Desi Swara:ಕತಾರ್‌- ಸ್ವ ಸಾಮರ್ಥ್ಯವನ್ನು ಅರಿತು ಕ್ರಿಯಾಶೀಲರಾಗಿ

75ನೇ ಗಣರಾಜ್ಯೋತ್ಸವ ಆಚರಣೆ

Team Udayavani, Feb 3, 2024, 9:42 AM IST

Desi Swara:ಕತಾರ್‌- ಸ್ವ ಸಾಮರ್ಥ್ಯವನ್ನು ಅರಿತು ಕ್ರಿಯಾಶೀಲರಾಗಿ

ಕತಾರ್‌: ನಾರ್ಥ್ ಸ್ಟಾರ್‌ ಇಂಟರ್‌ ನ್ಯಾಶನಲ್‌ ಕಿಂಡರ್‌ ಗಾರ್ಡನ್‌ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಸೇರಿ ಭಾರತ ದೇಶದ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿದರು.

ಕಾರ್ಯಕ್ರಮವು ಉತ್ಸಾಹದಿಂದ ಹಾಗೂ ರಾಷ್ಟ್ರಭಕ್ತಿಯಿಂದ ತುಂಬಿ ತುಳುಕುತ್ತಿತ್ತು. ಶಾಲೆಯ ಆವರಣವನ್ನು ರಾಷ್ಟ್ರ ಭಕ್ತರ ಚಿತ್ರಪಟಗಳಿಂದ, ವಿವಿಧ ಬಣ್ಣದ ಪುಷ್ಪಗಳಿಂದ ಹಾಗೂ ವರ್ಣ ರಂಜಿತ ಬಲೂನುಗಳಿಂದ ಅಲಂಕೃತಗೊಳಿಸಲಾಗಿತ್ತು. ಶಾಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂತಹ ಉನ್ನತ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ವಿಶೇಷ ಸಂದರ್ಭಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಹಾಗೂ ಕರ್ನಾಟಕದ ಬೈಂದೂರಿನ ಮೂಲದವರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಹಾಗೂ ಗೌರವಾನ್ವಿತ ಅತಿಥಿಯಾಗಿ ಭಾರತೀಯ ಸಾಂಸ್ಕೃಕ ಕೇಂದ್ರದ ಆಡಳಿತ ಸಮಿತಿಯ ಸದಸ್ಯರಾದ ಎಂ. ವಿ. ಸತ್ಯನಾರಾಯಣ ಮತ್ತು ಸಿಶುರ್‌ ಸಂಸ್ಥೆಗಳ ಸಂಸ್ಥಾಪಕರಾದ ಶ್ರೀಜಿತ್‌ ಆಗಮಿಸಿದ್ದರು. ನಾರ್ಥ್ ಸ್ಟಾರ್‌ಎಜುಕೇಶನಲ್‌ ವೆಂಚರ್‌ ಸಂಸ್ಥೆಯ ನಿರ್ದೇಶಕರಾದ ಅಕºರ್‌ ಹಾಗೂ ಪ್ರಾಂಶುಪಾಲರಾದ ಜೀನತ್‌ ನಿಶಾ ಸತಾರ್‌ ಅವರುಗಳು ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳು, ಗೌರವಾನ್ವಿತ ಅತಿಥಿಗಳು ಹಾಗೂ ಪ್ರಾಂಶುಪಾಲರು ಭಾರತದ ತ್ರಿವರ್ಣ ಧ್ವಜವನ್ನು ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಎಲ್ಲರೂ ಗೌರವದಿಂದ ಹಾಗೂ ಏಕಭಾವದಿಂದ ಭಾರತೀಯ ರಾಷ್ಟ್ರಗೀತೆಯನ್ನು ಹಾಡಿದರು. ಮುಖ್ಯ ಅತಿಥಿಗಳಾದ ಸುಬ್ರಹ್ಮಣ್ಯ ಹೆಬ್ಟಾಗಿಲು ಅವರು ಸಭೆಯನ್ನು ಉದ್ದೇಶಿಸಿ ಪ್ರೋತ್ಸಾಹ ಮೂಡಿಸುವ ಮಾತುಗಳನ್ನಾಡಿ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.

