂಕು ಪತ್ತೆಯಾಗಿರುವುದು ದಿಲ್ಲಿಯಲ್ಲಿ. ದೆಹಲಿಯಲ್ಲಿ 1,500ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪಾಸಿಟಿವ್ ವರದಿ ಬಂದಿದೆ.
ಹೀಗಾಗಿ, ಸೋಂಕಿನ ಅಪಾಯ ಹೆಚ್ಚಿರುವವರ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿಯನ್ನು ಬಳಸಲು ಯೋಜಿಸಲಾಗಿದೆ. ಕೆಲವು ವೈದ್ಯರು ಈ ನಿಟ್ಟಿನಲ್ಲಿ ಕಾರ್ಯ ಕೈಗೊಂಡಿದ್ದಾರೆ. ಇದರಲ್ಲಿ ನಾವು ಯಶಸ್ಸು ಕಾಣಲಿದ್ದೇವೆ ಎಂಬ ಆಶಾಭಾವ ಹೊಂದಿದ್ದೇವೆ ಎಂದು ಕೇಜ್ರಿವಾಲ್ ಅವರು ಗುರುವಾರ ಹೇಳಿದರು.
ಕೆಲವು ದೇಶಗಳಲ್ಲಿ ಈ ಥೆರಪಿ ಉತ್ತಮ ಫಲಿತಾಂಶ ನೀಡಿದೆ. ಕೇರಳ ಮತ್ತು ಮಹಾರಾಷ್ಟ್ರದಲ್ಲೂ ಈ ನಿಟ್ಟಿನಲ್ಲಿ ಯತ್ನಗಳು ನಡೆದಿವೆ. ಆದರೆ, ಲಸಿಕೆ ಕಂಡು ಹಿಡಿದರೆ ಮಾತ್ರ ಕೋವಿಡ್ ವೈರಸನ್ನು ಶಾಶ್ವತವಾಗಿ ಹೊಡೆದಾಡಿಸಲು ಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.