ಗಲ್ಫ್ ಕನ್ನಡಿಗರ ಒಕ್ಕೂಟ: ಮುಖ್ಯಮಂತ್ರಿ, ಸಭಾಪತಿಯನ್ನು ಭೇಟಿಯಾಗಿ ಬೇಡಿಕೆ ಸಲ್ಲಿಕೆ
ಎನ್‌ಆರ್‌ಐ ಸಚಿವಾಲಯ ಸ್ಥಾಪಿಸುವ ಭರವಸೆ
Team Udayavani, Feb 24, 2024, 3:20 PM IST
ಅನಿವಾಸಿ ಕನ್ನಡಿಗರ ಬೇಡಿಕೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಿದ ಸಭಾಪತಿ ಯು.ಟಿ. ಖಾದರ್ ಅವರು ಅನಿವಾಸಿಗಳ ಬಗ್ಗೆ ಮತ್ತು ನಾಡು ನುಡಿ ಬಗ್ಗೆ ಅವರಿಗಿರುವ ಅಪರಿಮಿತ ಅಭಿಮಾನದ ಕುರಿತು ಹೊಗಳಿದರು. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಚುರ ಪಡಿಸಿದಂತೆ ಈಗಾಗಲೇ ಎನ್‌ಆರ್‌ಐ ಸಮಿತಿಯ ಉಪಾಧ್ಯಕ್ಷರನ್ನಾಗಿ ಡಾ| ಆರತಿಕೃಷ್ಣ ಅವರನ್ನು ನೇಮಕ ಮಾಡಿದ್ದೇವೆ. ಮುಂದೆ ಕೇರಳದ ಮಾದರಿಯಂತೆ ಎನ್‌ಆರ್‌ಐ ಸಚಿವಾಲಯವನ್ನು ಸ್ಥಾಪಿಸುವ ಭರವಸೆ ನೀಡಿದರು.
ಅಧಿವೇಶನದ ಚರ್ಚೆಯ ಮೊದಲು ಗಲ್ಫ್ ಕನ್ನಡಿಗರ ಒಕ್ಕೂಟದ ವತಿಯಿಂದ (NKRI Gulf Fourm) ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಪತಿ ಯು.ಟಿ. ಖಾದರ್ ಮತ್ತು ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷರಾದ ಡಾ| ಆರತಿ ಕೃಷ್ಣ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಗಲ್ಫ್ ಕನ್ನಡಿಗರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳ ಪರಿಹಾರಕ್ಕೆ ಕೆಎನ್‌ಆರ್‌ಐ ಸಚಿವಾಲಯದ ಅಗತ್ಯವಿದೆ. ಕೇರಳ ರಾಜ್ಯದಲ್ಲಿ ಈ ಕುರಿತು ಅನಿವಾಸಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸಲು ಅಲ್ಲಿ ಪ್ರತ್ಯೇಕ ಸಚಿವಾಲಯವಿದ್ದೂ, ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಪ್ರಾರಂಭಿಸಬೇಕೆನ್ನುವ ಒಕ್ಕೂಟದ ಬೇಡಿಕೆಯಿಟ್ಟಿತು. ಗಲ್ಫ್ ಕನ್ನಡಿಗರ ಒಕ್ಕೂಟದ ಅಧ್ಯಕ್ಷರಾದ ಇಬ್ರಾಹಿಂ ಖಲೀಲ್ , ಉಪಾಧ್ಯಕ್ಷರಾದ ರಮಾನಂದ ಪ್ರಭು, ಇಬ್ರಾಹಿಂ ಹುಸೇನ್ ಈ ಸಂದರ್ಭ ಉಪಸ್ಥಿತರಿದ್ದರು.
ಗಲ್ಫ್ ಕನ್ನಡಿಗರ ಒಕ್ಕೂಟವು ಮಧ್ಯ ಪ್ರಾಚ್ಯರಾಷ್ಟ್ರಗಳಾದ ಯುಎಇ, ಕುವೈತ್, ಕತಾರ್, ಒಮಾನ್, ಬಹ್ರೈನ್ ಮತ್ತು ಸೌದಿ ಅರೇಬಿಯಾದಲ್ಲಿ ಹಲವಾರು ದಶಕಗಳಿಂದ ಕೆಲಸ ಮಾಡುತ್ತಿರುವ ಕನ್ನಡಿಗರು ರಚಿಸಿಕೊಂಡಿರುವ ಸಮಿತಿಯಾಗಿದೆ. ಇವರು ಸ್ಥಳೀಯ ಗಲ್ಫ್ ದೇಶಗಳ ಕರ್ನಾಟಕ ಮೂಲದ ಜನರಿಂದ ಸ್ಥಾಪಿತವಾದ ಕನ್ನಡ ಸಂಘ, ಕನ್ನಡಕೂಟ, ಕನ್ನಡ ಸಂಘಟನೆಗಳ ಮೂಲಕ ಗಲ್ಫ್ ರಾಷ್ಟ್ರಗಳಲ್ಲಿ ಕನ್ನಡ ನುಡಿ, ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತ, ನಾಡು ನುಡಿಗೆ ಅಗಾಧವಾದ ಸೇವೆಯನ್ನು ಸಲ್ಲಿಸಿದ್ದಾರೆ.
ಗಲ್ಫ್ ಕನ್ನಡಿಗರ ಒಕ್ಕೂಟದ ಕೆಲಸ ಕಾರ್ಯಗಳನ್ನು ಶ್ಲಾಘಿಸಿದ ಮುಖ್ಯಮಂತ್ರಿಗಳು, ಸಭಾಪತಿಗಳು ಸರಕಾರದ ವತಿಯಿಂದ ಎಲ್ಲ ರೀತಿಯ ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡುವ ಭರವಸೆ ನೀಡಿದರು ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಸ್. ರಂಗನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.