ಕೋವಿಡ್‌ ಪರಿಣಾಮ ತಿಂಗಳು ಕಳೆದರೂ ಬಂದಿಲ್ಲ ರುಚಿ ಮತ್ತು ವಾಸನೆ ಗ್ರಹಣ ಸಾಮರ್ಥ್ಯ

ಕೋವಿಡ್‌ ವೈರಸ್‌ನಿಂದಾಗಿ ರೋಗಿಗಳಲ್ಲಿ ಕೆಲವರಿಗೆ ರುಚಿ-ವಾಸನೆ ಗ್ರಹಿಕೆ ಸಾಮರ್ಥ್ಯ ಕ್ಷೀಣ

Team Udayavani, Jul 6, 2020, 12:49 PM IST

ಕೋವಿಡ್‌ ಪರಿಣಾಮ ತಿಂಗಳು ಕಳೆದರೂ ಬಂದಿಲ್ಲ ರುಚಿ ಮತ್ತು ವಾಸನೆ ಗ್ರಹಣ ಸಾಮರ್ಥ್ಯ

ಗುರುಗ್ರಾಮ: ಇಲ್ಲಿನ ಕೋವಿಡ್‌ ಪರೀಕ್ಷಾ ಕೇಂದ್ರದಲ್ಲಿ ಸೋಂಕು ಪರೀಕ್ಷೆಗೆ ವ್ಯಕ್ತಿಯೊಬ್ಬರ ಗಂಟಲ ದ್ರವ ಮಾದರಿ ಪಡೆಯಲಾಯಿತು.

ರೋಮ್‌: ದಿನ ಕಳೆದಂತೆ ಕೋವಿಡ್‌-19 ಸೋಂಕು ಪ್ರಕರಣಗಳು ಅಧಿಕವಾದಂತೆ ವೈರಸ್‌ ಪರಿಣಾಮದ ಪಟ್ಟಿಯೂ ಹೆಚ್ಚಾಗುತ್ತಿದೆ. ಬಿಕ್ಕಟ್ಟು ಪ್ರಾರಂಭವಾದಗಿನಿಂದ ಸೋಂಕು ಮೂಲ ಪತ್ತೆ ಸೇರಿದಂತೆ ಕೋವಿಡ್‌-19 ಸಾಂಕ್ರಾಮಿಕ ಪಿಡುಗಿನ ಬಗ್ಗೆ ನಾನಾ ದೇಶಗಳ ಸಂಶೋಧಕರು ತಂಡೋಪತಂಡವಾಗಿ ಅಧ್ಯಯನ ನಡೆಸುತ್ತಿದ್ದು, ಸೋಂಕಿನ ಕುರಿತಾಗಿ ಪ್ರತಿದಿನ ಒಂದಲ್ಲ ಒಂದು ವಿಭಿನ್ನ ಮಾಹಿತಿ ಹೊರ ಬೀಳುತ್ತಲೇ ಇದೆ. ಇದೀಗ ಈ ಡೆಡ್ಲಿ ವೈರಸ್‌ಗೆ ತುತ್ತಾಗಿರುವ ಸೋಂಕಿತರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದ್ದು, ಹತ್ತು ಕೋವಿಡ್ ರೋಗಿಗಳಲ್ಲಿ ಓರ್ವರಿಗೆ ರುಚಿ ಮತ್ತು ವಾಸನೆ ಗ್ರಹಿಕೆ ತಿಂಗಳು ಕಳೆದರೂ ಮರಳಿ ಬರುವುದು ಕಷ್ಟ ಸಾಧ್ಯ ಎಂದು ಅಧ್ಯಯನದಿಂದ ತಿಳಿದುಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ಸೋಂಕು ಗುಣಲಕ್ಷಣಗಳ ಪಟ್ಟಿಗೆ ಸೇರ್ಪಡೆಯಾಗಿದ್ದ ವಾಸನೆ ಗ್ರಹಿಕೆ ಮತ್ತು ರುಚಿ ಸಾಮರ್ಥ್ಯ ಕುಂದುವಿಕೆ ಗುಣಲಕ್ಷಣಗಳ ಮೇಲೆ ಅಧ್ಯಯನ ನಡೆಸಿದ್ದು, ವರದಿಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಇಟಾಲಿಯನ್‌ ಸಂಶೋಧಕರ ತಂಡವೊಂದು ಕೊರೊನಾ ಸೋಂಕಿಗೆ ತುತ್ತಾದ ರೋಗಿಗಳು ತಿಂಗಳ ನಂತರವೂ ರುಚಿ ಮತ್ತು ವಾಸನೆ ಗ್ರಹಿಸಲು ಹೋರಾಟ ನಡೆಸುತ್ತಿರುವುದಾಗಿ ಕಂಡುಕೊಂಡಿದ್ದು, ವರದಿಯು ಜೆಎಎಂಎ ಒಟೋಲರಿಂಗೋಲಜಿ ಹೆಡ್‌ ಆ್ಯಂಡ್‌ ನೆಕ್‌ ಸರ್ಜರಿ ಜರ್ನಲ್‌ನಲ್ಲಿ ಪ್ರಕಟವಾಗಿದೆ.

