Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

ಸಾಹಿತಿ ಡಾ| ವೀರಭದ್ರಯ್ಯ ಪ್ರತಿಪಾದನೆ

Team Udayavani, Sep 14, 2024, 2:10 PM IST

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

ಅಮೆರಿಕ: ಹರಪ್ಪ-ಮೊಹೆಂಜೊದಾರೋ ಸಂಸ್ಕೃತಿಯ ಉತ್ಖನನದಲ್ಲಿ ಶಿವಲಿಂಗಗಳ ಜತೆಗೆ ಧಾರಣೆಗೆ ಅನುಕೂಲವಾದ ಚಿಕ್ಕ ಗಾತ್ರದ ಲಿಂಗಗಳೂ ದೊರೆತಿರುವುದರಿಂದ ಸಿಂಧೂ ಬಯಲಿನ ನಾಗರಿಕತೆಯಲ್ಲಿ ಶಿವನ ಆರಾಧಕರಾಗಿದ್ದವರೆಲ್ಲರೂ ಬಹುತೇಕ ವೀರಶೈವ-ಲಿಂಗಾಯತ ಧರ್ಮ-ಸಂಸ್ಕೃತಿಯನ್ನು ಪರಿಪಾಲನೆ ಮಾಡುವವರೇ ಆಗಿದ್ದು, ಈ ನಿಟ್ಟಿನಲ್ಲಿ ವೀರಶೈವ ಸುಮಾರು 10 ಸಾವಿರ ವರ್ಷಗಳ ಪ್ರಾಚೀನ ಧರ್ಮವಾಗಿದೆ ಎಂದು ಬಳ್ಳಾರಿಯ ಹಿರಿಯ ಸಾಹಿತಿ, ಸಂಶೋಧಕ ಡಾ| ಚಿಕ್‌ಕ್ಯಾಟೆಮಠದ ವೀರಭದ್ರಯ್ಯ ಪ್ರತಿಪಾದಿಸಿದರು.

ಅವರು ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರಿಗಾಗಿ ವರ್ಜೀನಿಯಾ ರಾಜ್ಯದ ರಿಚ್ಮಂ ಡ್‌ ನಗರದಲ್ಲಿ ಅಲ್ಲಿಯ ಕಾವೇರಿ ಮತ್ತು ರಿಚ್ಮಂಡ್‌ ಕನ್ನಡ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 12ನೆಯ ಅಕ್ಕ ಸಮ್ಮೇಳನದ ಅಂಗವಾಗಿ ಜರಗಿದ ಚಿಂತನಗೋಷ್ಠಿಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ವೀರಶೈವ-ಲಿಂಗಾಯತ ಧರ್ಮ, ಸಂಸ್ಕೃತಿ, ಪರಂಪರೆ ಬಹು ಪ್ರಾಚೀನವಾದುದು. ಇಲ್ಲಿ ಅರ್ಚನೆ, ಆರಾಧನೆ ಮತ್ತು ಅನುಷ್ಠಾನದ ಕೇಂದ್ರ ಬಿಂದು “ಇಷ್ಟಲಿಂಗ’ವೇ ಆಗಿದೆ. ಸಿಂಧೂ ಬಯಲಿನ ನಾಗರಿಕತೆಯ ಕಾಲಘಟ್ಟದಿಂದಲೂ ವೀರಶೈವ-ಲಿಂಗಾಯತ ಧರ್ಮ, ಸಂಸ್ಕೃತಿ, ಪರಂಪರೆಗೆ ಅನುಗುಣವಾದ “ಇಷ್ಟಲಿಂಗಾರ್ಚನೆ’ಯ ಆಚರಣೆ ಇತ್ತೆಂಬುದು ಸಂಶೋಧನೆಯಿಂದ ಸಾಬೀತಾಗಿದೆ ಎಂದರು.

ಶಾಸನಗಳಲ್ಲಿ ವೀರಶೈವ
ಭಾರತದೆಲ್ಲೆಡೆ ಮತ್ತು ವಿದೇಶಗಳಲ್ಲಿ ಲಭ್ಯವಾದ ಅನೇಕ ಶಾಸನಗಳಲ್ಲಿ ವೀರಶೈವ ಧರ್ಮದ ಉಲ್ಲೇಖಗಳಿವೆ. ಶಾಸನಗಳು ಸಂಶೋಧನೆಗೆ ಅತ್ಯಂತ ನಿಖರ ಆಕರಗಳಾಗಿದ್ದು, ಶಾಸನೋಕ್ತ ವೀರಶೈವವನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ಭಾರತದಲ್ಲಷ್ಟೇ ಅಲ್ಲದೇ ನೇಪಾಲ, ಭೂತಾನ್‌, ಶ್ರೀಲಂಕಾ, ಕಾಂಬೋಡಿಯಾ ಮುಂತಾದ ವಿದೇಶಗಳಲ್ಲಿಯೂ ಶಿವನ ಆರಾಧನೆ ಮತ್ತು ಲಿಂಗಾರ್ಚನೆ ಇರುವುದು ಸಂಶೋಧನೆಯಲ್ಲಿ ಗೋಚರವಾಗಿದೆ ಎಂದೂ ಅವರು ಹೇಳಿದರು.

