ಸುಡಾನ್: ನಿಯಂತ್ರಣಕ್ಕೆ ಬಾರದ ಕೋವಿಡ್
ದೇಶದಲ್ಲಿ 50 ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಾಧಿಸಿದೆ
Team Udayavani, Jun 23, 2020, 11:30 AM IST
ಸುಡಾನ್‌ನಲ್ಲಿ ಶಂಕಿತ ವ್ಯಕ್ತಿಯೋರ್ವನ ಸೋಂಕು ಪರೀಕ್ಷೆಗೆ ಗಂಟಲು ದ್ರವ ಸಂಗ್ರಹಿಸುತ್ತಿರುವುದು.
ಕರ್ಟೊಮ್: ವೈದ್ಯರಿಗಿಂತ ಅಧಿಕವಾಗಿ ಮಿಲಿಟರಿ ಜನರಲ್‌ಗಳಿರುವ ಸೌತ್ ಸುಡಾನ್ ದೇಶದಲ್ಲಿ ಈಗ ಮತ್ತೆ ಕೋವಿಡ್ ಹಾವಳಿ ನಿಯಂತ್ರಣಕ್ಕೆ ಬಾರದಂತಾಗಿದೆ. ಫೆಬ್ರವರಿ ತಿಂಗಳಲ್ಲಿ ಸೋಂಕು ಮೊದಲು ಇಲ್ಲಿ ಕಾಣಿಸಿಕೊಂಡಿದ್ದು, ಅನಂತರದಲ್ಲಿ ತೀವ್ರತೆ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಸೋಂಕು ಇಲ್ಲಿನ ಜನರಲ್ಲಿ ತಲ್ಲಣವನ್ನು ಹುಟ್ಟಿಸುತ್ತಿದೆ. ಆರ್ಥಿಕವಾಗಿ ತೀರಾ ಹಿಂದುಳಿದಿರುವ ಈ ದೇಶದಲ್ಲಿ ಸೋಂಕಿತರಿಗೆ ಶೀಘ್ರ ಚಿಕಿತ್ಸೆ ನೀಡುವ ವ್ಯವಸ್ಥೆಗಳೂ ಇಲ್ಲ. ಇಲ್ಲಿ ಮೂಲ ಸೌಕರ್ಯಗಳು ಅತೀ ಕಡಿಮೆಯಿದ್ದು, ಸರಕಾರೇತರ ಸಂಸ್ಥೆಗಳು ಅಗತ್ಯ ವಸ್ತುಗಳನ್ನು ಪೂರೈಸುತ್ತದೆ. ಆದ್ದರಿಂದಲೇ ಈ ದೇಶ ಕೋವಿಡ್ ವಿರುದ್ಧ ಹೋರಾಡುವ ಸಾಧ್ಯತೆ ತೀರಾ ಕಡಿಮೆ.
ವಿಶ್ವ ಸಂಸ್ಥೆಯ ಮಾಹಿತಿಯ ಪ್ರಕಾರ ಸುಡಾನ್‌ನಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ. ಈಗಾಗಲೇ ಇಲ್ಲಿ 1,900 ಸೋಂಕಿತರಿದ್ದು, ಅವರಲ್ಲಿ 50 ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಬಾಧಿಸಿದೆ. ಈಗಾಗಲೇ 3 ಮಂದಿ ಮೃತಪಟ್ಟಿದ್ದು, ಸೋಂಕಿನ ಮೂಲವೂ ಪತ್ತೆಯಾಗುತ್ತಿಲ್ಲ. ಹೆಚ್ಚಿನ ಆರೋಗ್ಯ ಕಾರ್ಯಕರ್ತರೂ ಸೋಂಕಿಗೆ ಒಳಗಾಗಿರುವ ಶಂಕೆಯಿದೆ. ವೈದ್ಯರ ಮಾಹಿತಿಯ ಪ್ರಕಾರ ಸೋಂಕು ಯಾವ ಕ್ಷಣದಲ್ಲಿ ಬೇಕಾದರೂ ಸಾಮೂಹಿಕವಾಗಿ ಹರಡಬಹುದು. ಸೋಂಕು ಪತ್ತೆ ಪರಿಕರ, ಸುರಕ್ಷತಾ ಸಾಧನಗಳ ಕೊರತೆಯಿಂದ ಇಲ್ಲಿ ಹೆಚ್ಚು ಪರೀಕ್ಷೆ ಮಾಡುವ ವ್ಯವಸ್ಥೆಯಿಲ್ಲ. ಸೋಂಕು ಪತ್ತೆಗೆ ಕನಿಷ್ಠ ಒಂದು ವಾರದ ಅಗತ್ಯವಿದೆ. ಜನರಿಗೆ ರೋಗದ ತೀವ್ರತೆಯ ಬಗ್ಗೆ ಅರಿವಿದೆ. ಕಳೆದ ತಿಂಗಳಿನಲ್ಲಿ ಸರಕಾರ ಇಲ್ಲಿ ಲಾಕ್‌ಡೌನ್ ನಿಯಮಗಳನ್ನು ಸಡಿಲಿಕೆ ಮಾಡಿತ್ತು. ಜನರಿಗೆ ರೋಗಕ್ಕಿಂತಲೂ ಹೆಚ್ಚಾಗಿ ಹಸಿವಿನ ಭಯವಿದೆ ಎಂದು ತಿಳಿದ ಮೇಲೆ ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳು ಆರಂಭವಾಗಿದ್ದವು.
ತೀರಾ ಹಿಂದುಳಿದ ಪ್ರದೇಶಗಳ್ಲಲೂ ಸೋಂಕು ಹರಡಲು ಆರಂಭವಾಗಿದ್ದು, ಇಲ್ಲಿನ ಜನರಿಗೆ ಚಿಕಿತ್ಸೆ ನೀಡಲು ಯಾವುದೇ ವ್ಯವಸ್ಥೆಗಳಿಲ್ಲ. ಆಸ್ಪತ್ರೆಗಳು ಈಗಾಗಲೇ ತಮ್ಮಲ್ಲಿ ಬೆಡ್‌ಗಳು ಪೂರ್ತಿಯಾಗಿವೆ ಎಂದು ಹೇಳುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.