ಪಾದರಾಯನಪುರ ಗಲಭೆ ಆರೋಪಿಗಳಿಬ್ಬರಿಗೆ ಸೋಂಕು ; ರಾಮನಗರ ಜೈಲಿನಲ್ಲಿ ಹೈ ಅಲರ್ಟ್
Team Udayavani, Apr 23, 2020, 11:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ಮೊನ್ನೆ ನಡೆದಿದ್ದ ಗಲಭೆ ಸಂಬಂಧ ಬಂಧಿತರಾಗಿ ರಾಮನಗರ ಕಾರಾಗೃಹದಲ್ಲಿರಿಸಲಾಗಿರುವ 121 ಆರೋಪಿಗಳ ಪೈಕಿ ಇಂದು ಇಬ್ಬರಲ್ಲಿ ಕೋವಿಡ್ 19 ವೈರಸ್ ಸೋಂಕು ಪಾಸಿಟಿವ್ ವರದಿಯಾಗಿದೆ. ಇದು ಜೈಲಿನಲ್ಲಿರುವ ಖೈದಿಗಳ ಆತಂಕಕ್ಕೆ ಕಾರಣವಾಗಿದೆ.
ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೋವಿಡ್ 19 ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ಈ ಕಾರಣದಿಂದ ತಕ್ಷಣವೇ ಜೈಲಿನಲ್ಲಿರುವ ಇತರೇ ಗಲಭೆ ಆರೋಪಿಗಳನ್ನು ಸ್ಥಳಾಂತರಿಸದಿದ್ದರೆ ಶುಕ್ರವಾರದಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೋವಿಡ್ 19 ವೈರಸ್ ಸೋಂಕು ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್ ಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ರಾಮನಗರ ಕಾರಾಗೃಹವನ್ನು ಕ್ವಾರಂಟೈನಲ್ಲಿ ಇಡಬೇಕು. ಇಲ್ಲದಿದ್ದರೆ ಶುಕ್ರವಾರದಿಂದಲೇ ಪ್ರತಿಭಟನೆ ನಡೆಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.