COVID-19 ಕಳವಳ- ಆ.13: 6706 ಹೊಸ ಪ್ರಕರಣಗಳೊಂದಿಗೆ 2ಲಕ್ಷ ದಾಟಿದ ಸೋಂಕು; 121242 ಚೇತರಿಕೆ


Team Udayavani, Aug 13, 2020, 8:14 PM IST

COVID-19 ಕಳವಳ- ಆ.13: 6706 ಹೊಸ ಪ್ರಕರಣಗಳೊಂದಿಗೆ 2ಲಕ್ಷ ದಾಟಿದ ಸೋಂಕು; 121242 ಚೇತರಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಬುಧವಾರ ಸಾಯಂಕಾಲದಿಂದ ಗುರುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6706 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8609 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 103 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 2ಲಕ್ಷದ ಗಡಿ ದಾಟಿದ್ದು, ನಮ್ಮಲ್ಲಿ ಒಟ್ಟು 2,03,200 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ, 1,21,242 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 78,337 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3613 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 727 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜ ನಗರ: ಸೋಂಕಿಗೆ ಕೋವಿಡ್ ಯೋಧ ಬಲಿ ; ASI ಬಲಿ ತೆಗೆದುಕೊಂಡ ಮಹಾಮಾರಿ

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1893 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (522), ಬಳ್ಳಾರಿ (445), ಉಡುಪಿ (402), ದಾವಣಗೆರೆ (328), ಬೆಳಗಾವಿ (288), ಕಲಬುರಗಿ (285), ಧಾರವಾಡ (257), ದಕ್ಷಿಣ ಕನ್ನಡ (246), ರಾಯಚೂರು (181), ಕೊಪ್ಪಳ (148), ಬಾಗಲಕೋಟೆ (143), ಬೀದರ್ (143), ಮಂಡ್ಯ (130), ಹಾಸನ (129), ವಿಜಯಪುರ (121), ಚಿಕ್ಕಮಗಳೂರು (111) ಮತ್ತು ಶಿವಮೊಗ್ಗ (105) ಜಿಲ್ಲೆಗಳಿವೆ.

ಇನ್ನುಳಿದಂತೆ, ಗದಗ (98), ಹಾವೇರಿ (96), ತುಮಕೂರು (85), ಯಾದಗಿರಿ (83), ಕೋಲಾರ (77), ಬೆಂಗಳೂರು ಗ್ರಾಮಾಂತರ (70), ಚಿತ್ರದುರ್ಗ (67), ಉತ್ತರ ಕನ್ನಡ (64), ಚಾಮರಾಜನಗರ (56), ಕೊಡಗು (55), ರಾಮನಗರ (53) ಮತ್ತು ಚಿಕ್ಕಬಳ್ಳಾಪುರ (25) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 27,296 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 28,703 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 55,999 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 4,34,864 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 14,47,452 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು, ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 18,82,316 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 81,733ಕ್ಕೆ ಏರಿಕೆಯಾಗಿದ್ದು, 47,246 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 33,148ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1338 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 12,440 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6671 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5630 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 139 ಸಾವು ಸಂಭವಿಸಿದೆ.

ಮೈಸೂರು ಜಿಲ್ಲೆಯಲ್ಲಿ 8989 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5418 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3297 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 274 ಸಾವು ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8066ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 5864 ಸೋಂಕಿತರು ಗುಣಮುಖರಾಗಿದ್ದಾರೆ. 1952 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 248 ಸಾವು ಸಂಭವಿಸಿದೆ. ಬೆಂಗಳೂರು ನಗರ (1338) ಹಾಗೂ ಮೈಸೂರು (274) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.

ಕಲಬುರಗಿಯಲ್ಲಿ ಒಟ್ಟು 8122 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 5774 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 2194 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 154 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 7174 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4138 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2966 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 70 ಸಾವಿನ ಪ್ರಕರಣಗಳು ದಾಖಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ 6928 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4325 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2389 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 214 ಸಾವು ಸಂಭವಿಸಿದೆ.

ಬೆಳಗಾವಿ ಜಿಲ್ಲೆಯಲ್ಲಿ 6624 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 2885 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3626 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 113 ಸಾವು ಸಂಭವಿಸಿದೆ.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.