ವಿದೇಶಗಳಲ್ಲಿರುವ ಜಿಲ್ಲೆಯವರ ನೆರವಿಗೆ Help Line; ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌

ಉದಯವಾಣಿ ಫೋನ್‌ ಇನ್ : ಎಲ್ಲಿದ್ದೀರೋ ಅಲ್ಲೇ ಇರಿ, ಸುರಕ್ಷಿತವಾಗಿರಿ, ಕ್ಷೇಮವಾಗಿರಿ

Team Udayavani, Apr 22, 2020, 5:28 AM IST

ವಿದೇಶಗಳಲ್ಲಿರುವ ಜಿಲ್ಲೆಯವರ ನೆರವಿಗೆ Help Line; ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌

ಉದಯವಾಣಿ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಅವರು ಭಾಗವಹಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು.

ದಕ್ಷಿಣ ಕನ್ನಡ ಮತ್ತು ಉಡುಪಿಯ ಜನತೆಯೂ ಲಾಕ್‌ಡೌನ್‌ ನಿಯಮ ಪಾಲಿಸುತ್ತಿದ್ದಾರೆ. ಇಂದು, ಎಪ್ರಿಲ್‌ 21ರಂದು ಕೊನೆಗೊಳ್ಳಬೇಕಿದ್ದ ನಿರ್ಬಂಧ ಮೇ 3ರ ವರೆಗೂ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಇರಬಹುದಾದ ಸಂಶಯ ಮತ್ತು ಸಮಸ್ಯೆಗಳ ಕುರಿತು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದಲೇ ವಿವರಣೆ ಪಡೆಯಲು ನಾಗರಿಕರಿಗೆ ಅವಕಾಶ ಕಲ್ಪಿಸಲಾಯಿತು. ಈ ಸಂಬಂಧ ಏರ್ಪಡಿಸಲಾಗಿದ್ದ ನೇರ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಎರಡೂ ಜಿಲ್ಲೆಗಳಿಂದ ಬಂದ ಹಲವಾರು ಪ್ರಶ್ನೆಗಳಿಗೆ ಅನುಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಿಂಧೂ ಬಿ. ರೂಪೇಶ್‌ ಮತ್ತು ಉಡುಪಿಯ ಜಿ. ಜಗದೀಶ್‌ ಉತ್ತರಿಸಿದರು.

ಮಂಗಳೂರು: ಕೊಲ್ಲಿ ಸಹಿತ ಹೊರದೇಶಗಳಲ್ಲಿ ಕೋವಿಡ್ 19 ವೈರಸ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ದಕ್ಷಿಣ ಕನ್ನಡದ ನಿವಾಸಿಗಳಲ್ಲಿ ಆತ್ಮಸ್ಥೈರ್ಯ ತುಂಬಲು ಹೆಲ್ಪ್ ಲೈನ್‌ ಸ್ಥಾಪಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಹೇಳಿದ್ದಾರೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಉದಯವಾಣಿ ಮಂಗಳೂರು ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಫೋನ್‌-ಇನ್‌ ಸಂದರ್ಭ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಲಾಕ್‌ಡೌನ್‌ ತೆರವಿನ ಬಳಿಕದ ಸವಾಲು
ಲಾಕ್ ‌ಡೌನ್‌ ಮುಗಿದು ವಿಮಾನಯಾನ ಸೇವೆ ಆರಂಭಗೊಂಡರೆ ವಿದೇಶಗಳಲ್ಲಿ ಇರುವ ದಕ್ಷಿಣ ಕನ್ನಡಿಗರು ವಾಪಸಾಗುವ ಸಾಧ್ಯತೆಗಳಿದ್ದು, ಈ ಪರಿಸ್ಥಿತಿ ಎದುರಿಸುವುದು ಜಿಲ್ಲಾಡಳಿತಕ್ಕೆ ಸವಾಲು ಎಂದರು.

ಹೊರ ದೇಶಗಳಿಂದ ಎಷ್ಟು ಜನ, ಯಾವಾಗ ಬರಬಹುದು ಎಂಬ ಬಗ್ಗೆ ಅಂದಾಜು ನಡೆಸಬೇಕಿದೆ. ಆದರೆ ಇದು ರಾಷ್ಟ್ರಮಟ್ಟದ ವಿಷಯವಾಗಿದ್ದು, ಕೇಂದ್ರ ಸರಕಾರವೇ ತೀರ್ಮಾನಿಸಬೇಕು. ಮುಂದೆಯೂ ವಿದೇಶಗಳಿಂದ ಬರುವವರನ್ನು ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇರಿಸುವುದು ಅನಿವಾರ್ಯವಾಗಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.

