ಪ್ರವಾಸೋದ್ಯಮ ಆರಂಭ: ಕ್ಯೂಬಾ ಸರಕಾರ ಚಿಂತನೆ

ಸದ್ಯ ಬೀಚ್‌ ಪ್ರವಾಸೋದ್ಯಮಕ್ಕೆ ಸೀಮಿತ ಅವಕಾಶ ನೀಡಲು ನಿರ್ಧರಿಸಲಾಗಿದೆ

Team Udayavani, Jun 12, 2020, 12:45 PM IST

ಪ್ರವಾಸೋದ್ಯಮ ಆರಂಭ: ಕ್ಯೂಬಾ ಸರಕಾರ ಚಿಂತನೆ

ಹವಾನಾ: ಕೋವಿಡ್‌ ಮುಂಜಾಗ್ರತೆಯಾಗಿ ನಗರದಲ್ಲಿ ಮನೆಗಳಿಗೆ ಆರೋಗ್ಯ ಸಿಬಂದಿ ಭೇಟಿ ನೀಡುತ್ತಿದ್ದಾರೆ.

ಕ್ಯೂಬಾ: ಅಂತಾರಾಷ್ಟ್ರೀಯ ಟೂರಿಸಂ ಆರಂಭವಾದ ಬಳಿಕ ತನ್ನ ದೇಶಕ್ಕೆ ಬರುವ ಎಲ್ಲ ಪ್ರವಾಸಿಗರನ್ನು ಕೊರೊನಾ ವೈರಸ್‌ ಪತ್ತೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಕ್ಯೂಬಾದ ಪ್ರಧಾನಿ ಮನಿಯಲ್‌ ಮೆರೇರೋ ಕ್ರೂಜ್‌ ಅವರು ಬುಧವಾರ ಹೇಳಿದ್ದಾರೆ. ದೇಶದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಭಾಗಶಃ ತೆರವು ಮಾಡುವ ಬಗ್ಗೆ ಘೋಷಿಸಿದ ಅವರು, ಬೀಚ್‌ ಪ್ರವಾಸೋದ್ಯಮಕ್ಕೆ ಸೀಮಿತ ಅವಕಾಶ ನೀಡಲಾಗುವುದು ಎಂದು ಹೇಳಿದರು.

ಪ್ರವಾಸೋದ್ಯಮ ಪುನರಾರಂಭಕ್ಕೆ ಸಮಯಮಿತಿ ನಿಗದಿಗೊಳಿಸದ ಅವರು, ಪ್ರವಾಸಿಗರು ತಂಗುವ ಹೊಟೇಲ್‌ಗ‌ಳಲ್ಲಿ ಸಾಂಕ್ರಾಮಿಕ ಆರೋಗ್ಯ ತಜ್ಞರು ನಿಗಾ ಇರಿಸಲಿದ್ದಾರೆ.ಪ್ರವಾಸಿಗರು ಹವಾನಕ್ಕೆ ಭೇಟಿ ನೀಡುವುದನ್ನು ಕೂಡ ನಿರ್ಬಂಧಿಸಲಾಗುವುದು. ಪ್ರವಾಸೋದ್ಯಮವನ್ನು ಮೊದಲು ದೇಶದ ಪ್ರಜೆಗಳಿಗೆ ಮುಕ್ತಗೊಳಿಸಿ, ಆ ಬಳಿಕ ವಿದೇಶಿಯರ ಆಗಮನಕ್ಕೆ ಅವಕಾಶ ನೀಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕೋವಿಡ್‌ ಹೋರಾಟದಲ್ಲಿ ಜಯ
ಈ ಪುಟ್ಟ ಕೆರಿಬಿಯನ್‌ ದ್ವೀಪವು ಅತಿ ಕಡಿಮೆ ಕೋವಿಡ್ ಸೋಂಕಿತರನ್ನು ಹೊಂದಿತ್ತು ಹಾಗೂ ಕೊರೊನಾಮುಕ್ತವಾಗುವ ದಿನಗಳು ಹತ್ತಿರದಲ್ಲಿದೆ.ಹೊಸ ಲಾಕ್‌ಡೌನ್‌ ಯೋಜನೆ ಬಗ್ಗೆ ತಿಳಿಸಿದ ಪ್ರಧಾನಿ, ದೇಶದ ಸಾರ್ವಜನಿಕ ಈಜುಕೊಳಗಳು ಈ ಬಾರಿಯ ಬೇಸಗೆಗೆ ಶೇ. 30ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯಾರಂಭ ಮಾಡಲಿದೆ. ಸಾಮಾಜಿಕ ಅಂತರ ಕಾಪಾಡುವ ಷರತ್ತಿನೊಂದಿಗೆ ಸ್ಥಳೀಯಾಡಳಿತ ನಿಗಾದಲ್ಲಿ ಬೀಚುಗಳು ಪ್ರವಾಸಿಗರಿಗೆ ಮುಕ್ತವಾಗಲಿವೆ. ಆದರೆ ಸೋಂಕು ಹರಡುವುದನ್ನು ತಡೆಯುವ ಭಾಗವಾಗಿ ಈ ಬಾರಿ ಬೀಚುಗಳಲ್ಲಿ ಬೇಸಗೆ ಹಬ್ಬಗಳನ್ನು ಸರಕಾರ ಆಯೋಜಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ನಡುವೆ ಶಾಲೆಗಳನ್ನು ಸೆಪ್ಟಂಬರ್‌ ಮತ್ತು ನವೆಂಬರ್‌ನಲ್ಲಿ ಎರಡು ಹಂತಗಳಲ್ಲಿ ತೆರೆಯಲು ಸರಕಾರ ನಿರ್ಧರಿಸಿದೆ. ಸಾರ್ವಜನಿಕ ಹಾಗೂ ಖಾಸಗಿ ವಾಹನ ಸಂಚಾರವು ಕ್ರಮೇಣ ದೇಶವ್ಯಾಪಿಯಾಗಿ ಪುನರಾರಂಭವಾಗಲಿದೆ. ಸಾರ್ವಜನಿಕ ಸ್ಥಳಗಳು ಹಾಗೂ ಜನರು ಹತ್ತಿರದ ಸಂಪರ್ಕದಲ್ಲಿರುವಲ್ಲೆಲ್ಲ ಮಾಸ್ಕ್ ಬಳಕೆ ಕಡ್ಡಾಯವಾಗಿದೆ ಎಂದೂ ಅವರು ಹೇಳಿದ್ದಾರೆ. ದೇಶದಲ್ಲಿ ಸೋಂಕು ಪತ್ತೆಯಾದ ಕೂಡಲೇ ಗಡಿಗಳನ್ನು ಹಾಗೂ ಶಾಲೆಗಳನ್ನು ಮುಚ್ಚುವ ಮೂಲಕ ಸರಕಾರವು ವೈರಸ್‌ ಹೆಚ್ಚು ಹರಡದಂತೆ ನೋಡಿಕೊಂಡಿತ್ತು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.