ಇನ್ನು ಸುಮಾರು 187 ಇಟಾಲಿಯನ್‌ ಸೋಂಕಿತರನ್ನು ಸಂಶೋಧನೆಗೆ ಒಳಪಡಿಸಲಾಗಿದ್ದು, ಎಲ್ಲ ಸೋಂಕಿತರ ಆರೋಗ್ಯವೂ ಆಸ್ಪತ್ರೆಗೆ ದಾಖಲಿಸುವಷ್ಟು ಉಲ್ಬಣವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಒಂದು ತಿಂಗಳಿಂದ ಸೋಂಕಿಗೆ ಒಳಗಾದವರನ್ನು ಸಂಶೋಧನೆಯಲ್ಲಿ ತಮ್ಮ ವಾಸನೆ ಮತ್ತು ರುಚಿಯ ಗ್ರಹಿಕೆಯನ್ನು ಪ್ರಾಮಾಣೀಕರಿಸಲು ಹೇಳಲಾಗಿದ್ದು, ಅವರು ವಾಸನೆ ಗ್ರಹಿಕೆ ಸಾಮರ್ಥ್ಯ ಇನ್ನು ಮರಳಿ ಬಂದಿಲ್ಲ ಎಂದು ತಿಳಿದುಬಂದಿದೆ.

ಇದರಲ್ಲಿ ಶೇ. 60 ರಷ್ಟು ಅಂದರೆ 113 ಮಂದಿಯಲ್ಲಿ ತಮ್ಮ ವಾಸನೆ ಮತ್ತು ರುಚಿಯ ಗ್ರಹಿಕೆಯಲ್ಲಿ ಬದಲಾವಣೆ ಕಂಡುಬಂದಿದೆ. ಇವರಲ್ಲಿ 55 ಮಂದಿ ಸಂಪೂರ್ಣ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ. 46 ಮಂದಿ ತಮ್ಮ ದೇಹದಲ್ಲಿ ಸುಧಾರಣೆ ಕಾಣುತ್ತಿರುವುದಾಗಿ ಹೇಳಿದ್ದಾರೆ. ಉಳಿದ 12 ಮಂದಿ ರೋಗದಿಂದ ದೇಹದಲ್ಲಿ ಬದಲಾವಣೆಯಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ ಕೇವಲ ಅರ್ಧದಷ್ಟು ಜನರು ಮಾತ್ರ ತಮ್ಮ ರುಚಿ ಮತ್ತು ವಾಸನೆಯನ್ನು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನುಳಿದ ಶೇ. 40 ಮಂದಿ ತಮ್ಮ ರೋಗ ಲಕ್ಷಣಗಳಲ್ಲಿ ಸುಧಾರಣೆ ಕಂಡಿದ್ದರೆ, 10 ರಷ್ಟು ಮಂದಿ ಸುಧಾರಣೆಯನ್ನೇ ಕಂಡಿಲ್ಲ. ಗಂಭೀರವಾದ ರೋಗ ಲಕ್ಷಣಗಳು ಕಂಡುಬಂದಿರುವ ಜನರ ಪರಿಸ್ಥಿತಿ ಸುಧಾರಿಸಲು ಬಹಳಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಪಡೋವಾ ಯೂನಿವರ್ಸಿಟಿಯ ಡಾ. ಪಾವೊಲೊ ಬಾಸ್ಕೊಲೊ ರಿಜೋ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

football

Football Ranking: ಭಾರತ ಒಂದು ಸ್ಥಾನ ಪ್ರಗತಿ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.