ಪ್ರಧಾನಿ ಮೋದಿ ಬಳಿ ಕೋಲಿ ನಿಯೋಗ
ಒಂಭತ್ತು ರಾಜ್ಯದಲ್ಲಿ ಎಸ್‌ಟಿ ಸೌಲಭ್ಯಅಧಿವೇಶನ ನಂತರ ಪ್ರಧಾನಿ ಭೇಟಿಗೆ ನಿರ್ಧಾರ
Team Udayavani, Dec 2, 2019, 10:45 AM IST
ಕಲಬುರಗಿ: ಕರ್ನಾಟಕದಲ್ಲಿ ಕೋಲಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಬಳಿಗೆ ಜನವರಿ ತಿಂಗಳೊಳಗೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಅಖೀಲ ಭಾರತೀಯ ಕೋಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ, ಗುಜರಾತ್‌ನ ಕುಡಿಯುವ ನೀರು ಸರಬರಾಜು, ಪಶುಸಂಗೋಪನಾ ಮತ್ತು ಗ್ರಾಮೀಣ ವಸತಿ ಖಾತೆ ಸಚಿವ ಕುನಾವರ್‌ಜೀ ಬಾಯಿ ಭಾವಲಿಯಾ ಭರವಸೆ ನೀಡಿದರು.
ನಗರದ ರಾಮಮಂದಿರ ಸಮೀಪದ ಜಿಡಿಎ ಲೇಔಟ್‌ನಲ್ಲಿರುವ ನೂತನ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಕಾರಿಣಿ, ಜನಜಾಗೃತಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ 16 ರಾಜ್ಯದಲ್ಲಿ ಈಗಾಗಲೇ ಕೋಲಿ ಸಮಾಜ ಎಸ್‌ಸಿ ಹಾಗೂ ಒಂಭತ್ತು ರಾಜ್ಯದಲ್ಲಿ ಎಸ್‌ಟಿ ಸೌಲಭ್ಯ ಪಡೆಯುತ್ತಿದೆ. ಅದೇ ರೀತಿ ಕರ್ನಾಟಕ ರಾಜ್ಯದ ಕೋಲಿ ಸಮಾಜದ ಜನರಿಗೂ ಸಾಮಾಜಿಕ ನ್ಯಾಯ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಕೋಲಿ ಸಮುದಾಯವನ್ನು ಶೀಘ್ರ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇಲೆ ಒತ್ತಡ ಹಾಕಲಾಗುವುದು ಎಂದರು.
ಈಗ ಸಂಸತ್ ಅಧಿವೇಶನ ಆರಂಭ ಆಗಿರುವುದರಿಂದ ಪ್ರಧಾನಿ ಹಾಗೂ ಗೃಹ ಸಚಿವರ ಭೇಟಿಗೆ ಸಮಯ ಸಿಗುವುದು ಕಷ್ಟವಾಗಲಿದೆ. ಆದ್ದರಿಂದ ಜನವರಿಯೊಳಗೆ ಭೇಟಿಗೆ ಕಾಲಾವಕಾಶ ಕೇಳುತ್ತೇವೆ. ದೇಶದ ಎಲ್ಲ ಕೋಲಿ ಸಮಾಜದ ಸಂಸದರು ಹಾಗೂ ಕರ್ನಾಟಕದ ಎಲ್ಲ ಪಕ್ಷಗಳ ಸಂಸದರನ್ನು ಒಳಗೊಂಡ ನಿಯೋಗದೊಂದಿಗೆ ಭೇಟಿ ಮಾಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವುದು ಮೂರು ದಶಕಗಳ ಪ್ರಮುಖ ಬೇಡಿಕೆಯಾಗಿದೆ. ಬೇಡಿಕೆ ಈಡೇರಿಕೆ ಸಂಬಂಧ ರಾಷ್ಟ್ರಪತಿ ರಾಮನಾಥ ಕೋವಿಂದ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಅಖೀಲ ಭಾರತೀಯ ಕೋಲಿ ಸಮಾಜದ ರಾಜ್ಯಾಧ್ಯಕ್ಷ ತಿಪ್ಪಣ್ಣ ರೆಡ್ಡಿ ಮಾತನಾಡಿ, ಕೋಲಿ ಸಮಾಜದ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋಲಿ ಭವನದ ಆವರಣದಲ್ಲಿ 21 ಕೋಣೆಯುಳ್ಳ ಹಾಸ್ಟೆಲ್ ನಿರ್ಮಿಸುವ ಬಗ್ಗೆ ಚಿಂತಿಸಲಾಗಿದೆ. ಸಮಾಜದಲ್ಲಿ ಗೊಂದಲ ಮೂಡಿಸುವ ಹಾಗೂ ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಯಾರೂ ಮಾಡಬಾರದು. ಹಾವೇರಿಯ ಚೌಡಯ್ಯ ಗುರುಪೀಠದ ಸಮಾರಂಭಕ್ಕೆ ರಾಷ್ಟ್ರಪತಿಗೆ ಆಹ್ವಾನ ಮಾಡಲು ಪ್ರಯತ್ನಿಸಲಾಗುವುದು ಎಂದರು.
