Desi Swara: ಜಾನಪದ ನೃತ್ಯ ವೈಭವ, ಸಂಗೀತ ರಸಮಂಜರಿ

Team Udayavani, Dec 9, 2023, 10:50 AM IST

Desi Swara: ಜಾನಪದ ನೃತ್ಯ ವೈಭವ, ಸಂಗೀತ ರಸಮಂಜರಿ

ದುಬೈ: ಇಲ್ಲಿನ ಕರ್ನಾಟಕ ಸಂಘ ದುಬೈ ಆಯೋಜನೆಯಲ್ಲಿ ನ.26ರಂದು ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮವು
Al NASER LESUIR LAND ICE RINK OUD METHA DUBAIಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು.

ವೇದಿಕೆಯಲ್ಲಿ ಪ್ರಮುಖ ಗಣ್ಯರ ಸಮ್ಮುಖದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿಧ ಸಾಂಸ್ಕೃತಿಕ, ವೈವಿಧ್ಯಮಯ ಜಾನಪದ ನೃತ್ಯ ವೈಭವ, ಎದೆತುಂಬಿ ಹಾಡುವೆನು ಖ್ಯಾತಿಯ ಹಿನ್ನೆಲೆ ಗಾಯಕ ಸಂದೇಶ್‌ ನೀರುಮಾರ್ಗ, ನವೀರ ಬಾನು ಹಾಗೂ ದುಬೈಯ ಖ್ಯಾತ ಸಂಗೀತ ಗಾಯಕ ಉದ್ಯಮಿ ಸಮಾಜ ಸೇವಕರಾದ MI Navee Magundiಯವರಿಂದ ಕನ್ನಡ ಸಂಗೀತ ರಸಮಂಜರಿ, ಪಿಲಿನಲಿಕೆ ಕಾರ್ಯಕ್ರಮ ನಡೆಯಿತು.

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಖ್ಯಾತ ಯಕ್ಷಗಾನ ಭಾಗವತರಾದ ಕೃಷ್ಣ ಪ್ರಸಾದ್‌ ರಾವ್‌ ಸುರತ್ಕಲ್‌ ಅವರ ಸುಮಧುರ ಕಂಠದ, ಇಂಪಾದ ಸ್ವರದ ಭಾಗವತಿಕೆ, ಭವಾನಿ ಶಂಕರ ಶರ್ಮಾ ದುಬೈರವರ ಚೆಂಡೆ ವಾದನ, ಗಿರೀಶ್‌ ನಾರಾಯಣ್‌ ಕಾಟಿಪಳ್ಳ ಅವರು ಮದ್ದಲೆಯಲ್ಲಿ ಸಹಕರಿಸಿ ಪ್ರಖ್ಯಾತ ಯಕ್ಷಗಾನ ಕಲಾವಿದರಾದ ದಿನೇಶ್‌ ಶೆಟ್ಟಿಗಾರ್‌ ಕೊಡಪದವು, ದಿನೇಶ್‌ ರೈ ಕಡಬ ಹಾಗೂ ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ಹಾಸ್ಯ ನಟ ನವೀನ್‌ ಡಿ. ಪಡೀಲ್, ದೀಪಕ್‌ ರೈ ಪಾಣಾಜೆಯವರಿಂದ ಯಕ್ಷ ಹಾಸ್ಯ ಸಾಗರ ನಡೆಯಿತು.

ಗಿಚ್ಚಿ ಗಿಲಿಗಿಲಿ ತಂಡದಿಂದ ಹಾಸ್ಯ-ಹಳ್ಳಿ -ಆಟ ಮತ್ತು ದುಬೈಯ ಟೀಮ್‌ ನೃತ್ಯ ಪ್ರಿಯೆ ಅಪ್ಪೆನ ಮೋಕೆದ ಪೊಣ್ಣು ಪಿಲಿಕುಳು ತಂಡದಿಂದ ಹೆಣ್ಣು ಹುಲಿ ಕುಣಿತ ಹಾಗೂ ಗಿರೀಶ್‌ ನಾರಾಯಣ್‌ ಕಾಟಿಪಳ್ಳ ಸಾರಥ್ಯದ ಟೀಮ್‌ ಪಿಲಿನಲಿಕೆ ದುಬೈ ತಂಡದಿಂದ ವಿಶೇಷ ಹುಲಿ ಕುಣಿತದೊಂದಿಗೆ ವಾದ್ಯ ಗೋಷ್ಠಿ, ಅರ್ನಾಕಲಿ ವೇಷ, ಚೆಂಡೆವಾದನದೊಂದಿಗೆ ನಮ್ಮೆಲ್ಲರ ಹೆಮ್ಮೆಯ ಮೈಸೂರು ದಸರಾ ವೈಭವವನ್ನು ನೆನಪಿಸುವ ವಿಶೇಷ ಮೆರವಣಿಗೆಯು ಬಹಳ ವಿಜೃಂಭಣೆಯಿಂದ ನಡೆಯಿತು. ‌

ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ನಮ್ಮ ನಾಡು ನುಡಿ ಸಂಸ್ಕೃತಿಯ ಗೌರವಕ್ಕೆ ಪಾತ್ರರಾಗಿದ್ದು , ಕಸ್ತೂರಿ ಕನ್ನಡದ ಕಂಪಸೂಸುವ ಸಮಾರಂಭವಾಗಿತ್ತು.

ರಕ್ತದಾನ ಮಹಾದಾನ ಎನ್ನುವ ಒಳ್ಳೆಯ ಉದ್ದೇಶವಿಟ್ಟುಗೊಂಡು UAEಯಲ್ಲಿರುವ ಬಹುತೇಕ ಎಲ್ಲ ಸಂಘ ಸಂಸ್ಥೆಗಳ ಜತೆ ಸೇರಿ ಸರಿ ಸುಮಾರು 400ಕ್ಕಿಂತಲೂ ಹೆಚ್ಚಿನ ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಜನ ಮಾನಸವನ್ನು ಗೆದ್ದಿರುವ ದುಬೈಯ ಯಶಸ್ವಿ ಉದ್ಯಮಿ, ಖ್ಯಾತ ಸಮಾಜ ಸೇವಕರಾದ ಮೊಗವೀರ ಫ್ಯಾಮಿಲಿ UAEಯ ಉಪಾಧ್ಯಕ್ಷರಾದ ಬಾಲಕೃಷ್ಣ ಸಾಲಿಯಾನ್‌ ಯಾನೆ ಬಾಲಣ್ಣ ಅವರಿಗೆ ದುಬೈ ಕರ್ನಾಟಕ ಸಂಘದ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ 2023ರ ವಿಶೇಷ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಶಶಿಧರ್‌ ನಾಗರಾಜಪ್ಪ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಕರ್ನಾಟಕ ಸಂಘ ದುಬೈನ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

ವರದಿ: ಮಹಾಲಕ್ಷ್ಮೀ ಸುಬ್ರಹ್ಮಣ್ಯ

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.