ನಿಯಂತ್ರಣಕ್ಕೆ ಬರುತ್ತಿಲ್ಲ ಸೋಂಕು ; ರಾಜ್ಯದಲ್ಲಿಂದು 2738 ಪ್ರಕರಣ; 73 ಸಾವು; 839 ಚೇತರಿಕೆ
ಬೆಂಗಳೂರು ನಗರ 1315, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106 ಮತ್ತು ಉಡುಪಿ 53 ಪ್ರಕರಣ ಪತ್ತೆ
Team Udayavani, Jul 13, 2020, 8:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಿಗದ ರೀತಿಯಲ್ಲಿ ಸ್ಪೋಟಿಸುತ್ತಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಈಗಾಗಲೇ ಒಂದು ವಾರಗಳ ಲಾಕ್ ಡೌನ್ ಸ್ಥಿತಿಯನ್ನು ಘೋಷಿಸಲಾಗಿದೆ.
ಆದರೆ, ಭಾನುವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಪ್ರಕರಣಗಳ ವರದಿ ಇದೀಗ ಲಭ್ಯವಾಗಿದ್ದು ಈ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 2738 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಹಾಗೂ ಇದೇ ಅವಧಿಯಲ್ಲಿ ರಾಜ್ಯಾದ್ಯಂತ ಈ ಸೋಂಕಿಗೆ ಒಟ್ಟು 73 ಜನರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಮತ್ತೆ ಕೋವಿಡ್ 19 ಸೋಂಕಿತರ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಬೆಂಗಳೂರಿನಲ್ಲಿ ಇಂದು ಒಟ್ಟು 1315 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಆ ಬಳಿಕದ ಸ್ಥಾನದಲ್ಲಿ ಯಾದಗಿರಿ (162), ಮೈಸೂರು (151), ದಕ್ಷಿಣ ಕನ್ನಡ (131) ಮತ್ತು ಬಳ್ಳಾರಿ (106) ಜಿಲ್ಲೆಗಳಿವೆ.
ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 73 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಈ ಮಹಾಮಾರಿಗೆ ಬಲಿಯಾದವರ ಸಂಖ್ಯೆ 757ಕ್ಕೆ ಏರಿಕೆ ಆಗಿದೆ.
ಇಂದು ರಾಜ್ಯಾದ್ಯಂತ ಒಟ್ಟು 839 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 41581 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 16248 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24572 ಇದೆ.
ಇದನ್ನೂ ಓದಿ: ಕೋವಿಡ್ ಕಂಟಕಕ್ಕೆ ಕರಾವಳಿ ಬಂದ್: ದ. ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಗೆ ನಿರ್ಧಾರ
ಇಂದು ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 47 ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 6 ಹಾಗೂ ಧಾರವಾಡ ಜಿಲ್ಲೆಯಲ್ಲಿ 5 ಸೋಂಕಿತರು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಶಿವಮೊಗ್ಗ ಜಿಲ್ಲೆಯಲ್ಲಿ 3, ಬಾಗಲಕೋಟೆ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ತಲಾ ಇಬ್ಬರು ಈ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ತುಮಕೂರು, ದಾವಣಗೆರೆ, ಹಾಸನ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಕೋವಿಡ್ 19 ಸೋಂಕಿತರು ಇಂದು ಸಾವನ್ನಪ್ಪಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 757 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 545 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕುಂದಾಪುರದಲ್ಲಿ 163 ಬಾರಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕೇಸು ದಾಖಲು
ಬೆಂಗಳೂರು ನಗರ ಜಿಲ್ಲೆಯಲ್ಲಿ 1315 ಪಾಸಿಟಿವ್ ಪ್ರಕರಣ ಸೇರಿದಂತೆ, ಯಾದಗಿರಿ – 162, ಮೈಸೂರು – 151, ದಕ್ಷಿಣ ಕನ್ನಡ – 131, ಬಳ್ಳಾರಿ – 106, ಕಲಬುರಗಿ – 89, ವಿಜಯಪುರ 86, ಶಿವಮೊಗ್ಗ – 74, ಧಾರವಾಡ – 71, ಉಡುಪಿ – 53, ತುಮಕೂರು – 48, ರಾಯಚೂರು – 45, ದಾವಣಗೆರೆ – 45, ಚಿಕ್ಕಬಳ್ಳಾಪುರ – 42, ಉತ್ತರ ಕನ್ನಡ – 37, ಬಾಗಲಕೋಟೆ – 37, ಕೊಪ್ಪಳ – 31, ಮಂಡ್ಯ – 30, ಕೊಡಗು – 29, ಬೆಳಗಾವಿ – 27, ಹಾಸನ – 25, ಬೀದರ್ – 23, ಬೆಂಗಳೂರು ಗ್ರಾಮಾಂತರ – 21, ಕೋಲಾರ – 21, ಚಿಕ್ಕಮಗಳೂರು – 10 ಸೇರಿದಂತೆ ರಾಜ್ಯದ ಒಟ್ಟು 25 ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 17074 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 13952 ವರದಿಗಳು ನೆಗೆಟಿವ್ ಬಂದಿದೆ ಮತ್ತು 2738 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 856148 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 793561 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 41581 ವರದಿಗಳು ಪಾಸಿಟಿವ್ ಆಗಿವೆ.
ಇದನ್ನೂ ಓದಿ: ಚಾಮರಾಜನಗರ: ಕೋವಿಡ್ 19 ಸೋಂಕಿಗೆ ಎರಡನೇ ಬಲಿ
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 19702ಕ್ಕೆ ಏರಿಕೆಯಾಗಿದ್ದು, 4328 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 15052ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 321 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2353ಕ್ಕೆ ಏರಿಕೆಯಾಗಿದ್ದು ಇವರಲ್ಲಿ 821 ಸೋಂಕಿತರು ಗುಣಮುಖರಾಗಿದ್ದಾರೆ. 1489 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 41 ಸಾವು ಸಂಭವಿಸಿದೆ.
ಕಲಬುರಗಿಯಲ್ಲಿ ಒಟ್ಟು 2192 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1506 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 650 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 36 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1788 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1024 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 722 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 42 ಸಾವು ಸಂಭವಿಸಿದೆ.
ಇನ್ನು, ಉಡುಪಿ ಜಿಲ್ಲೆಯಲ್ಲಿ 1662 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1269 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 390 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.
ಯಾದಗಿರಿ ಜಿಲ್ಲೆಯಲ್ಲಿ 1450 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 894 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 555 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.
ಬೀದರ್ ಜಿಲ್ಲೆಯಲ್ಲಿ 1061 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 612 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 396 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿದರೆ ರಾಜ್ಯದಲ್ಲೇ ಇಲ್ಲಿ ಕೋವಿಡ್ 19 ಸಂಬಂಧಿತ ಎರಡನೇ ಅತೀ ಹೆಚ್ಚು ಅಂದರೆ 53 ಸಾವು ಸಂಭವಿಸಿದೆ.
ಧಾರವಾಡ ಜಿಲ್ಲೆಯಲ್ಲಿ 1159 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 418 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 703 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 38 ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.