ತಮ್ಮ ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಾ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಅಥವಾ ಅದನ್ನು ಮೀರಿ ಕಾರ್ಯಶೀಲರಾಗಬೇಕೆಂದು ಪ್ರೇರೇಪಿಸಿದರು. ಇತರ ಗಣ್ಯರು ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ಅನುಭವಗಳನ್ನು ಹಾಗೂ ಭಾವನೆಯನ್ನು ವ್ಯಕ್ತಪಡಿಸಿದರು.

ಶಾಲೆಯ ಪ್ರಾಂಶುಪಾಲರು ಪ್ರೋತ್ಸಾಹದಾಯಕ ಭಾಷಣವನ್ನು ಮಾಡಿ ಗಣರಾಜ್ಯೋತ್ಸವದ ಪ್ರಾಮುಖ್ಯವನ್ನು ವಿಶ್ಲೇಷಿಸಿದರು. ಮುಗ್ಧ ಮನಸ್ಸುಗಳಿಗೆ ವಿಜಯಪತಾಕೆಯ ಮಹತ್ವ ಹಾಗೂ ಗೆಲುವಿನ ಮನೋಭಾವ ಬೆಳೆಸಿಕೊಳ್ಳಲು ಹಾಗೂ ಉಜ್ವಲ ಭವಿಷ್ಯಕ್ಕೆ ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಳ್ಳಲು ತಿಳಿಸಿದರು.

ಧ್ವಜಾರೋಹಣದ ಅನಂತರ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಪ್ರತಿಬಿಂಬಿಸುವ ಪ್ರಹಸನ, ನೃತ್ಯರೂಪಕ, ಗಾಯನ ಹಾಗೂ ಭಾಷಣಗಳನ್ನು ಮಾಡಿ ಮನಮೋಹಕ ಪ್ರದರ್ಶನವನ್ನು ನೀಡಿದರು. ವಿದ್ಯಾರ್ಥಿಗಳು ಭಾರತೀಯ ನಾಯಕರ ವೇಷಭೂಷಣಗಳಿಂದ ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಹಾಗೂ ಬಲಿದಾನವನ್ನು ನೆನೆಸಿಕೊಂಡರು. ಕೆಲವರು ಮಹಾತ್ಮ ಗಾಂಧಿ ಅವರ ವೇಷಭೂಷಣವನ್ನು ಮಾಡಿಕೊಂಡಿದ್ದರೆ ಇನ್ನೂ ಕೆಲವರು ಜವಾಹರಲಾಲ್‌ ನೆಹರೂ ಉಡುಗೆಯನ್ನು ತೊಟ್ಟಿದ್ದರು.

ಶಾಲೆಯ ಗಾಯನ ತಂಡವು ದೇಶಭಕ್ತಿ ಗೀತೆಯನ್ನು ಹಾಡಿದರು. ಸಿಹಿ ತಿಂಡಿಯ ವಿತರಣೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು. 2024ನೇ ಸಾಲಿನ ಗಣರಾಜ್ಯೋತ್ಸವವನ್ನು ಅತೀ ವಿಜೃಂಭಣೆಯಿಂದ ಹಾಗೂ ದೇಶಭಕ್ತಿಯಿಂದ ಆಚರಿಸಲು ಎಲ್ಲರಿಗೂ ಹೆಮ್ಮೆಯಾಯಿತು. ಈ ಕಾರ್ಯಕ್ರಮಕ್ಕೆ ಕಾರಣಕರ್ತರಾದ ಸಮಸ್ತ ಸಿಬಂದಿ ವರ್ಗದವರು ಸಮಾರಂಭವನ್ನು ಅವಿಸ್ಮರಣೀಯಗೊಳಿಸುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.