ಕೊವಿಡ್ ಸೋಂಕು ಪತ್ತೆ: ಬಡವರಿಗಷ್ಟೇ ಉಚಿತ ಪರೀಕ್ಷೆ: ಸುಪ್ರೀಂ
Team Udayavani, Apr 14, 2020, 5:41 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಬಡವರು ಹಾಗೂ ನಿರ್ಗತಿಕರು ಮಾತ್ರ ಖಾಸಗಿ ಪ್ರಯೋಗಾಲಯಗಳು ನಡೆಸುವ ಕೋವಿಡ್ 19 ವೈರಸ್ ಸೋಂಕಿನ ಉಚಿತ ಪರೀಕ್ಷೆಯ ಪ್ರಯೋಜನ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.
ಉಚಿತ ಪರೀಕ್ಷೆಗೆ ಸಂಬಂಧಿಸಿದಂತೆ ಈ ಮೊದಲು ತಾನು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಡಾ. ಕುಶಾಲ್ ಕಾಂತ್ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಆರ್ಥಿಕವಾಗಿ ದುರ್ಬಲವಾಗಿರುವ ಸಮುದಾಯಗಳಿಗೆ ಮತ್ತು ಬಡತನ ರೇಖೆಗಿಂತಲೂ ಕೆಳಗಿರುವ ಕಡುಬಡವರಿಗೆ ಮಾತ್ರ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್ ಸೋಂಕಿನ ಉಚಿತ ಪರೀಕ್ಷೆ ನಡೆಸಬೇಕು. ಉಳಿದವರು ಹಣ ಕೊಟ್ಟು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆದೇಶಿಸಿದೆ.
ಪಿಎಂಜೆಎವೈ ಫಲಾನುಭವಿಗಳಿಗೆ ಖಾಸಗಿ ಪ್ರಯೋಗಾಲಯಗಳಲ್ಲಿ ಈಗಾಗಲೇ ಕೋವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಮಾಣಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಬಳಿಕ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು, ಖಾಸಗಿ ಪ್ರಯೋಗಾಲಯಗಳಲ್ಲಿ ಈಗಾಗಲೇ ಉಚಿತ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಕುರಿತು ಸಲ್ಲಿಸಲಾಗಿ ರುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಐಸಿಎಂಆರ್ ನ್ಯಾಯಾಲಯವನ್ನು ಕೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.