ಲಿಂಗಾಂಗ ಸಾಮರಸ್ಯ
ವೀರಶೈವ-ಲಿಂಗಾಯತ ಧರ್ಮವು ಅಷ್ಟಾವರಣ, ಪಂಚಾಚಾರ ಮತ್ತು ಷಟ್‌ಸ್ಥಲ ತತ್ತ್ವವಾದದ್ದು. ಇಲ್ಲಿ ಮೋಕ್ಷವನ್ನು “ಲಿಂಗಾಂಗ ಸಾಮರಸ್ಯ’ ಎಂದಿದ್ದಾರೆ. ಸಾಕ್ಷಾತ್ಕಾರ ಸಂಪಾದನೆ ಎಂದರೆ ಅದು ಅಂತಿಮವಾಗಿ “ಭಗವದೆºಳಗು’ ಕಾಣುವ ಹಂಬಲ. ವಿಶ್ವದಲ್ಲಿಯ ಎಲ್ಲ ಧರ್ಮಗಳ ಮೂಲ ಪ್ರತಿಪಾದನೆಯೂ ಕೂಡ ಇದೇ ಆಗಿದೆ. ಭಗವಂತನನ್ನು ಕಾಣಲೇಬೇಕೆಂಬ ಹಿರಿದಾದ ಹಂಬಲಕ್ಕೆ ಕ್ರಮಿಸುವ ಮಾರ್ಗಗಳು ಹತ್ತು ಹಲವು. ವೀರಶೈವ-ಲಿಂಗಾಯತರು ನಿತ್ಯವೂ ಇಷ್ಟಲಿಂಗದ ಅನುಸಂಧಾನದ ಮೂಲಕ ಶಿವಬೆಳಗನ್ನು ಕಾಣುತ್ತಾರೆ ಎಂದೂ ಡಾ| ವೀರಭದ್ರಯ್ಯ ಹೇಳಿದರು.

ರಾಜ್ಯದ ಮಾಜಿ ಸಚಿವೆ ರಾಣಿ ಸತೀಶ್‌ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿ, ವೀರಶೈವರು ಮತ್ತು ಲಿಂಗಾಯತರು ಬೇರೆಬೇರೆ ಎಂಬ ಭಿನ್ನಾಭಿಪ್ರಾಯಗಳನ್ನು ಹುಟ್ಟುಹಾಕಿ ಸಂಕೀರ್ಣತೆಯಲ್ಲಿ ಬದುಕುವ ಸ್ಥಿತಿ ಈಗ ನಿರ್ಮಾಣವಾಗಿದೆ. ಪ್ರಸ್ತುತ ವೀರಶೈವ-ಲಿಂಗಾಯತ ಧರ್ಮದ ಯುವಕ-ಯುವತಿಯರು ವ್ಯಾಪಕ ಗೊಂದಲಗಳಲ್ಲಿ ಸಿಲುಕಿದ್ದಾರೆ. 10 ಸಾವಿರ ವರ್ಷಗಳ ಚಾರಿತ್ರಿಕ ಘನತೆ ಇರುವ ಮತ್ತು ಸಂಶೋಧನೆಯ ಎಲ್ಲ ಆಯಾಮಗಳ ನೆಲೆ-ಮೂಲಗಳನ್ನು ಎಲ್ಲರೂ ಮುಕ್ತವಾಗಿ ಅವಲೋಕನ ಮಾಡುವ ಅಗತ್ಯವಿದೆ. ವೀರಶೈವ-ಲಿಂಗಾಯತರ ಅನೇಕ ಒಳ ಉಪಪಂಗಡಗಳನ್ನು ಮುನ್ನೆಲೆಗೆ ತಂದು ಮೀಸಲಾತಿ ಹೋರಾಟಗಳನ್ನೂ ಸಹ ನಡೆಸಲಾಗುತ್ತಿದೆ.

ರಾಜಕಾರಣಿಗಳೂ ಸಹ ಧರ್ಮದ ವಿಚಾರಗಳಲ್ಲಿ ತಮಗೆ ಅನುಕೂಲವಾಗುವಂತೆ ವಿಭಜನೆಯ ಮಾತುಗಳನ್ನು ಎಂದೂ ಎಲ್ಲಿಯೂ ವ್ಯಕ್ತಪಡಿಸಬಾರದು. ಎಲ್ಲರೂ ಸೇರಿಕೊಂಡು ಸಾಮರಸ್ಯದ ನೆಲೆಯಲ್ಲಿ ಧರ್ಮದ ವಿಶಾಲ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದರು. ಅಮೆರಿಕದ ಕಾವೇರಿ ಮತ್ತು ರಿಚ್ಮಂಡ್‌ ಕನ್ನಡ ಸಂಘಟನೆಗಳ ಹಾಗೂ 12ನೆಯ ಅಕ್ಕ ಸಮ್ಮೇಳನ ಸಮಿತಿಯ ವಿವಿಧ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಆಕಾಶದ ಮೈದಾನದಲ್ಲಿ ಸಾಹಸ ಯಾತ್ರೆ-ಬಾನಂಗಳದಲ್ಲಿ ಬಣ್ಣಗಳ ಚಿತ್ತಾರ

Desi Swara: ಆಕಾಶದ ಮೈದಾನದಲ್ಲಿ ಸಾಹಸ ಯಾತ್ರೆ-ಬಾನಂಗಳದಲ್ಲಿ ಬಣ್ಣಗಳ ಚಿತ್ತಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.