ಅಕ್ರಮ ಕಟ್ಟಡ ತೆರವಿಗೆ ಗ್ರಾಮಸ್ಥರ ಪಟ್ಟು
ಕ್ರಮಕ್ಕೆ ಅಧಿಕಾರಿಗಳ ಹಿಂದೇಟು•ರಸ್ತೆ ಬದಿಯಲ್ಲೇ ಅತಿಕ್ರಮಣ
Team Udayavani, Jul 1, 2019, 9:54 AM IST
ಆಳಂದ: ನಿಂಬರಗಾ ಗ್ರಾಮದ ರಸ್ತೆ ಅಗಲೀಕರಣ ಮತ್ತು ಕಾಮಗಾರಿಗೆ ಒತ್ತಾಯಿಸಿ ಗ್ರಾಮಸ್ಥರು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ರವಿವಾರವೂ ಮುಂದುವರಿದಿದೆ.
ಆಳಂದ: ತಾಲೂಕಿನ ನಿಂಬರಗಾ ಗ್ರಾಮದಲ್ಲಿ ನನೆಗುದಿಗೆ ಬಿದ್ದಿರುವ ಮುಖ್ಯ ರಸ್ತೆಯನ್ನು ಶೀಘ್ರವೇ ಅಕ್ರಮ ಕಟ್ಟಡ ತೆರವುಗೊಳಿಸುವ ಮೂಲಕ ಅಗಲೀಕರಣಗೊಳಿಸಿ ರಸ್ತೆ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿ ಕಳೆದ ಎಂಟು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹ ರವಿವಾರವೂ ಮುಂದುವರಿದಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದರಿಂದ ಹಾಗೆ ಮುಂದುವರಿದಿದೆ.
ಗ್ರಾಮದ ಡಾ| ಅಂಬೇಡ್ಕರ್ ಚೌಕ್‌ದಿಂದ ಕಂಬಾರ ಅಂಗಡಿ ವರೆಗೆ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆ ಬದಿಯಲ್ಲಿ ಕೆಲವರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಇದನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಬೇಕು ಎಂದು ಒತ್ತಾಯಿಸಲಾಗಿದೆ. ಕಳೆದ ಎರಡು ದಿನಗಳಿಂದ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರರು ಮಂಗಳವಾರದಿಂದ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಅವರ ಭರವಸೆಯಂತೆ ಅಗಲೀಕರಣ ಕಾಮಗಾರಿಗಳು ನಡೆಯದೇ ಇರುವುದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ರಸ್ತೆ ಅಗಲೀಕರಣ ಮಾಡುವವರೆಗೂ ಧರಣಿ ಸತ್ಯಾಗ್ರಹ ಹಿಂದಕ್ಕೆ ಪಡೆಯುವುದಿಲ್ಲ ಎಂದು ಮುಖಂಡ ವಿಠ್ಠಲ ಕೋಣೆಕರ್ ತಿಳಿಸಿದರು.
ಪ್ರತಿಭಟನೆಯಲ್ಲಿ ಭೀಮಾಶಂಕರ ಹಳಿಮನಿ, ಪರಮೇಶ್ವರ ಶಿವಗೊಂಡ, ರವಿ ಯಳಸಂಗಿ, ರಾಚಣ್ಣ ವಾಗ್ದರಿ, ನಾಗಪ್ಪ ಟೆಕರಿ, ಮಲ್ಲಿಕಾರ್ಜುನ ನಿರ್ಮಲಕರ್, ಅಂಬಾರಾಯ ಮುದ್ದೇಬಿಹಾಳ, ಸಂತೋಷ ಶರಣ, ಸೂರ್ಯಕಾಂತ ಕಂಟೇಕೂರ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.