Desi Swara-ದೋಹಾ: ಮಾವಿನ ರುಚಿಗೆ ಮಾರುಹೋದ ಸಾವಿರಾರು ಮಂದಿ
ವಿದೇಶದಲ್ಲಿ ಹಣ್ಣಿನ ರಾಜನ ಹಿರಿಮೆ
Team Udayavani, Jun 15, 2024, 10:05 AM IST
ದೋಹಾ:ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36 ಡಿಗ್ರಿ ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ.
50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರ್‌ನ ದೋಹಾದಲ್ಲಿರುವ ಸೂಕ್ ವಾಕಿಫ್‌ನಲ್ಲಿ ನಡೆದ ಮಾವಿನ ಮೇಳ.
ರಾಜಪುರಿ, ತೋತಾಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್‌ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನೀಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.
ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೂಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್, ಶ್ರೀಲಂಕಾ , ಬಾಂಗ್ಲಾದೇಶ, ಪಿಲಿಪೈನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು. ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತಾರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ಜೂ.8ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!
ಈ ಮೇಳವನ್ನು ಆಯೋಜಿಸಲು ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದ್ದವು. ಅದರಲ್ಲಿ ಪ್ರಮುಖವಾದದು ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ). ಪ್ರತ್ಯೇಕವಾಗಿ ಐಸಿಸಿ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಟಾಗಿಲು ಅವರು ಕತಾರ್‌ನ ಹಲವಾರು ಅಧಿಕಾರಿಗಳು, ಭಾರತೀಯ ರಾಜದೂತವಾಸದ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಳಿಗೆಗಳು ಹಾಗೂ ಉಪಹಾರ ಕೇಂದ್ರಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ, ಸಮಾಲೋಚಿಸಿ, ಈ ಬೃಹತ್ ಗಾತ್ರದ ಮಾವಿನ ಮೇಳವನ್ನು ಆಯೋಜಿಸಲು ಭಾಗಿಯಾಗಿ, ಯಶಸ್ಸಿಗೆ ಕಾರಣಕರ್ತರುಗಳಲ್ಲಿ ಒಬ್ಬರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.