ಮಂಗಳವಾರ ರಾಜ್ಯದಲ್ಲಿ 947 ಸೋಂಕು ಪ್ರಕರಣ ಪತ್ತೆ ; 20 ಬಲಿ

ಬೆಂಗಳೂರಿನಲ್ಲಿ 503 ; ದಕ್ಷಿಣ ಕನ್ನಡ 44, ಉಡುಪಿ 09, ಬಳ್ಳಾರಿ 61 ಪಾಸಿಟಿವ್ ಪ್ರಕರಣ ದಾಖಲು

Team Udayavani, Jun 30, 2020, 7:51 PM IST

ಮಂಗಳವಾರ ರಾಜ್ಯದಲ್ಲಿ 947 ಸೋಂಕು ಪ್ರಕರಣ ಪತ್ತೆ ; 20 ಬಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕಳೆದ ಎರಡು ದಿನಗಳಿಂದ ಸಾವಿರದ ಗಡಿ ದಾಟುತ್ತಿದ್ದ ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಂದು ಕೊಂಚ ಇಳಿಮುಖಗೊಂಡಿದೆ.

ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ 503 ಪ್ರಕರಣ ಸಹಿತ ರಾಜ್ಯದಲ್ಲಿ ಇಂದು ಒಟ್ಟಾರೆ 947 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ ಮತ್ತು ಇಂದು ಒಂದೇ ದಿನ ಕೋವಿಡ್ ಸೋಂಕಿನ ಕಾರಣದಿಂದ 20 ಜನ ಸಾವನ್ನಪ್ಪಿದ್ದಾರೆ.

ಇಂದೂ ಸಹ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರವೇ ಮುಂಚೂಣಿಯಲ್ಲಿದೆ. ಇನ್ನುಳಿದಂತೆ ಬಳ್ಳಾರಿ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು ರಾಜ್ಯಾದ್ಯಂತ 235 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಇಂದು ರಾಜ್ಯದಲ್ಲಿ ಕೋವಿಡ್ 19 ಸೋಂಕಿಗೆ ಒಟ್ಟು 20 ಜನರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯೊಂದರಲ್ಲೇ ಇಂದು ಕೋವಿಡ್ ಸಂಬಂಧಿ 06 ಸಾವು ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 04 ಸಾವು ಸಂಭವಿಸಿದ್ದರೆ. ಹಾವೇರಿ, ವಿಜಯಪುರ, ‍ಧಾರವಾಡ ಜಿಲ್ಲೆಗಳಲ್ಲಿ ತಲಾ 02, ಕೋಲಾರ, ದಾವಣಗೆರೆ, ಬೆಳಗಾವಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ತಲಾ 01 ಸಾವು ಸಂಭವಿಸಿದೆ.

ರಾಜ್ಯದಲ್ಲಿ ಜೂನ್ 30 ಮಂಗಳವಾರದವರೆಗೆ 15242 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 7918 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 7074 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 246 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 271 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 503 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ – 61, ಹಾವೇರಿ – 49, ದಕ್ಷಿಣ ಕನ್ನಡ – 44, ಉತ್ತರ ಕನ್ನಡ – 40, ವಿಜಯಪುರ – 39, ಶಿವಮೊಗ್ಗ – 22, ಬೆಂಗಳೂರು ಗ್ರಾಮಾಂತರ – 21, ಬೀದರ್ – 17, ಧಾರವಾಡ – 17, ಹಾಸನ – 16, ಕಲಬುರಗಿ – 15, ರಾಯಚೂರು – 15, ಚಿಕ್ಕಬಳ್ಳಾಪುರ – 13, ದಾವಣಗೆರೆ – 12, ರಾಮನಗರ – 12 ಹಾಗೂ ಚಿಕ್ಕಮಗಳೂರು – 10 ಇವಿಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 4555ಕ್ಕೆ ಏರಿಕೆಯಾಗಿದ್ದು, 543 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 3916 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 95 ಸಾವುಗಳು ಸಂಭವಿಸಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.