ರಾಜ್ಯದಲ್ಲಿ ಇಂದು 2228 ಹೊಸ ಸೋಂಕು ಪ್ರಕರಣ ; ಬೆಂಗಳೂರೇ ಹಾಟ್ ಸ್ಪಾಟ್!
ಬೆಂಗಳೂರು ನಗರ 1373, ದಕ್ಷಿಣ ಕನ್ನಡ 167, ಕಲಬುರಗಿ 85 ಧಾರವಾಡ 75 ಮತ್ತು ಉಡುಪಿ 22 ಪ್ರಕರಣ ಪತ್ತೆ
Team Udayavani, Jul 9, 2020, 7:55 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾವಿರ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದ ಕೋವಿಡ್ 19 ಸೋಂಕಿತರ ಸಂಖ್ಯೆ ಕಳೆದ ಎರಡು ದಿನಗಳಿಂದ ದ್ವಿಗುಣಗೊಳ್ಳುತ್ತಿದೆ.
ಇಂದೂ ಸಹ ರಾಜ್ಯದಲ್ಲಿ 2228 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಸಂಬಂಧಿತ 17 ಸಾವು ಸಂಭವಿಸಿದೆ.
ರಾಜ್ಯದಲ್ಲಿ ಇಂದು ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಪೈಕಿ ಅರ್ಧದಷ್ಟು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ವರದಿಯಾಗಿದ್ದು ಇಲ್ಲಿ ಇಂದು 1373 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈಗಾಗಲೇ ಇಲ್ಲಿ ಕೋವಿಡ್ 19 ಸಂಬಂಧಿ 177 ಸಾವು ಸಂಭವಿಸಿದೆ.
ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 17 ಜನ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಸಂಖ್ಯೆ 486ಕ್ಕೆ ಏರಿಕೆ ಆಗಿದೆ.
ಇದನ್ನೂ ಓದಿ: ಉಡುಪಿಯಲ್ಲಿಂದು 22 ಜನರಿಗೆ ಸೋಂಕು ದೃಢ: ಇನ್ನೂ ಬಾಕಿಯಿದೆ 2433 ವರದಿ!
ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 1373 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ಮಿತಿ ಮೀರುತ್ತಿದೆ. ಉಳಿದಂತೆ ದಕ್ಷಿಣ ಕನ್ನಡ, ಕಲಬುರಗಿ, ಧಾರವಾಡ, ಮೈಸೂರು, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಅತೀ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯಾದ್ಯಂತ ಒಟ್ಟು 957 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 31105 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 12833 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17782 ಇದೆ.
ಇದನ್ನೂ ಓದಿ: ಕೋವಿಡ್ ಕಾರ್ಯಪಡೆ : 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸರಕಾರಿ ನೌಕರರ ಮಾಹಿತಿ ಕೇಳಿದ ಸರಕಾರ
ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 486 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 457 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇಂದು ರಾಜ್ಯದಲ್ಲಿ ಒಟ್ಟು 20028 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 17568 ವರದಿಗಳು ನೆಗೆಟಿವ್ ಬಂದಿದೆ ಮತ್ತು 2228 ಪ್ರಕರಣಗಳು ಪಾಸಿಟಿವ್ ಆಗಿವೆ.
ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 779209 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 728887 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 31105 ವರದಿಗಳು ಪಾಸಿಟಿವ್ ಆಗಿವೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸ್ಪೋಟ : ಮತ್ತೆ 32 ಹೊಸ ಕೇಸ್ ಪತ್ತೆ!
ಬೆಂಗಳೂರು ನಗರ ಜಿಲ್ಲೆಯಲ್ಲಿ 1373 ಪಾಸಿಟಿವ್ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ – 167, ಕಲಬುರಗಿ – 85, ಧಾರವಾಡ – 75, ಮೈಸೂರು – 52, ಬಳ್ಳಾರಿ – 41, ದಾವಣಗೆರೆ – 40, ಶಿವಮೊಗ್ಗ – 37, ಬಾಗಲಕೋಟೆ – 36, ಕೋಲಾರ – 34, ಚಿಕ್ಕಬಳ್ಳಾಪುರ – 32, ತುಮಕೂರು – 27, ಮಂಡ್ಯ – 24, ಉತ್ತರ ಕನ್ನಡ – 23, ಉಡುಪಿ – 22, ಹಾಸನ – 21, ಹಾವೇರಿ – 18, ರಾಮನಗರ – 17, ಯಾದಗಿರಿ – 16, ರಾಯಚೂರು – 16, ಬೆಂಗಳೂರು ಗ್ರಾಮಾಂತರ – 16, ಬೀದರ್ – 15, ಚಾಮರಾಜನಗರ – 12, ಸೇರಿದಂತೆ ರಾಜ್ಯದ ಒಟ್ಟು 23 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ: ಚಾ.ನಗರ ಜಿಲ್ಲೆಯಲ್ಲಿ ಮತ್ತೊಬ್ಬ ಲ್ಯಾಬ್ ಟೆಕ್ನಿಷಿಯನ್ ಸೇರಿ 12 ಮಂದಿಗೆ ಸೋಂಕು
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 13882ಕ್ಕೆ ಏರಿಕೆಯಾಗಿದ್ದು, 2834 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 10870ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 177 ಸಾವು ಸಂಭವಿಸಿದೆ.
ಕಲಬುರಗಿಯಲ್ಲಿ ಒಟ್ಟು 1901 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1392 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 477 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 32 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1701ಕ್ಕೆ ಏರಿಕೆಯಾಗಿದ್ದುಇವರಲ್ಲಿ 686 ಸೋಂಕಿತರು ಗುಣಮುಖರಾಗಿದ್ದಾರೆ. 990 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 23 ಸಾವು ಸಂಭವಿಸಿದೆ.
ಇದನ್ನೂ ಓದಿ: ಮೈಸೂರು: ಅಂಬಾವಿಲಾಸವನ್ನೂ ಬಿಡದ ಕೋವಿಡ್ ಸೋಂಕು ; ಮೂರು ದಿನ ಅರಮನೆ ಬಂದ್!
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1488 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 665 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 783 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 40 ಸಾವು ಸಂಭವಿಸಿದೆ.
ಇನ್ನು ಉಡುಪಿ ಜಿಲ್ಲೆಯಲ್ಲಿ 1442 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1206 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 233 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.
ಯಾದಗಿರಿ ಜಿಲ್ಲೆಯಲ್ಲಿ 1043 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 872 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 170 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಬೀದರ್ ಜಿಲ್ಲೆಯಲ್ಲಿ 894 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 562 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 283 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿದರೆ ರಾಜ್ಯದಲ್ಲೇ ಇಲ್ಲಿ ಕೋವಿಡ್ 19 ಸಂಬಂಧಿತ ಎರಡನೇ ಅತೀ ಹೆಚ್ಚು, 49 ಸಾವು ಸಂಭವಿಸಿದೆ.
ಧಾರವಾಡ ಜಿಲ್ಲೆಯಲ್ಲಿ 832 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 293 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 512 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 27 ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.