ರಕ್ತದಲ್ಲಿರುವ ಪ್ರತಿರೋಧಕಗಳೇ ಕೋವಿಡ್‌ಗೆ ಮದ್ದು
Team Udayavani, Jun 17, 2020, 2:39 PM IST
ವಾಷಿಂಗ್ಟನ್: ಕೋವಿಡ್‌ನಿಂದ ಗುಣಮುಖರಾದ ರೋಗಿಗಳ ದೇಹದಲ್ಲಿರುವ ಪ್ರತಿರೋಧಕಗಳೇ ಕೋವಿಡ್‌ಗೆ ಔಷಧ ಎಂಬುದನ್ನು ಅಮೆರಿಕದ ವಿಜ್ಞಾನಿಗಳು ಹೇಳಿದ್ದಾರೆ. ಇಂತಹ ಪ್ರತಿರೋಧಕಗಳನ್ನು ರೋಗಿಗೆ ನೀಡುವುದರಿಂದ ಕೋವಿಡ್ ಆರಂಭದ ಹಂತದಲ್ಲಿ ಸಾಕಷ್ಟು ಪ್ರಯೋಜನವಾಗುತ್ತದೆ. ಇದು ವೈರಸ್ ಮಟ್ಟವನ್ನು ಕಡಿಮೆಗೊಳಿಸಲು ಸಹಾಯ ಮಾಡುತ್ತದೆ. ಅಲ್ಲದೇ ಹಲವು ರೋಗಗಳ ವಿರುದ್ಧ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ ಎಂದು ಸ್ಕ್ರಿಪ್ಸ್ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.
ಕೋವಿಡ್‌ಗೆ ಸರಿಯಾದ ಔಷಧ ಸಿಗುವಲ್ಲಿವರೆಗೆ ಪ್ರತಿರೋಧಕಗಳನ್ನು ತಾತ್ಕಾಲಿಕ ಔಷಧವಾಗಿ ಉಪಯೋಗಿಸಬಹುದು. ಇದು ವೈದ್ಯಕೀಯ ಸಿಬಂದಿ, ವೃದ್ಧರಿಗೆ ಪ್ರಯೋಜವಾಗುತ್ತದೆ. ಅಲ್ಲದೇ ಸಾಮಾನ್ಯ ಔಷಧಗಳಿಗೆ ಅಷ್ಟೊಂದು ಪ್ರತಿಕ್ರಿಯೆ ನೀಡದ ರೋಗಿಗಳಿಗೆ ಪ್ರಯೋಜವಾಗುತ್ತದೆ ಎಂದು ಹೇಳಲಾಗಿದೆ. ಸಂಶೋಧನೆ ಕುರಿತ ವರದಿಯನ್ನು “ಸೈನ್ಸ್’ ನಿಯತಕಾಲಿಕೆಯಲ್ಲಿ ಪ್ರಕಟಿಸಲಾಗಿದೆ. ರಕ್ತದ ಪ್ರತಿರೋಧಕಗಳ ಬಗ್ಗೆ ಇನ್ನಷ್ಟು ಪರೀಕ್ಷೆ ನಡೆಯಬೇಕಿದೆ. ದೊಡ್ಡ ಮಟ್ಟದಲ್ಲಿ ಪ್ರತಿರೋಧಕಗಳನ್ನು ಜನರಿಗೆ ನೀಡಿದಾಗ ಕೋವಿಡ್ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಪರೀಕ್ಷಿಸಬೇಕಿದೆ ಎಂದು ಹೇಳಿದ್ದಾರೆ. ಅಲ್ಲದೇ ಸೋಂಕಿನಿಂದ ಚೇತರಿಸಿಕೊಂಡವರ ರಕ್ತದಿಂದ ಪ್ರತಿರೋಧಕಗಳನ್ನು ತೆಗೆದು ನೀಡಿದಾಗ ಅದು ವೈರಸ್ ಜೀವಕೋಶಗಳ ಮೇಲೆ ಹಾನಿ ಮಾಡುವುದನ್ನು ತಡೆಯುತ್ತದೆ. ಇದು ರಕ್ತದಲ್ಲಿ ಸಂಚರಿಸುತ್ತ, ಹಲವು ವಾರಗಳ ಕಾಲ ವೈರಸ್ ಹಾನಿಮಾಡುವುದನ್ನು ತಪ್ಪಿಸುತ್ತದೆ ಎಂದು ಸಂಶೋಧನ ಲೇಖನದಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.