ಲಾಕ್ ಡೌನ್ ಮತ್ತಷ್ಟು ಮುಂದುವರಿಕೆ, ಒಡಿಶಾ ಆಯ್ತು ಈಗ ಪಂಜಾಬ್ ರಾಜ್ಯದ ಸರದಿ
ಚರ್ಚೆ ನಡೆಸಿದ ಬಳಿಕ ಲಾಕ್ ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
Team Udayavani, Apr 10, 2020, 7:25 PM IST
Representative Image
ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಒಡಿಶಾ ಸರ್ಕಾರ ಲಾಕ್ ಡೌನ್ ಅನ್ನು ಏಪ್ರಿಲ್ 30ರವರೆಗೆ ಮುಂದುವರಿಸಿದ್ದು, ಇದೀಗ ಪಂಜಾಬ್ ಕೂಡಾ ಲಾಕ್ ಡೌನ್ ಅನ್ನು ಮೇ 1ರವರೆಗೆ ಮುಂದುವರಿಸಲು ನಿರ್ಧರಿಸಿದೆ. ಇದರೊಂದಿಗೆ ಲಾಕ್ ಡೌನ್ ಮುಂದುವರಿಸಿದ 2ನೇ ರಾಜ್ಯವಾಗಿದೆ.
ಸಚಿವ ಸಂಪುಟದ ಜತೆ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಚರ್ಚೆ ನಡೆಸಿದ ಬಳಿಕ ಲಾಕ್ ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಪಂಜಾಬ್ ನಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಪಂಜಾಬ್ ನಲ್ಲಿ ಒಟ್ಟು ಸೋಂಕು ಪೀಡಿತರ ಸಂಖ್ಯೆ 132ಕ್ಕೆ ಏರಿದ್ದು, 11 ಜನರು ಸಾವನ್ನಪ್ಪಿದ್ದಾರೆ.
ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ 21 ದಿನಗಳ ಲಾಕ್ ಡೌನ್ ಏ.14ಕ್ಕೆ ಅಂತ್ಯಗೊಳ್ಳಲಿದೆ. ಅಲ್ಲದೇ ರಾಜ್ಯದಲ್ಲಿ ಏ.15ರಿಂದ ಮತ್ತೆ ಲಾಕ್ ಡೌನ್ ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ಇಂದು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.