ಸಾರ್ವಜನಿಕ ಅನುಕೂಲಕ್ಕಾಗಿ ಕಾಯಂ ಜನತಾ ನ್ಯಾಯಾಲಯ

ರಾಜ್ಯದ ಆರು ಜಿಲ್ಲಾ ಕೇಂದ್ರದಲ್ಲಿ ಜನತಾ ನ್ಯಾಯಾಲಯ ಸ್ಥಾಪನೆ

Team Udayavani, Apr 4, 2019, 3:54 PM IST

4-April-19

ಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ವೀಡಿಯೋ ಕಾನ್ಫೆರೆನ್ಸ್‌ನಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್‌ಕುಮಾರ್‌ ಹಂಚಾಟೆ ಮಾತನಾಡಿದರು.

ಬಳ್ಳಾರಿ: ವಿವಾದಾಸ್ಪದ ಪಕ್ಷಗಳ ತೃಪ್ತಿಯೊಂದಿಗೆ ಸಾರ್ವಜನಿಕ ಉಪಯುಕ್ತತೆಗಳ ವಿವಾದಗಳನ್ನು ನಿರ್ಧರಿಸುವಲ್ಲಿ ಕಾಯಂ ಜನತಾ ನ್ಯಾಯಾಲಯ ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವಕುಮಾರ್‌ ಹಂಚಾಟೆ ತಿಳಿಸಿದರು.

ನಗರದ ಜಿಲ್ಲಾ ಕೋರ್ಟ್‌ ಆವರಣದಲ್ಲಿ ವೀಡಿಯೋ ಕಾನ್ಫೆರೆನ್ಸ್‌ ಮೂಲಕ ಮಾತನಾಡಿದ ಅವರು, ರಾಜ್ಯದಲ್ಲಿ 6 ಜಿಲ್ಲಾ ಕೇಂದ್ರದಲ್ಲಿ ಜನತಾ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ಈ ನ್ಯಾಯಾಲಯದಲ್ಲಿ 9 ಕಾನೂನಿನ ಸೇವೆಗಳಾದ ವಿಮೆ, ಬ್ಯಾಂಕಿಂಗ್‌ ಹಾಗೂ ಹಣಕಾಸು ಸಂಸ್ಥೆಗಳ ಸೇವೆ, ಪ್ರಯಾಣಿಕರನ್ನು ಅಥವಾ ಸರಕುಗಳನ್ನು ವಾಯು ಮಾರ್ಗ, ರಸ್ತೆ ಅಥವಾ ಜಲಮಾರ್ಗ ಮೂಲಕ ಸಾಗಿಸುವ ಸಾಗಣಿಕೆಯ ಸೇವೆ, ಅಂಚೆ, ಟೆಲಿಗ್ರಾಫ್‌ ಅಥವಾ ದೂರವಾಣಿ ಸೇವೆ, ಸಾರ್ವಜನಿಕರಿಗೆ ವಿದ್ಯುತ್‌, ನೀರಿನ ಸರಬರಾಜು ಮಾಡುವ ಯಾವುದೇ ಸಂಸ್ಥೆ, ಸಾರ್ವಜನಿಕ ಸಂರಕ್ಷಣೆ ಅಥವಾ ನೈರ್ಮಲ್ಯ ವ್ಯವಸ್ಥೆ, ವಸತಿ ಮತ್ತು ರಿಯಲ್‌ ಎಸ್ಟೇಟ್‌ ಸೇವೆ, ಶಿಕ್ಷಣ ಸೇವೆ ಹಾಗೂ ಇತರೆ ಸೇವೆಗಳನ್ನು ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜನತಾ ನ್ಯಾಯಾಲಯ ಮುಖ್ಯ ಅಂಶಗಳು: ಕಾಯಂ ಜನತಾ ನ್ಯಾಯಾಲವು ಜಿಲ್ಲಾ ನ್ಯಾಯಾಧೀಶರಾಗಿರುವ ಅಥವಾ ಜಿಲ್ಲಾ ನ್ಯಾಯಾಧೀಶರಿಗಿಂತ ಹೆಚ್ಚಿನ ಶ್ರೇಣಿಯ ನ್ಯಾಯಿಕ ಅಧಿಕಾರಿಯಾಗಿರುವ ವ್ಯಕ್ತಿಯೊಬ್ಬರನ್ನು ಅದರ ಅಧ್ಯಕ್ಷರನ್ನಾಗಿ ಮತ್ತು ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ಸಾಕ್ಷಷ್ಟು ಅನುಭವ ಇರುವ ಇಬ್ಬರು ವ್ಯಕ್ತಿಗಳು ಸದಸ್ಯರಾಗಿರುತ್ತಾರೆ. ವಿವಾದ ಹೊಂದಿರುವ ಯಾವುದೇ ಪಕ್ಷಕಾರನು ಸಾರ್ವಜನಿಕ ಉಪಯುಕ್ತತಾ ಸೇವೆಗಳ ಕುರಿತಂತೆ ಆ ವಿವಾದವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವುದಕ್ಕೆ ಮೊದಲು ವಿವಾದದ ಇತ್ಯರ್ಥಕ್ಕಾಗಿ ಕಾಯಂ ಜನತಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಯಾವುದೇ ಕಾನೂನಿನಡಿ ರಾಜಿ ಮಾಡಿಕೊಳ್ಳುವ ಅವಕಾಶವಿರದ ಅಪರಾಧಕ್ಕೆ ಸಂಬಂಧಿಸಿದ ವಿಷಯವನ್ನು ಇತ್ಯರ್ಥಗೊಳಿಸಲು ಕಾಯಂ ಜನತಾ ನ್ಯಾಯಾಲಯಕ್ಕೆ ಅಧಿಕಾರ ಇರುವುದಿಲ್ಲ ಎಂದು ತಿಳಿಸಿದರು.

