Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

Team Udayavani, Sep 8, 2024, 8:43 AM IST

2-desiswara-1

“ಗುರು ಬ್ರಹ್ಮ ಗುರು ವಿಷ್ಣು

ಗುರುದೇವೋ ಮಹೇಶ್ವರ’ ಸಂಸ್ಕೃತ ಶ್ಲೋಕ

“ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ – ಎನ್ನುವ ದಾಸವಾಣಿ

“ಮನಶ್ಚೇನ್ನ ಲಗ್ನಮ್‌ ಗುರೊರಂಗ್ರಿ ಪದ್ಮೇ ತತಃ ಕಿಂ….’ ಎನ್ನುವ ಶಂಕರಾಚಾರ್ಯರ ಗುರುವಷ್ಟಕ ಇವೆಲ್ಲ ಮುಕ್ತಕಗಳು ನಮಗರಿವಿಲ್ಲದೆಯೇ ನಮ್ಮೆಲ್ಲರ ಮನಸ್ಸಿನಲ್ಲಿ ಅಚ್ಚೊತ್ತಿದೆ. ಇವೆಲ್ಲ ಒಬ್ಬ ಮನುಷ್ಯನ ಜೀವನದಲ್ಲಿ ಗುರುವಿಗಿರುವ ಮಹತ್ವದ ಸ್ಥಾನವನ್ನು, ನಮ್ಮ ಭಾರತೀಯ ಸಂಸ್ಕೃತಿಯು ಗುರುವಿಗೆ ಕೊಟ್ಟಿರುವ ವಿಶೇಷ ಸ್ಥಾನವನ್ನು ತೋರಿಸುತ್ತದೆ.

ಚಾಣಕ್ಯ -ಚಂದ್ರಗುಪ್ತ, ಗುರು ರಾಮದಾಸ್‌ -ಶಿವಾಜಿ, ಹರಿಹರ,ಬುಕ್ಕ-ವಿದ್ಯಾರಣ್ಯರು- ಇವರೆಲ್ಲ ಭಾರತದ ಇತಿಹಾಸ ಪ್ರಸಿದ್ಧ ಗುರುಶಿಷ್ಯರ ಜೋಡಿಗಳು. ಗುರುಗಳ ಮಾರ್ಗದರ್ಶನದಿಂದ ಶಿಷ್ಯರು ಏರಬಹುದಾದ ಎತ್ತರವನ್ನು ಸಾಧಿಸಿ ತೋರಿಸಿದವರು. “ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು’ಎನ್ನುವ ಪ್ರಸಿದ್ಧ ಹೇಳಿಕೆಯನ್ನು ಸತ್ಯವಾಗಿಸಿದವರು.

ಮಣ್ಣಿನ ಮುದ್ದೆಯಂತಿರುವ ಮಗು ಈ ಜೀವನದಲ್ಲಿ ಬೆಳೆಯುತ್ತಾ ಮನುಷ್ಯ ಎನಿಸಿಕೊಳ್ಳುವ ಪಯಣದಲ್ಲಿ ಅವನು ಏನಾಗುತ್ತಾನೆ ಎನ್ನುವುದು ಅವನು ಬೆಳೆಯುವ ವಾತಾವರಣ, ಅವನ ಮೇಲೆ ಗಾಢವಾಗಿ ಪ್ರಭಾವ ಬೀರುವ ಜನಗಳಿಂದ ನಿರ್ಧಾರವಾಗುತ್ತದೆ. ಒಳ್ಳೆಯ ಗುರು  ಒಬ್ಬ ವ್ಯಕ್ತಿಯ ಜೀವನದಲ್ಲಿ ಬಹುಮುಖ್ಯನಾಗುತ್ತಾನೆ. ಹಾಗಾಗಿ ಶಿಕ್ಷಕನ ವೃತ್ತಿಯು ಪ್ರಪಂಚದಲ್ಲಿ ಅತ್ಯಂತ ಪವಿತ್ರವಾದ ವೃತ್ತಿ ಎನಿಸಿಕೊಳ್ಳುತ್ತದೆ. ಈ ಪವಿತ್ರ ವೃತ್ತಿಗೆ ಯಾಕೋ ನಮ್ಮ ಸಮಾಜದಲ್ಲಿ ಈಗ ಅದಕ್ಕೆ ಬೇಕಾದ ಮನ್ನಣೆ ಸಿಗುತ್ತಿಲ್ಲ ಎನಿಸುತ್ತದೆ. ಬೆಳೆಯುವ ಮಕ್ಕಳು ಏನಾಗುತ್ತೀರಿ ಎಂದು ಕೇಳಿದಾಗ ಶಿಕ್ಷಕ ಅಥವಾ ಶಿಕ್ಷಕಿ ಆಗುತ್ತೇನೆ ಎಂದರೆ ಅವರನ್ನು ನಾವು ಪ್ರೋತ್ಸಾಹಿಸಿ ಅವರು ದಿಕ್ಕಿನಲ್ಲಿ ಬೆಳೆಯುವಂತೆ ನೋಡಿಕೊಳ್ಳುವುದು ಪೋಷಕರ ಕರ್ತವ್ಯ.

ದಿನಬೆಳಗಾದರೆ ಅಮಾನವೀಯ ಕೃತ್ಯಗಳ ಸುದ್ದಿಗಳನ್ನು ಎಲ್ಲ ಕಡೆ ಕೇಳುತ್ತಿರುವ ಈ ದಿನಗಳಲ್ಲಿ ಸ್ವಸ್ಥ ಪ್ರಜೆಗಳನ್ನು ಬೆಳೆಸುವ ಉತ್ತಮ ಗುರುಗಳ ಅಗತ್ಯ ಬಹಳವಿದೆ. ಭಾರತದ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್‌ ಕಲಾಂ, ಕರ್ನಾಟಕದ ಅನುಭವಿ ಶಿಕ್ಷಣತಜ್ಞ  ಗುರುರಾಜ ಕರ್ಜಗಿ -ಇವರೆಲ್ಲ ಸಾವಿರಾರು ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾದ ಆಧುನಿಕ ಮಹಾನ್‌ ಗುರುಗಳು. ಅಂತಹ ಗುರುಗಳು ಸಾವಿರ ಸಂಖ್ಯೆಯಲ್ಲಿ ಬರಬೇಕು.

ಈ ನಿಟ್ಟಿನಲ್ಲಿ ಶಿಕ್ಷಕರ ದಿನಾಚರಣೆ ಬಹಳ ಮಹತ್ವದ ದಿನ. ಮಾಜಿ ರಾಷ್ಟ್ರಪತಿಗಳಾದ ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನವಾದ ಸೆ.5ನ್ನು ಭಾರತದಲ್ಲಿ ಶಿಕ್ಷಕರ ದಿನವನ್ನಾಗಿ ಆಚರಿಸಿದರೆ, ಪಾಶ್ಚಾತ್ಯ ದೇಶಗಳಲ್ಲಿ ಅಕ್ಟೋಬರ್‌ 5ನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಉತ್ತಮ ಶಿಕ್ಷಕರು ಬೆಳೆಯುವಂತೆ ಮಾಡುವುದು ಈಗಿನ ಸಮಾಜದ ಅಗತ್ಯವಾಗಿದೆ.

-ಸುಧಾ ಶಶಿಕಾಂತ್‌,

ಮಸ್ಕತ್‌

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.