Desi Swara: ದೋಹಾ-ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆ ಬಿಡುಗಡೆ

Team Udayavani, Jan 27, 2024, 11:40 AM IST

Desi Swara: ದೋಹಾ-ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆ ಬಿಡುಗಡೆ

ಕತಾರ್‌:ಇಲ್ಲಿನ ಭಾರತೀಯ ರಾಯಭಾರ ಕಚೇರಿಯು ತನ್ನ ಅಧೀನದಲ್ಲಿರುವ ಇಂಡಿಯನ್‌ ಸ್ಫೋರ್ಟ್ಸ್ ಸೆಂಟರ್‌ನ ಸಹಯೋಗದೊಂದಿಗೆ ಪ್ರತಿಷ್ಠಿತ ಎಎಫ್ ಸಿ ಪಂದ್ಯವನ್ನು ಆಡಲು ಇತ್ತೀಚೆಗೆ ಕತಾರ್‌ಗೆ ಆಗಮಿಸಿರುವ ಭಾರತೀಯ
ಫುಟ್‌ಬಾಲ್‌ ತಂಡಕ್ಕೆ ಭವ್ಯವಾದ ಸ್ವಾಗತವನ್ನು ಕೋರಿತು. ಈ ವೇಳೆ ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್‌, ಕಚೇರಿಯ ಅಧಿಕಾರಿಗಳು, ಅಪೆಕ್ಸ್‌ ಬಾಡಿ ಸಮುದಾಯದ ಮುಖಂಡರು ಮತ್ತು ಭಾರತೀಯ ಮೂಲದ ಆಯ್ದ ಗಣ್ಯರು ಸ್ವಾಗತದಲ್ಲಿ ಉಪಸ್ಥಿತರಿದ್ದರು.

ಈ ಸ್ವಾಗತ ಕಾರ್ಯಕ್ರಮದ ಸಂದರ್ಭದಲ್ಲಿ ಭಾರತೀಯ ಫುಟ್‌ಬಾಲ್‌ನ ದಂತಕಥೆ ಮಿಡ್‌ಫೀಲ್ಡರ್‌- ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ಜೀವನಚರಿತ್ರೆಯನ್ನು ಭಾರತೀಯ ಫುಟ್‌ಬಾಲ್‌ ತಂಡದ ನಾಯಕ ಸುನಿಲ್‌ ಚೆಟ್ರಿ, ಭಾರತೀಯ ಫುಟ್‌ಬಾಲ್‌ ತಂಡದ ಮುಖ್ಯ ಕೋಚ್‌ ಇಗೊರ್‌ಸ್ಟಿಮ್ಯಾಕ್‌, ಡಿಸಿಎಂ ಸಂದೀಪ್‌ ಕುಮಾರ್‌, ಭಾರತದ ರಾಯಭಾರಿ ಕಚೇರಿ ಸಚಿನ್‌ ಅವರು ಸೇರಿ ಬಿಡುಗಡೆ ಮಾಡಿದರು.

ಭಾರತದ ಪ್ರಥಮ ರಾಯಭಾರಿ ಕಚೇರಿಯ ಸಂಖ್‌ಪಾಲ್‌, ಭಾರತೀಯ ಕ್ರೀಡಾ ಕೇಂದ್ರದ ಅಧ್ಯಕ್ಷ ಅಬ್ದುಲ್‌ ರೆಹೆಮಾನ್‌, ಭಾರತೀಯ ಕ್ರೀಡಾ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಿಹಾದ್‌ ಅಲಿ, ಕರ್ನಾಟಕ ಸಂಘ ಕತಾರ್‌ಅಧ್ಯಕ್ಷ ಮಹೇಶ್‌ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಜೀವನಚರಿತ್ರೆಯ ಲೇಖಕಿ ಸುಮಾ ಮಹೇಶ್‌ ಗೌಡ ಅವರು ಕತಾರ್‌ನಲ್ಲಿ ಪ್ರಸಿದ್ಧ ಸಮುದಾಯದ ನಾಯಕರಾಗಿದ್ದಾರೆ ಮತ್ತು ಪ್ರಸ್ತುತ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಮುಖ್ಯಸ್ಥರಾಗಿದ್ದಾರೆ. ಅವರು ಪ್ರಸಿದ್ಧ ಮಿಡ್‌ಫಿàಲ್ಡರ್‌ಒಲಿಂಪಿಯನ್‌ ಎಂ. ಕೆಂಪಯ್ಯ ಅವರ ದ್ವಿತೀಯ ಪುತ್ರಿ.

ಪುಸ್ತಕದ ಬಿಡುಗಡೆಯ ಅನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸುಮಾ ಮಹೇಶ್‌ ಗೌಡ ಅವರು ಪುಸ್ತಕ ಬಿಡುಗಡೆ ಮಾಡಲು ಉಪಕ್ರಮ ಮತ್ತು ಬೆಂಬಲಕ್ಕಾಗಿ ಕತಾರ್‌ನಲ್ಲಿರುವ ಭಾರತದ ರಾಯಭಾರಿ ವಿಪುಲ್‌ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಹಾಗೂ ಪುಸ್ತಕದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತೀಯ ಕ್ರೀಡಾ ಕೇಂದ್ರ ಮತ್ತು ಇ.ಪಿ.ಅಬ್ದುಲ್‌ ರೆಹಮಾನ್‌ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಸ್ವಾಗತ ಸಮಾರಂಭದಲ್ಲಿ ಬ್ಲೂ ಟೈಗರ್ಸ್‌ ತಂಡವು ಭಾರತೀಯ ಕ್ರೀಡಾ ಕೇಂದ್ರದ ಅಧ್ಯಕ್ಷರಾದ ಇ.ಪಿ. ಅಬ್ದುಲ್‌ ರೆಹಮಾನ್‌ ಅವರೊಂದಿಗೆ ವೇದಿಕೆಯಲ್ಲಿದ್ದ ರಾಯಭಾರ ಕಚೇರಿಯ ಅಧಿಕಾರಿಗಳು ಹಾಗೂ ಗೌರವಾನ್ವಿತ ಅತಿಥಿ ವಿಪುಲ್‌ ಅವರಿಗೆ ಭಾರತೀಯ ಫುಟ್‌ಬಾಲ್‌ ಜೆರ್ಸಿಗಳನ್ನು ನೀಡಿದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.