ಹೇಳ್ಳೋರಿದ್ರೂ ಕೇಳ್ಳೋರಿಲ್ಲ!
ವೈದ್ಯರ ಸಮಸ್ಯೆ-ಸೌಲಭ್ಯವಿದ್ದರೂ ಕಲ್ಪಿಸುವವರಿಲ್ಲ• ಹರಿದ ಹಾಸಿಗೆ-ಹೊದಿಕೆ ವ್ಯವಸ್ಥೆ ಇಲ್ಲ
Team Udayavani, Aug 3, 2019, 9:51 AM IST
ಅಫಜಲಪುರ: ಅತನೂರ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಭೇಟಿ ನೀಡಿ ಪರಿಶೀಲಿಸಿದರು.
ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ಸಿಗಲಿ ಎನ್ನುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕಟ್ಟಿಸಿದೆ. ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನರ ರೋಗ ಕಳೆಯುವ ಬದಲಿಗೆ ಅವುಗಳೇ ರೋಗಗ್ರಸ್ಥವಾಗಿರುವಾಗ ಜನಸಾಮಾನ್ಯರು ಆರೋಗ್ಯ ಸೇವೆಗಳನ್ನು ಅರಸಿ ನಗರ, ಪಟ್ಟಣಗಳಿಗೆ ಹೋಗಬೇಕಾದ ಸನ್ನಿವೇಶ ಬಂದಿದೆ.
ತಾಲೂಕಿನಾದ್ಯಂತ ಆರು ಹಾಸಿಗೆಗಳ ಒಟ್ಟು ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಈ ಪೈಕಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಲಾಗುತ್ತಿದೆ. ಉಳಿದಂತೆ ಏಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ವೈದ್ಯರು, ಐದು ಕಡೆ ಆಯುಷ್ ವೈದ್ಯರು ಆಸ್ಪತ್ರೆ ನಡೆಸುಕೊಂಡು ಹೋಗುತ್ತಿದ್ದಾರೆ. ಹಳ್ಳಿಗಳಲ್ಲಿ ಸರ್ಕಾರಿ ಸುಸಜ್ಜಿತ ಆಸ್ಪತ್ರೆಗಳು ನಿರ್ಮಾಣವಾಗುತ್ತಿವೆ. ಇನ್ನೇನು ಉಚಿತವಾಗಿ, ತ್ವರಿತವಾಗಿ ಆರೋಗ್ಯ ಸೇವೆಗಳು ಸಿಗಲಿವೆ ಎಂದು ಜನಸಾಮಾನ್ಯರು ಆಶಾಭಾವನೆ ಇಟ್ಟುಕೊಂಡಿದ್ದರು. ಆದರೆ ಎಲ್ಲ ಕಡೆ ಕಟ್ಟಡಗಳಾಗುತ್ತಿವೆ, ಆದರೆ ವೈದ್ಯರಿಲ್ಲ, ಸಿಬ್ಬಂದಿಗಳಿಲ್ಲ, ಔಷಧಿ ಇಲ್ಲ ಎನ್ನುವ ಅನೇಕ ಕೊರತೆಗಳನ್ನು ಕಂಡು ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಿಂದ ದೂರ ಸರಿಯುತ್ತಿದ್ದಾರೆ.
ಸೌಲಭ್ಯ ಇದ್ದರೂ ಕಲ್ಪಿಸುವವರಿಲ್ಲ: ತಾಲೂಕಿನ ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಗ್ರಾಮಗಳಲ್ಲಿ ಆಯುಷ್ ಮತ್ತು ಸಾಮಾನ್ಯ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಿಕೊಂಡು ಹೋಗಲಾಗುತ್ತಿದೆ. ಉಳಿದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿದ್ದರೂ ಇಲ್ಲದಂತಾಗುತ್ತಿದೆ. ಬಡ ಜನರಿಗೆ ಸರಿಯಾದ ಚಿಕಿತ್ಸೆಗಳು ಸಿಗುತ್ತಿಲ್ಲ. ಸರ್ಕಾರ ಆರೋಗ್ಯ ಸೇವೆಗಳ ಹೆಸರಿನಲ್ಲಿ ಬಿಡುಗಡೆ ಮಾಡುವ ಯೋಜನೆಗಳು, ಸೌಲಭ್ಯಗಳು ಜನರಿಗೆ ತಲುಪಿಸುವವರು ಇಲ್ಲದಂತಾಗಿದೆ. ಆದರೆ ಎಲ್ಲ ಸೇವೆಗಳು, ಸೌಲಭ್ಯಗಳು ಜನರಿಗೆ ತಲುಪಿದಂತೆ ಬಿಂಬಿಸಲಾಗುತ್ತಿದೆ. ಇದು ನಿಜಕ್ಕೂ ದುರಂತದ ಸಂಗತಿಯಾಗಿದೆ.
