ಬಾಲಕಿಯರಿಗೆ ಅಗತ್ಯ ಸೌಲಭ್ಯ ಒದಗಿಸಿ
ಬಾಲ ಮಂದಿರ ಮಕ್ಕಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ
Team Udayavani, Apr 4, 2019, 4:43 PM IST
ಯಾದಗಿರಿ: ಬಾಲ ಮಂದಿರಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಭೇಟಿ ನೀಡಿ ಮಕ್ಕಳನ್ನು ವಿಚಾರಿಸಿದರು.
ಯಾದಗಿರಿ: ನಗರದ ಸರ್ಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಯಲ್ಲಿ ವಿವಿಧ ರೀತಿಯ ಸಮಸ್ಯೆಯಲ್ಲಿ ಇರುವ ಮಕ್ಕಳು ವಾಸಿಸುತ್ತಿದ್ದಾರೆ. ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಮಕ್ಕಳಿಗೆ
ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಂಡು ರಾಜ್ಯದಲ್ಲಿಯೆ ಒಂದು ಮಾದರಿ ಸಂಸ್ಥೆಯಾಗಿ ಪರಿವರ್ತಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದರು.
ನಗರದ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಹಾಗೂ ಸುರಕ್ಷಿತ ವ್ಯವಸ್ಥೆ ಪರಿಶೀಲಿಸಿದ ಅವರು, ಮಕ್ಕಳನ್ನು ಖುದ್ದು ವಿಚಾರಿಸಿದರು.
ಮಕ್ಕಳಿಗೆ ನೀಡುವ ಊಟ, ವಸತಿ ವ್ಯವಸ್ಥೆಗಳ ಬಗ್ಗೆ ಹಾಗೂ ಬಾಲಮಂದಿರದಲ್ಲಿ ಯಾವುದಾದರೂ ರೀತಿಯ ಶೋಷಣೆಗಳು ನಡೆಯುತ್ತಿವೆಯೇ? ಯಾವುದಾದರೂ ಸಮಸ್ಯೆಗಳಿವೆಯೇ ಎಂದು ಪ್ರಶ್ನಿಸಿ ಮಾಹಿತಿ ಪಡೆದರು. ಬಾಲಮಂದಿರದಲ್ಲಿ ಲಭ್ಯವಿರುವ ಅವಕಾಶ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳುವಂತೆ ಬಾಲಕಿಯರಿಗೆ ಕಿವಿಮಾತು ಹೇಳಿದರು.
ಬಾಲ ಮಂದಿರದಲ್ಲಿ ಇರುವ ಮಕ್ಕಳ ಸುರಕ್ಷತೆ, ಶೈಕ್ಷಣಿಕ ಅವಕಾಶಗಳು, ಆರೋಗ್ಯ ಚಿಕಿತ್ಸಾ ಸೌಲಭ್ಯಗಳು ಮಹತ್ವದ ವಿಷಯಗಳಾಗಿವೆ. ಅವುಗಳ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಬಾಲಕಿಯರ ಮಂದಿರ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಜಾಗೃತರಾಗಿ ಕರ್ತವ್ಯ ನಿರ್ವಹಿಸಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು. ಎಲ್ಲರನ್ನೂ ಉತ್ತಮವಾಗಿ ಆರೈಕೆ ಮಾಡುವಂತೆ ನಿರ್ದೇಶನ ನೀಡಿದರು. ಬಾಲಮಂದಿರಕ್ಕೆ ತನ್ನದೇ ಆದ ಸ್ವಂತ ಕಟ್ಟಡ ಇದೆ. ಸುರಕ್ಷತಾ ವ್ಯವಸ್ಥೆ ಸಮಾಧಾನಕರವಾಗಿದೆ. 2017-18ನೇ ಸಾಲಿನ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್ ಡಿಬಿ)ಯ ಮ್ಯಾಕ್ರೋ ಕ್ರಿಯಾ ಯೋಜನೆಯಡಿ ಹೊಸ ಕಟ್ಟಡದಲ್ಲಿ ಅವಶ್ಯವಿರುವ ಮೂಲಭೂತ ಸೌಲಭ್ಯ ಹಾಗೂ ಪೀಠೊಪಕರಣ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನಷ್ಟು ಬೆಡ್, ಬಟ್ಟೆ ಒದಗಿಸುವಂತೆ ಸೂಚಿಸಿದರು.
ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.