Watch: ಶವಗಳ ಪಕ್ಕದಲ್ಲಿಯೇ ಕೋವಿಡ್ ರೋಗಿಗಳಿಗೆ ಚಿಕಿತ್ಸೆ!ಮುಂಬೈ ಆಸ್ಪತ್ರೆ ವಿರುದ್ಧ ಆಕ್ರೋಶ
ಕಪ್ಪು ಪ್ಲಾಸ್ಟಿಕ್ ನಲ್ಲಿ ಶವವನ್ನು ಸುತ್ತಿ ಇಟ್ಟಿದ್ದು, ಅದರ ಸಮೀಪದ ಬೆಡ್ ನಲ್ಲಿ ರೋಗಿಗಳಿದ್ದಾರೆ
Team Udayavani, May 7, 2020, 4:08 PM IST
ಮಹಾರಾಷ್ಟ್ರ: ಭಾರತದಲ್ಲಿ ಕೋವಿಡ್ 19 ವೈರಸ್ ತಡೆಗಟ್ಟಲು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಕೋವಿಡ್ ವೈರಸ್ ಗೆ ಬಲಿಯಾದವರ ಶವಗಳನ್ನು ಇಡಲಾಗಿದ್ದು, ಅದರ ಸಮೀಪದಲ್ಲಿಯೇ ಕೋವಿಡ್ ಸಂತ್ರಸ್ತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಮೂಲಕ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಕಪ್ಪು ಪ್ಲಾಸ್ಟಿಕ್ ನಿಂದ ಶವವನ್ನು ಸುತ್ತಿ ಇಟ್ಟಿರುವ ಸಮೀಪದಲ್ಲಿಯೇ ರೋಗಿಗಳನ್ನು ಮಲಗಿಸಿರುವ ಮುಂಬೈನ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿನ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಆಸ್ಪತ್ರೆಯೊಂದರಲ್ಲಿ ಕೋವಿಡ್ ರೋಗಿಗಳು ಮತ್ತು ಶವ ಒಟ್ಟಿಗೆ ಇಟ್ಟಿರುವುದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ವರದಿ ವಿವರಿಸಿದೆ.
ಬಿಜೆಪಿ ಶಾಸಕ ನಿತೀಶ್ ರಾಣೆ ಈ ವಿಡಿಯೋವನ್ನು ಟ್ವೀಟರ್ ನಲ್ಲಿ ಅಪ್ ಲೋಡ್ ಮಾಡಿದ್ದು, ಕಪ್ಪು ಪ್ಲಾಸ್ಟಿಕ್ ನಲ್ಲಿ ಶವವನ್ನು ಸುತ್ತಿ ಇಟ್ಟಿದ್ದು, ಅದರ ಸಮೀಪದ ಬೆಡ್ ನಲ್ಲಿ ರೋಗಿಗಳಿದ್ದಾರೆ. ಈ ಕೋವಿಡ್ ವಾರ್ಡ್ ನಲ್ಲಿ ಹತ್ತು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ರೋಗಿಗಳ ಬೆಡ್ ಸಮೀಪ ಸುಮಾರು ಆರು ಶವಗಳು ಇದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.
In Sion hospital..patients r sleeping next to dead bodies!!!
This is the extreme..what kind of administration is this!
Very very shameful!! @mybmc pic.twitter.com/NZmuiUMfSW— nitesh rane (@NiteshNRane) May 6, 2020
ಈ ಬಗ್ಗೆ ಸೈಯನ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಮೋದ್ ಇಂಗ್ಳೆ ಸ್ಪಷ್ಟನೆ ನೀಡಿದ್ದು, ಕೋವಿಡ್ ವೈರಸ್ ನಿಂದ ಮೃತಪಟ್ಟವರ ಶವ ಕೊಂಡೊಯ್ಯಲು ಕುಟುಂಬಸ್ಥರು ನಿರಾಕರಿಸುತ್ತಿರುವುದರಿಂದ ಬೇರೆ ವಿಧಿ ಇಲ್ಲದೇ ಶವಗಳನ್ನು ಹಾಗೆಯೇ ಬಿಡಲಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯ ಶವಾಗಾರಕ್ಕೆ ಶವಗಳನ್ನು ಯಾಕೆ ಸಾಗಿಸಿಲ್ಲ ಎಂಬ ಪ್ರಶ್ನಿಗೆ, ಶವಾಗಾರದಲ್ಲಿ ಕೇವಲ 15 ಶವಗಳನ್ನು ಇಡಲು ಸ್ಥಳಾವಕಾಶ ಇದೆ. ಈಗಾಗಲೇ 11 ಶವಗಳನ್ನು ಇಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.