ಪಪಂ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಿಸಿ
ಔರಾದನಲ್ಲಿ ಸಂಸದರಿಗೆ ಸನ್ಮಾನ-ಪಟ್ಟಣ ಪಂಚಾಯತ ಚುನಾವಣೆ ಬಹಿರಂಗ ಪ್ರಚಾರ
Team Udayavani, May 26, 2019, 4:16 PM IST
ಔರಾದ: ಪಟ್ಟಣದಲ್ಲಿ ನಡೆದ ಸಂಸದರಿಗೆ ಸನ್ಮಾನ ಹಾಗೂ ಪಟ್ಟಣ ಪಂಚಾಯತ ಚುನಾವಣೆ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಸಂಸದ ಭಗವಂತ ಖೂಬಾ ಮಾತನಾಡಿದರು.
ಔರಾದ: ಬೀದರ ಜಿಲ್ಲೆಯ ಜನರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದಂತೆ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಟ್ಟಣದ ಜನರು ಬಿಜೆಪಿ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು.
ಪಟ್ಟಣದಲ್ಲಿ ಶನಿವಾರ ತಾಲೂಕು ಬಿಜೆಪಿ ಘಟಕ ಆಯೋಜಿಸಿದ್ದ ಸಂಸದರಿಗೆ ಸನ್ಮಾನ ಹಾಗೂ ಪಟ್ಟಣ ಪಂಚಾಯತ ಚುನಾವಣೆ ಬಹಿರಂಗ ಪ್ರಚಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಬಿಜೆಪಿ ಸರ್ಕಾರದಿಂದ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯವಾಗಿದೆ ಎಂದು ಮತದಾರರು ದೇಶದ 19 ರಾಜ್ಯಗಳಲ್ಲಿ ಕಾಂಗ್ರೆಸ್ ಮುಕ್ತ ಮಾಡಿದ್ದಾರೆ. ಅದರಂತೆ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಟ್ಟಣದ ಜನರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಅಧಿಕಾರ ನೀಡದೆ ಬಿಜೆಪಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನೀಡುವ ಮೂಲಕ ಕಾಂಗ್ರೆಸ್ ಮುಕ್ತ ಪಟ್ಟಣ ಪಂಚಾಯತ ಮಾಡಬೇಕು ಎಂದರು.
ಈ ಹಿಂದೆ ನಮ್ಮ ಆಡಳಿತಾವಧಿಯಲ್ಲಿ ನೀಡಿದ ಪ್ರತಿಯೊಂದು ಭರವಸೆಗಳನ್ನು ಎರಡನೇ ಅವಧಿಯಲ್ಲಿ ಈಡೇರಿಸುತ್ತೇನೆ ಎಂದರು. ಮದ್ಯ ಮಾರಾಟ ಮಾಡುವರ ಕೈಗೆ, ಬಿಳಿ ಕೋಳಿ ಮಾರಾಟ ಮಾಡುವ ಕೈಗೆ ಪಟ್ಟಣ ಪಂಚಾಯತ ಅಧಿಕಾರ ನೀಡಿದರೆ ಪಟ್ಟಣ ಅಭಿವೃದ್ಧಿಯಿಂದ ಶಾಶ್ವತವಾಗಿ ದೂರ ಉಳಿಯುತ್ತದೆ. ಹಣ ಹೆಂಡಕ್ಕೆ ಮತದಾರರು ಮಾರು ಹೋಗದೆ ಉತ್ತಮ ಆಡಳಿತ ನೀಡುವ ನಿಮ್ಮ ವಾರ್ಡ್‌ನ ಅಭ್ಯರ್ಥಿಗಳನ್ನು ಧೈರ್ಯದಿಂದ ಗೆಲ್ಲಿಸಿ ಎಂದು ಹೇಳಿದರು.
ಶಾಸಕ ಪ್ರಭು ಚವ್ಹಾಣ ಮಾತನಾಡಿ, ಪಟ್ಟಣದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಿಂದ ಶಾಶ್ವತ ಮುಕ್ತಿ ನೀಡಲು ಸಂಸದರು ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ತರಬೇಕು ಎಂದರು. ನೀರಿನ ಸಮಸ್ಯೆ ಬಗೆ ಹರಿಸಿದರೆ ಪಟ್ಟಣದ ಜನರು ನಮ್ಮನ್ನು ಕೊನೆ ತನಕ ಸ್ಮರಿಸುತ್ತಾರೆ ಎಂದು ಮನವಿ ಮಾಡಿದರು.
ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ನೀಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸುವುದರ ಜೊತೆಗೆ ಪಟ್ಟಣದ ಚಿತ್ರಣವನ್ನೆ ಬದಲಾಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ಪಟ್ಟಣ ಪಂಚಾಯತನಲ್ಲಿ ಭಾರಿ ಅವ್ಯವಹಾರ ನಡೆದಿದೆ. ಅದರ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹಾಗೂ ಸಿಬಿಐಗೆ ಪತ್ರ ಬರೆಯಲಾಗುತ್ತದೆ. ಸರ್ಕಾರ ಪಟ್ಟಣದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಅಧ್ಯಕ್ಷರು ಗುತ್ತಿಗೇದಾರರು ಸೇರಿ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ ಆರೋಪಿಸಿದಾಗ, ತನಿಖೆ ಮಾಡಿಸಿ ಭ್ರಷ್ಟರಿಗೆ ತಕ್ಕ ಪಾಠ ಕಲಿಸುವಂತೆ ಅಧಿಕಾರಿಗಳಿಗೆ ನಾನು ಮನವಿ ಮಾಡುತ್ತೇನೆ ಎಂದು ಸಂಸದ ಭಗವಂತ ಖೂಬಾ ಸಾಥ್ ನೀಡಿದರು.
ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಮತದಾರರಿಗೆ ತಿಳಿಸುವ ಮೂಲಕ ಪಕ್ಷದ ಕಡೆಗೆ ಸೆಳೆಯುವ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ತಾಲೂಕು ಅಧ್ಯಕ್ಷ ಸತೀಷ ಪಾಟೀಲ, ಜಿಪಂ ಮಾಜಿ ಸದಸ್ಯ ವಸಂತ ಬಿರಾದಾರ, ಮುಖಂಡ ಡಾ| ಕಲ್ಲಪ್ಪ ಉಪ್ಪೆ, ಪ್ರಕಾಶ ಟೊಣ್ಣೆ, ಅಶೋಕ ಅಲ್ಮಾಜೆ, ಶರಣಬಸವ ಸಾವಳೆ, ಅನೀಲ ಹೋಕ್ರಣೆ ಹಾಗೂ ಪಟ್ಟಣ ಪಂಚಾಯತ 19 ಬಿಜೆಪಿ ಅಭ್ಯರ್ಥಿಗಳು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.