ಭಾರತ: ಕಳೆದ 24ಗಂಟೆಯಲ್ಲಿ ದಾಖಲೆಯ 2.34 ಲಕ್ಷ ಕೋವಿಡ್ ಪ್ರಕರಣ ಪತ್ತೆ, 1341 ಮಂದಿ ಸಾವು
ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೇ ಹಲವು ರಾಜ್ಯಗಳಲ್ಲಿ ಲಸಿಕೆ ಕೊರತೆಯನ್ನು ಎದುರಿಸುತ್ತಿದೆ.
Team Udayavani, Apr 17, 2021, 10:41 AM IST
ನವದೆಹಲಿ: ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ ದಾಖಲೆಯ 2,34,692 ಪ್ರಕರಣಗಳು ಪತ್ತೆಯಾಗಿದ್ದು, 1,341 ಮಂದಿ ಸಾವಿಗೀಡಾಗಿದ್ದಾರೆ. ಸತತ ಮೂರನೇ ದಿನವೂ 2ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಶನಿವಾರ(ಏ.17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹರಿದ್ವಾರದ ಕುಂಭ ಮೇಳದಲ್ಲಿ ಕಾವಿಧಾರಿ ಮುಸ್ಲಿಂ ಯೋಗಿ ಆಕರ್ಷಣೆ!
ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು 11 ರಾಜ್ಯಗಳ ಸಚಿವರ ಜತೆ ಸಭೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.
ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಈವರೆಗೆ 37 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಮುಂಬೈನಲ್ಲಿ 8 ಲಕ್ಷ ಕೋವಿಡ್ ಸೋಂಕು ಪತ್ತೆಯಾಗಿದ್ದು, ಕಳೆದ 24ಗಂಟೆಯಲ್ಲಿ 19,486 ಪ್ರಕರಣ ವರದಿಯಾಗಿದೆ.
ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ನಡುವೆಯೇ ಹಲವು ರಾಜ್ಯಗಳಲ್ಲಿ ಲಸಿಕೆ ಕೊರತೆಯನ್ನು ಎದುರಿಸುತ್ತಿದೆ. ಈವರೆಗೆ ದೇಶದಲ್ಲಿ 12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.