Desi swara: ಭಾರತೀಯ ಸಾಂಸ್ಕೃತಿಕ ಕೇಂದ್ರ: ಸ್ವಾತಂತ್ರ್ಯೋತ್ಸವ
Team Udayavani, Aug 24, 2024, 1:15 PM IST
ಕತಾರ್: ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಆ.15ರಂದು ಗೌರವಾನ್ವಿತ ಭಾರತೀಯ ರಾಯಭಾರಿಗಳಾದ ವಿಪುಲ್ ಅವರು ಆಗಮಿಸಿ ಸುಮಾರು 300ಕ್ಕೂ ಹೆಚ್ಚು ಭಾರತೀಯರ ಸಮ್ಮುಖದಲ್ಲಿ ಭಾರತೀಯ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಭಾರತೀಯ ಸಾಂಸ್ಕೃತಿಕ ಕೇಂದ್ರದ ಆಡಳಿತ ಸಮಿತಿಯ ಸದಸ್ಯರು, ಭಾರತೀಯ ಸಮುದಾಯ ಹಿತೈಷಿ ವೇದಿಕೆ ಆಡಳಿತ ಸಮಿತಿಯ ಸದಸ್ಯರು, ಭಾರತೀಯ ಸಮುದಾಯದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಧ್ವಜಾರೋಹಣದ ಅನಂತರ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಶೋಕಾ ಸಭಾಂಗಣದಲ್ಲಿ ಭಾರತೀಯ ರಾಯಭಾರಿಗಳಾದ ವಿಪುಲ್ ಅವರು ಭಾರತೀಯ ರಾಷ್ಟ್ರಪತಿಗಳ ಸಂದೇಶವನ್ನು ಸಭಿಕರಿಗೆ ರವಾನಿಸಿದರು. ಅನಂತರ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಮಣಿಕಂಠನ್ ಭಾಷಣವನ್ನು ಮಾಡಿದರು.
ರಾಷ್ಟ್ರಭಕ್ತಿ ಹಾಗೂ ದೇಶಾಭಿಮಾನವನ್ನು ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳು ಹಾಗೂ ಕಲಾವಿದರು ಸೇರಿ ಭಾರತೀಯ ಸ್ವಾತಂತ್ರ್ಯೋತ್ಸವದ ವಿಜೃಂಭಣೆಯನ್ನು ಹೆಚ್ಚಿಸಲು ಕಾರಣರಾದರು.
ಕಾರ್ಯಕ್ರಮದ ಆಯೋಜನೆಯಲ್ಲಿ ಹಲವಾರು ಸೇವಾಕರ್ತರು ಹಾಗೂ ಸ್ವಯಂಸೇವಕರು ತಮ್ಮ ಅಮೂಲ್ಯವಾದ ಸಮಯ ಹಾಗೂ ಪರಿಶ್ರಮದಿಂದ ಹಾಕಿದ್ದರಿಂದ ಸಫಲಗೊಳಿಸಲು ಸಹಾಯವಾಯಿತು. ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಟಾಗಿಲು ಅವರು ನಡೆಸಿದ ಭಾರತೀಯ ರಾಯಭಾರಿ ಕಾರ್ಯಾಲಯದ ಅಧಿಕಾರಿಗಳ ಸಹಯೋಗದಿಂದ ಹಾಗೂ ಭಾರತೀಯ ಮೂಲದ ಸಹೋದರ ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯಕ್ರಮವು ಸುಸೂತ್ರವಾಗಿ ಸಂಪನ್ನಗೊಳ್ಳಲು ಸಾಧ್ಯವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.