ಅಪ್ರಯೋಜಕ ಶುದ್ಧ ನೀರಿನ ಘಟಕ!
ಹಣ ಖರ್ಚಾದರೂ ಸಿಗುತ್ತಿಲ್ಲ ಶುದ್ಧ ನೀರು •ಗ್ರಾಮಕ್ಕೆ ಕಲುಷಿತ ನೀರೇ ಗತಿ
Team Udayavani, Jul 20, 2019, 10:04 AM IST
ಅಫಜಲಪುರ: ಅತನೂರ ಗ್ರಾಮದಲ್ಲಿರುವ ನೀರು ಶುದ್ಧೀಕರಣ ಘಟಕ ಮುರಿದಿರುವುದು. ಅಳ್ಳಗಿ (ಬಿ) ಗ್ರಾಮದಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿರುವ ಯಂತ್ರಗಳು ಕಳ್ಳತನವಾಗಿವೆ. (ಬಲಚಿತ್ರ
ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಗ್ರಾಮೀಣ ಭಾಗದ ಜನರು ಅಶುದ್ಧ ನೀರು ಕುಡಿಯಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಗ್ರಾಮೀಣ ಭಾಗದಲ್ಲಿ ಶುದ್ಧ ನೀರಿನ ಘಟಕಗಳನ್ನು ಶುರು ಮಾಡುತ್ತಿದೆ. ಆದರೆ ತಾಲೂಕಿನ ಕೆಲವು ಕಡೆಯಲ್ಲಿ ವರ್ಷಗಳೇ ಉರುಳಿದರೂ ಶುದ್ದ ನೀರಿನ ಘಟಕಗಳು ಆರಂಭವಾಗದೆ ಗ್ರಾಮಸ್ಥರು ಪರದಾಡುವಂತಾಗಿದೆ.
ತಾಲೂಕಿನ 64 ಕಡೆಯಲ್ಲಿ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಆದರೆ ಅಳ್ಳಗಿ (ಬಿ) ಮತ್ತು ಅತನೂರ ಗ್ರಾಮಗಳಲ್ಲಿ ಮಾತ್ರ ಶುದ್ಧೀಕರಣ ಘಟಕ ನಿರ್ಮಿಸಿ ವರ್ಷಗಳೇ ಉರುಳಿದರೂ ಅವುಗಳು ಕಾರ್ಯಾಚಣೆ ಆರಂಭಿಸಿಲ್ಲ. ಇದರಿಂದ ಈ ಭಾಗದ ಜನರು ಅಶುದ್ಧ ನೀರನ್ನೇ ಕುಡಿಯುವಂತಾಗಿದೆ.
ಲಕ್ಷಾಂತರ ರೂ. ಖರ್ಚಾದರೂ ಸಿಗುತ್ತಿಲ್ಲ ಶುದ್ಧ ನೀರು: ಶುದ್ಧ ಕುಡಿಯುವ ನೀರು ಪೂರೈಸಬೇಕೆಂದು ಸರ್ಕಾರ ಲಕ್ಷಾಂತರ ರೂ. ಖರ್ಚು ಮಾಡುತ್ತಿದೆ. ಅನೇಕ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಸ್ಥಾಪಿಸಲಾಗುತ್ತಿದೆ. ಆದರೆ ಈ ಘಟಕಗಳು ತಮ್ಮ ಕಾರ್ಯವನ್ನು ಆರಂಭ ಮಾಡುತ್ತಲೇ ಇಲ್ಲ.
ಅಳ್ಳಗಿ (ಬಿ) ಗ್ರಾಮದಲ್ಲಿ 2013-14ನೇ ಸಾಲಿನ 13ನೇ ಹಣಕಾಸು ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಪುಣೆಯ ವಾಟರ್ ಲೈಫ್ ಕಂಪನಿಯವರು ಈ ಘಟಕ ನಿರ್ಮಿಸಿದ್ದಾರೆ. ಅತನೂರ ಗ್ರಾಮದಲ್ಲಿಯೂ ವಾಟರ್ ಲೈಫ್ ಕಂಪನಿಯವರು 2013-14ನೇ ಸಾಲಿನಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಘಟಕ ನಿರ್ಮಿಸಿದ್ದಾರೆ. ಈ ಎರಡು ಘಟಕಗಳು ತಮ್ಮ ಕಾರ್ಯವನ್ನು ಆರಂಭಿಸಿಯೇ ಇಲ್ಲ.
ಅಶುದ್ಧ ನೀರೇ ಗತಿ: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣವಾದ ಶುದ್ಧೀಕರಣ ಘಟಕಗಳು ನೀರು ಪೂರೈಸಲಿವೆ ಎಂದು ನಂಬಿದ್ದ ಜನರಿಗೆ ನಿರಾಶೆಯಾಗಿದೆ. ಅಲ್ಲದೆ ಅಶುದ್ಧ ನೀರು ಕುಡಿದು ದಿನ ಕಳೆಯುವುದು ತಪ್ಪದಂತಾಗಿದೆ.
ಅತನೂರ, ಅಳ್ಳಗಿ ಘಟಕ ಆರಂಭಕ್ಕೆ ಒತ್ತಾಯ: ವರ್ಷಗಳಿಂದ ನೀರು ಶುದ್ಧೀಕರಣ ಘಟಕ ಆರಂಭವಾಗದೆ ಇರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಶುದ್ಧೀಕರಣ ಘಟಕದ ಒಳಗಡೆ ಇರುವ ಯಂತ್ರಗಳು ಕಳ್ಳತನವಾಗಿವೆ. ಇದರ ಬಗ್ಗೆ ಸಂಬಂಧ ಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಅಳ್ಳಗಿ (ಬಿ) ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅತನೂರ ಗ್ರಾಮದಲ್ಲಿ ಶುದ್ಧೀಕರಣ ಘಟಕಕ್ಕೆ ಮುಳ್ಳುಕಂಟಿ ಹಚ್ಚಲಾಗಿದೆ. ಅದನ್ನು ತೆರವುಗೊಳಿಸಿ ಶುದ್ಧೀಕರಣ ಘಟಕ ಆರಂಭಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಅಳ್ಳಗಿ (ಬಿ), ಅತನೂರ ಶುದ್ಧೀಕರಣ ಘಟಕಗಳು ಸ್ಥಗಿತಗೊಂಡ ಬಗ್ಗೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಮೇಲಾಧಿಕಾರಿಗಳ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಶೀಘ್ರವೇ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಸಲಾಗುವುದು.
• ಲಿಯಾಕತ್ ಅಲಿ, ಎಇಇ,
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.