Desi Swara; ದ್ವೀಪದಲ್ಲಿ ಪ್ರಪ್ರಥಮ ಬಾರಿಗೆ “ಶಿವದೂತ ಗುಳಿಗೆ’, ಭಿತ್ತಿ ಪತ್ರ ಅನಾವರಣ

ಇಪ್ಪತ್ತರ ಸಂಭ್ರಮದಲ್ಲಿ ಬಹ್ರೈನ್‌ ಬಿಲ್ಲವಾಸ್‌

Team Udayavani, Feb 3, 2024, 12:19 PM IST

Desi Swara; ದ್ವೀಪದಲ್ಲಿ ಪ್ರಪ್ರಥಮ ಬಾರಿಗೆ “ಶಿವದೂತ ಗುಳಿಗೆ’, ಭಿತ್ತಿ ಪತ್ರ ಅನಾವರಣ

ಬಹ್ರೈನ್‌ :ಇಲ್ಲಿನ ಅನಿವಾಸಿ ಬಿಲ್ಲವ ಸಮುದಾಯದ ಸಂಘಟನೆಯಾದ “ಬಹ್ರೈನ್‌ ಬಿಲ್ಲವಾಸ್‌’ ಇದೀಗ ಇಪ್ಪತ್ತನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ಈ ಸಂಭ್ರಮಾಚರಣೆಯ ಅಂಗವಾಗಿ ದ್ವೀಪದಲ್ಲಿ ಪ್ರಪ್ರಥಮ ಬಾರಿಗೆ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಜನಪ್ರಿಯ ನಾಟಕ “ಶಿವದೂತ ಗುಳಿಗೆ ‘ ಇದೇ ಫೆಬ್ರವರಿ ತಿಂಗಳ ಒಂಬತ್ತನೇ ತಾರೀಖೀನಂದು ಸಗಯಾದಲ್ಲಿರುವ ಬಹ್ರೈನ್‌ ಕೇರಳೀಯ ಸಮಾಜದ ಸಭಾಂಗಣದಲ್ಲಿ ಸಂಜೆ 5:00 ಗಂಟೆಗೆ ಸರಿಯಾಗಿ ಪ್ರದರ್ಶನ ಕಾಣಲಿದೆ.

ಬಹ್ರೈನ್‌ ಪ್ರದರ್ಶನದ ಟಿಕೇಟ್‌ಗಳ ಬಿಡುಗಡೆ ಹಾಗೂ ಭಿತ್ತಿ ಪತ್ರದ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಹಾಗೂ ಕೋಟಿ ಚೆನ್ನಯರಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು. “ಶಿವದೂತ ಗುಳಿಗೆ’ ನಾಟಕದ ಭಿತ್ತಿಪತ್ರವನ್ನು ಬಹ್ರೈನ್‌ ಬಿಲ್ಲವಾಸ್‌ನ ಅಧ್ಯಕ್ಷರಾದ ಹರೀಶ್‌ ಪೂಜಾರಿಯವರು, ಕನ್ನಡ ಸಂಘದ ಪ್ರಭಾರ ಅಧ್ಯಕ್ಷರಾದ ಮಹೇಶ್‌ ಕುಮಾರ್‌ ಹಾಗೂ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ, ಹರೀಶ್‌ ಪೂಜಾರಿಯವರು ಇದೊಂದು ದೊಡ್ಡ ಮಟ್ಟದ ಕಾರ್ಯಕ್ರಮವಾಗಿದ್ದು ಇದಕ್ಕೆ ತಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದರು. ನೂರಾರು ಸಂಖ್ಯೆಯಲ್ಲಿ ಕಲಾಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನೆರೆದವರಿಗೆ ನಾಟಕದ ಟಿಕೇಟ್‌ಗಳನ್ನು ಹಸ್ತಾಂತರಿಸಲಾಯಿತು.

ತುಳು ರಂಗಭೂಮಿಯ ಖ್ಯಾತ ನಿರ್ದೇಶಕ ವಿಜಯ್‌ ಕುಮಾರ್‌ ಕೊಡಿಯಾಲಬೈಲ್‌ ಅವರ ನಿರ್ದೇಶನದಲ್ಲಿ “ಕಾಂತಾರ’ ಖ್ಯಾತಿಯ ಸ್ವರಾಜ್‌ ಶೆಟ್ಟಿ ಅವರು ಮುಖ್ಯ ಭೂಮಿಕೆಯಲ್ಲಿರುವ ಈ ನಾಟಕವನ್ನು ಕಲಾಸಂಗಮ ಕಲಾವಿದರು ದ್ವೀಪದಲ್ಲಿ ಆಡಿ ತೋರಿಸಲಿದ್ದು, ವಿಶೇಷ ರಂಗ ಸಜ್ಜಿಕೆ, ವಿಶೇಷವಾದ ಬೆಳಕುಗಳ ಬಳಕೆ ಹಾಗೂ ಹೊಸ ತಂತ್ರಜ್ಞಾನದಿಂದ ಮೈನವಿರೇಳಿಸುವ ಈ ನಾಟಕವು ನಾಡಿನಾದ್ಯಂತ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಹ್ರೈನ್‌ನಲ್ಲಿ ಪ್ರದರ್ಶನವಾಗಲಿರುವ ಈ ನಾಟಕವು ಕಲಾಸಂಗಮ ತಂಡದ 579ನೇ ಯಶಸ್ವಿ ಪ್ರದರ್ಶನವೆಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಶಿವದೂತ ಗುಳಿಗೆ ತಂಡವು ಇತ್ತೀಚೆಗಷ್ಟೇ 555ನೇ ಪ್ರದರ್ಶನದೊಂದಿಗೆ ಯಶಸ್ಸಿನ ಸಂಭ್ರಮಾಚರಣೆಯನ್ನು ಮಂಗಳೂರಿನಲ್ಲಿ ಆಚರಿಸಿತ್ತು. ಬಹ್ರೈನ್‌ ಬಿಲ್ಲವಾಸ್‌ನ ಪ್ರಧಾನ ಕಾರ್ಯದರ್ಶಿ ರೂಪೇಶ್‌ ಸುವರ್ಣ ಅವರು ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದ ಸಮರ್ಪಣೆ ಮಾಡಿದರು. ನಾಟಕದ ರಂಗಸಜ್ಜಿಕೆಗೆ ಬೇಕಾಗುವ ಎಲ್ಲ ಪರಿಕರಗಳು ಇದಾಗಲೇ ದ್ವೀಪವನ್ನು ತಲುಪಿದ್ದು ನಾಟಕಕ್ಕೆ ದಿನಗಣನೆ ಪ್ರಾರಂಭವಾಗಿದೆ. ಈ ನಾಟಕ ಪ್ರದರ್ಶನದ ಬಗೆಗಿನ ಹೆಚ್ಚಿನ ವಿವರಗಳಿಗೆ ಬಹ್ರೈನ್‌ ಬಿಲ್ಲವಾಸ್‌ನ ಅಧ್ಯಕ್ಷರಾದ ಹರೀಶ್‌ ಪೂಜಾರಿಯವರನ್ನು ದೂರವಾಣಿ ಸಂಖ್ಯೆ 973-39049132 ಮೂಲಕ ಸಂಪರ್ಕಿಸಬಹುದು.

ವರದಿ: ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.