ವಲಸೆ ಕಾರ್ಮಿಕರ ಸಮಸ್ಯೆಗಳ ವಿಚಾರವಾಗಿ, ಜಿಲ್ಲೆಯಲ್ಲಿರುವ ಹೊರ ಜಿಲ್ಲೆ, ರಾಜ್ಯಗಳ ಕಾರ್ಮಿಕರು ಇಲ್ಲಿಂದ ತೆರಳಲು ಮತ್ತು ಅಲ್ಲಿಂದ ಇಲ್ಲಿಗೆ ಬರಲು ಕೋರುತ್ತಿದ್ದಾರೆ. ಆದರೆ ಸದ್ಯ ಇದು ಅಸಾಧ್ಯ. ಅವರು ಸ್ವಲ್ಪ ದಿನ ಕಾಯಬೇಕು.

ಇಲ್ಲಿರುವ ಹೊರ ರಾಜ್ಯ, ಜಿಲ್ಲೆಗಳ ಕಾರ್ಮಿಕರಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು – ವ್ಯವಸ್ಥೆ ಕಲ್ಪಿಸಿದೆ. ಅವರ ಅಹವಾಲುಗಳಿಗೆ ಸ್ಪಂದಿಸಲು ಆಪ್ತ ಸಮಾಲೋಚಕರನ್ನು ನೇಮಿಸಿದೆ ಎಂದರು.

ಪರೀಕ್ಷಾ ಕೇಂದ್ರದ ಬಗ್ಗೆ ಸಂಶಯ ಬೇಡ
ವೆನ್ಲಾಕ್‌ನ ಕೋವಿಡ್ ಪರೀಕ್ಷಾ ಕೇಂದ್ರದ ಬಗ್ಗೆ ಸಂಶಯದ ಅಗತ್ಯವಿಲ್ಲ. ಸದ್ಯದ ಆರೋಗ್ಯ ತುರ್ತು ಸ್ಥಿತಿಯಲ್ಲಿ ಈ ಬಗ್ಗೆ ನೇತ್ಯಾತ್ಮಕ ಪ್ರಚಾರ ಸಲ್ಲದು. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದೆ.

ಪರೀಕ್ಷಾ ಕೇಂದ್ರವು ಐಸಿಎಂಆರ್‌ ಮಾನದಂಡದ ಪ್ರಕಾರ ಸ್ಥಾಪನೆಯಾಗಿದೆ. ಪ್ರಯೋಗಾಲಯವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾರೂ ಆ ಕುರಿತು ಯಾವುದೇ ರೀತಿಯ ಅನುಮಾನ ಪಡಬೇಕಿಲ್ಲ ಎಂದು ಅವರು ಹೇಳಿದರು.

ಸ್ವಯಂ ಕ್ವಾರಂಟೈನ್‌ ಉತ್ತಮ ಬೆಳವಣಿಗೆ
ಕೋವಿಡ್ 19 ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಸೋಂಕು ಪೀಡಿತರ ಜತೆ ಸಂಪರ್ಕಕ್ಕೆ ಬಂದವರು ಸ್ವಯಂಪ್ರೇರಿತರಾಗಿ ಕ್ವಾರಂಟೈನ್‌ಗೆ ಒಳಗಾಗಲು ಮುಂದೆ ಬರುತ್ತಿರುವುದು ಉತ್ತಮ ಬೆಳವಣಿಗೆ. ಜನರ ಸಹಕಾರವಿದ್ದರೆ ಮಾತ್ರ ಕೋವಿಡ್ 19 ವೈರಸ್ ನಿಯಂತ್ರಣ ಸಾಧ್ಯ ಎಂದರು.

ಕೋವಿಡ್ 19 ವೈರಸ್ ಸೋಂಕಿನ ಲಕ್ಷಣ ಅಥವಾ ಸ್ವರೂಪದ ಬಗ್ಗೆ ಇನ್ನೂ ವೈದ್ಯರಿಗೆ ಖಚಿತವಾಗಿ ಪತ್ತೆ ಮಾಡಲು ಸಾಧ್ಯವಾಗದಿರುವುದೇ ದೊಡ್ಡ ಸವಾಲು. ಈ ಕಾರಣಕ್ಕೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವತ್ತ ಹೆಚ್ಚು ಗಮನ ಕೊಡಬೇಕು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.