ರಾಜಸ್ಥಾನ ಸಂಸದ ಬಹಾದ್ದೂರ ಸಿಂಗ್ ಕೋಲಿ, ಉತ್ತರ ಪ್ರದೇಶದ ಸಂಸದ ಘನಶ್ಯಾಮ್ ಅನುರಾಗಿ, ಮಹಾರಾಷ್ಟ್ರದ ಸಿದ್ದಾರ್ಥ ಕೋಲಿ, ಬಿಜೆಪಿ ಮುಖಂಡ ಶರಣಪ್ಪ ತಳವಾರ, ಕಾಂಗ್ರೆಸ್ ಮುಖಂಡ ರಾಜಗೋಪಾಲರೆಡ್ಡಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಹಾವೇರಿಯ ನರಸಿಪುರ ಪೀಠದ ಪೀಠಾ ಧಿಪತಿ ಶಾಂತಭೀಷ್ಮ ಸ್ವಾಮೀಜಿ, ತೋನಸನಹಳ್ಳಿಯ ಮಲ್ಲಣ್ಣಪ್ಪ ಮುತ್ಯಾ, ಭಾರದ್ವಾಜ ಮಹಾರಾಜರು ಆಶೀವರ್ಚನ ನೀಡಿದರು.
ಸಂಘಟನಾ ಕಾರ್ಯದರ್ಶಿ ಶಿವಲಿಂಗಪ್ಪ ಕಿನ್ನೂರ, ಸರ್ಕಾರಿ ಕೋಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಬಾಬುರಾವ್ ಜಮಾದಾರ ಬಾದನಹಳ್ಳಿ, ನಿಕಟ ಪೂರ್ವ ಅಧ್ಯಕ್ಷ ಸತ್ಯನಾರಾಯಣ ಪವಾರ, ದತ್ತಾತ್ರೇಯ ರೆಡ್ಡಿ ಮುದಿರಾಜ, ರಂಜಿತಾ ಕೋಲಿ, ವೀರೇಂದ್ರ ಕಶ್ಯಪ, ಡಾ| ಭಾರತಿಬಹನ್, ಭಾನುಪ್ರತಾಪ ವರ್ಮಾ, ಕಿಶೋರಬಾಯಿ, ಅನಿಲಬಾಯಿ, ಮುಖೇಶ ಕೋರಿ ಇಂದಿರಾ ಶಕ್ತಿ, ಶಿವಶರಣಪ್ಪ ಕೊಬಾಳ, ಆರ್. ಎಂ.ನಾಟೀಕಾರ್, ವಸಂತರಾವ ನರಿಬೋಳ,
ಜಯಪ್ರಕಾಶ ಕಮಕನೂರ, ಹುಲಿಕಂಠರಾವ ಹೆರೂರ, ಶರಣು ಕೋಲಿ, ಬಾಬುರಾವ ಕೊಬಾಳ ಹಾಗೂ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಕೋಲಿ ಸಮಾಜದ ಮುಖಂಡರು, ಸಮಾಜ ಬಾಂಧವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.