Desi Swara: ಬಂಟ್ಸ್‌ ಬಹ್ರೈನ್‌ ಸಂಘ:ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು

Team Udayavani, Mar 16, 2024, 11:50 AM IST

Desi Swara: ಬಂಟ್ಸ್‌ ಬಹ್ರೈನ್‌ ಸಂಘ:ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಬಹ್ರೈನ್‌:ಇಲ್ಲಿನ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ ಬಂಟ್ಸ್‌ ಬಹ್ರೈನ್‌ ಇತ್ತೀಚೆಗೆ ಇಲ್ಲಿನ ಮನಾಮದಲ್ಲಿರುವ ಕನ್ನಡ ಭವನದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದು ಸುಮಾರು 800ಕ್ಕೂ ಹೆಚ್ಚು ಭಕ್ತರು ತನ್ಮಯತೆಯಿಂದ ಭಕ್ತಿಪರವಶರಾಗಿ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ನಿತಿನ್‌ ಶೆಟ್ಟಿಯವರ ನೇತೃತ್ವದಲ್ಲಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ನಿಟ್ಟಿನಲ್ಲಿ ಸಂಘಟನೆಯ ಪ್ರಥಮ ಕಾರ್ಯಕ್ರಮವಾಗಿ ಈ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದರು. ಈ ಪೂಜಾ ಕೈಂಕರ್ಯವನ್ನು ನಡೆಸಿಕೊಡಲು ದ್ವೀಪಕ್ಕೆ ವಿಶೇಷವಾಗಿ ನಾಡಿನಿಂದ ಆಗಮಿಸಿದ್ದ ವೈದಿಕರಾದ ವೇ|ಮೂ| ಚಕ್ರಪಾಣಿ ಉಡುಪರು ಪೂಜಾ ವಿಧಿ, ವಿಧಾನಗಳನ್ನು ಸಾಂಗವಾಗಿ ನೆರವೇರಿಸಿಕೊಟ್ಟರು . ಪೂಜೆಯುದ್ದಕ್ಕೂ ಭಜನ ಮಂಡಳಿಯಿಂದ ಭಜನ ಕಾರ್ಯಕ್ರಮವನ್ನು ಏರ್ಪಡಿಸಿದ್ದು ವಾದ್ಯವ್ರಂದದೊಂದಿಗೆ ಸುಶ್ರಾವ್ಯವಾದ ಭಜನೆಗಳು ನೆರೆದ ಭಕ್ತಾದಿಗಳನ್ನು ಭಕ್ತಿಪರವಶರಾಗುವಂತೆ ಮಾಡಿತು.

ಬಂಟ್ಸ್‌ ಬಹ್ರೈನ್‌ನ ಅಧ್ಯಕ್ಷರಾದ ನಿತಿನ್‌ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಇತರ ಪಧಾಧಿಕಾರಿಗಳು, ಬಂಟ ಬಾಂಧವರು ಮತ್ತು ಅಹ್ವಾನಿತ ಅತಿಥಿಗಳನ್ನು ಸ್ವಾಗತಿಸಿ ಸರ್ವರ ಪರವಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಅನಂತರ ಸಂಕಲ್ಪದೊಂದಿಗೆ ಪೂಜಾ ವಿಧಿವಿಧಾನಗಳು ಪ್ರಾರಂಭವಾಯಿತು. ಗಣಪತಿ ಪೂಜೆ, ಕಳಸ ಪೂಜೆ, ನವಗ್ರಹ ಪೂಜೆ, ಸತ್ಯನಾರಾಯಣ ದೇವರ ವೃತ ಕಲ್ಪೋಕ್ತಿ ಪೂಜೆ, ಭಜನೆ ಸಂಕೀರ್ತನೆ, ಸತ್ಯನಾರಾಯಣ ದೇವರ ಕಥೆಯ ಅನಂತರ ಮಹಾಮಂಗಳಾರತಿ ನಡೆಯಿತು. ಬಂಟ್ಸ್‌ ಬಹ್ರೈನ್‌ನ ನೂತನ ಅಧ್ಯಕ್ಷರಾದ ನಿತಿನ್‌ ಶೆಟ್ಟಿ ಅವರು ನೆರೆದ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿ, ಸಮುದಾಯದ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗಲು ಎಲ್ಲರ ಸಹಕಾರ ಅತ್ಯಗತ್ಯ ಎಂದರು.

ಇದೇ ಸಂದರ್ಭದಲ್ಲಿ ವೈದಿಕರಾದ ಚಕ್ರಪಾಣಿ ಉಡುಪರನ್ನು ಶಾಲು ಹೊದಿಸಿ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಬಂಟ್ಸ್‌ ಬಹ್ರೈನ್‌ನ ಮಾಜಿ ಅಧ್ಯಕ್ಷರು, ಅಮ್ಮ ಕಲಾವಿದರು ಸಂಘಟನೆಯ ರೂವಾರಿಗಳೂ ಆಗಿದ್ದು ಕಳೆದ ಸುಮಾರು ಎರಡು ದಶಕಗಳಿಂದ ದ್ವೀಪದಲ್ಲಿ ಸಾಂಸ್ಕೃತಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದ ಮೋಹನ್‌ ದಾಸ್‌ ರೈ ಎರಂಬು ಅವರು ದ್ವೀಪವನ್ನು ಶಾಶ್ವತವಾಗಿ ತೊರೆದು ತಾಯ್ನಾಡಿನಲ್ಲಿ ನೆಲೆಸುವ ನಿಟ್ಟಿನಲ್ಲಿ ಅವರಿಗೆ ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಶುಭ ಹಾರೈಸಲಾಯಿತು.

ಬಂಟ್ಸ್‌ ಬಹ್ರೈನ್‌ನ ಸಾಮೂಹಿಕ ಸತ್ಯನಾರಾಯಣ ಪೂಜೆಗೆ ದ್ವೀಪದ ಎಲ್ಲ ಸಮುದಾಯ ಮತ್ತು ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.

ವರದಿ -ಕಮಲಾಕ್ಷ ಅಮೀನ್‌, ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.