ಹರಿದ ಬೆಡ್: ಆರೋಗ್ಯ ಕೇಂದ್ರಗಳಲ್ಲಿ ಅವಳಡಿಸಲಾಗಿರುವ ಬೆಡ್‌ಗಳು ಹರಿದು ಹೋಗಿದ್ದು, ರೋಗಿಗಳು ಅದರ ಮೇಲೆ ಮಲಗಿ ಚಿಕಿತ್ಸೆ ಪಡೆಯುವ ಸನ್ನಿವೇಶ ಬಂದಿದೆ. ಹರಿದ ಬೆಡ್‌ಗಳ ಮೇಲೆ ಬೆಡ್‌ಶಿಟ್ ಸಹ ಇಲ್ಲ. ಹೀಗಾಗಿ ರೋಗ ವಾಸಿಗೆಂದು ಆಸ್ಪತ್ರೆಗೆ ಬಂದು ರೋಗ ಹಚ್ಚಿಕೊಂಡು ಹೋಗುವ ಪರಿಸ್ಥಿತಿ ರೋಗಿಗಳದ್ದಾಗಿದೆ.
ಬೀದಿ ದೀಪಗಳಿಲ್ಲ: ಆಸ್ಪತ್ರೆ ಮತ್ತು ಸಿಬ್ಬಂದಿಗಳ ವಸತಿ ಗೃಹಗಳ ರಸ್ತೆಗಳಿಗೆ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದಂತಾಗಿದ್ದು ಸಿಬ್ಬಂದಿ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಅದರಲ್ಲೂ ಅತನೂರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಹೋಗಲು ಇರುವ ದಾರಿಗೆ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲ. ಸಿಬ್ಬಂದಿಗಳಿರುವ ವಸತಿ ಗೃಹದ ಬಳಿ ವಿದ್ಯುತ್ ದೀಪಗಳಿಲ್ಲ. ರಾತ್ರಿಯಾದರೆ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ರಾತ್ರಿಯಾಗುತ್ತಿದ್ದಂತೆ ಕುಡುಕರ ಕಾಟ ಹೆಚ್ಚಾಗುತ್ತಿದೆ. ಅತನೂರ ಗ್ರಾಮದ ರೀತಿಯಲ್ಲಿ ಅನೇಕ ಗ್ರಾಮಗಳಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲ. ಹೀಗಾಗಿ ಸಾಕಷ್ಟು ಸಮಸ್ಯೆಯಾಗುತ್ತಿವೆ.
ಸಿಸಿ ಕ್ಯಾಮೆರಾ ಸಮಸ್ಯೆ: ಆರೋಗ್ಯ ಕೇಂದ್ರದಲ್ಲಿ ನಡೆಯುವ ಘಟನೆಗಳ ಬಗ್ಗೆ ನೀಗಾ ಇಡಲು ಸಿಸಿ ಕ್ಯಾಮೆರಾ ಅಳವಡಿಕೆ ಅವಶ್ಯಕವಾಗಿದೆ. ಆದರೆ ತಾಲೂಕಿನ ಗೊಬ್ಬೂರ (ಬಿ) ಮತ್ತು ರೇವೂರ (ಬಿ) ಆಸ್ಪತ್ರೆಗಳಲ್ಲಿ ಮಾತ್ರ ಸಿಸಿ ಅಳವಡಿಸಲಾಗಿದ್ದು, ಉಳಿದ ಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಿಲ್ಲ. ಹೀಗಾಗಿ ಇಲ್ಲಿ ನಡೆಯುವ ಘಟನೆಗಳು ಯಾರಿಗೂ ತಿಳಿಯದಂತಾಗಿದೆ. ಇನ್ನಾದರೂ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.