ಕಾಯಂ ಜನತಾ ನ್ಯಾಯಾಲಯ ಹೊರಡಿಸುವ ಐತೀರ್ಪು: ಕಾಯಂ ಜನತಾ ನ್ಯಾಯಾಲಯವು ಹೊರಡಿಸುವ ಪ್ರತಿಯೊಂದು ಐತೀರ್ಪುನ್ನೂ ಸಿವಿಲ್‌ ನ್ಯಾಯಾಲಯದ ಡಿಕ್ರಿಯೆಂದೇ ಪರಿಭಾವಿಸಲಾಗುವುದು. ಈ ಅಧಿನಿಯಮದಡಿ ಪ್ರಕರಣದ ಗುಣಾವಗುಣಗಳ ಮೇರೆಗೆ ಅಥವಾ ಇತ್ಯರ್ಥದ ಒಪ್ಪಂದದಿಂದ ಹೊರಡಿಸಲಾದ ಕಾಯಂ ಜನತಾ ನ್ಯಾಯಾಲಯದ ಪ್ರತಿಯೊಂದು ಐತೀರ್ಪು ಅಂತಿಮವಾದುದಾಗಿದ್ದು ಸಂಬಂಧಿಸಿದ ಪಕ್ಷಕಾರರು ಮತ್ತು ಅವರ ಮೂಲಕ ಕ್ಲೇಮ್‌ ಮಾಡುವ ಪ್ರತಿಯೊಬ್ಬರಿಗೂ ಬಂಧನಕಾರಿಯಾಗುತ್ತದೆ. ಕಾಯಂ ಜನತಾ ನ್ಯಾಯಾಲಯ ಐತೀರ್ಪಿನ ವಿರುದ್ಧ ಯಾವುದೇ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತಿಲ್ಲ ಎಂದರು.

ಕಾಯಂ ಜನತಾ ನ್ಯಾಯಾಲಯ ಜಾಗೃತಿ ಮೂಡಿಸಿ: ಕಾಯಂ ಜನತಾ ನ್ಯಾಯಾಲಯವು ಪ್ರತಿ ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಈ ಜಾಗೃತಿ ಜಾಥಾದಲ್ಲಿ ಚರ್ಚೆ, ಪ್ರಬಂಧ ಮತ್ತು ಭಾಷಣ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಕಾಯಂ ಜನತಾ ನ್ಯಾಯಾಲಯದ ಕುರಿತು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ಸಾಕ್ಷರತಾ ಬಸ್‌ ಸಂಚಾರದ ಮೂಲಕ ಅರಿವು ಮೂಡಿಸಬೇಕು. ಪ್ರಕರಣಗಳ ಸಂಕ್ಷಿಪ್ತವಾಗಿ ಸಾರ್ವಜನಿಕರಿಗೆ ವಿವರಿಸುವ ಪ್ರಯತ್ನವನ್ನು ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕೋರ್ಟ್‌ ವ್ಯವಸ್ಥಾಪಕ ವೀರೇಶ್‌ ಸೇರಿದಂತೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.