ಅಕ್ರಮ ಮರಳು ತಡೆಗೆ ಸಮಿತಿ
ಹೊರ ರಾಜ್ಯಗಳ ಸಾಗಾಟಕ್ಕೆ ನಿಷೇಧಪ್ರತಿ ತಿಂಗಳು ಸಭೆ ನಡೆಸಲು ತಾಕೀತು
Team Udayavani, Dec 5, 2019, 1:02 PM IST
ಅಫಜಲಪುರ: ತಾಲೂಕಿನ 5 ಮರಳು ಸಾಗಟ ಕೇಂದ್ರಗಳಿಂದ ಅಕ್ರಮ ಮರಳು ಸಾಗಾಟ ತಡೆಗಾಗಿ ಮರಳು ಸಮಿತಿ ರಚನೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ರಾಮಚಂದ್ರ ಗಡದೆ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಅಕ್ರಮ ಮರಳು ಸಾಗಾಟ ತಡೆ, ಮರಳು ಸಮಿತಿ ರಚನೆ, ಗಸ್ತು ತಂಡದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 14 ಮರಳು ಸಾಗಾಟ ಕೇಂದ್ರಗಳಿವೆ. ಈ ಪೈಕಿ ಅಫಜಲಪುರ ತಾಲೂಕಿನಲ್ಲಿಯೇ 5 ಕೇಂದ್ರಗಳಿವೆ. ಎಲ್ಲಾ ಕಡೆ ಅಧಿಕಾರಿಗಳು ಗಮನ ಇಡಬೇಕು. ಸದ್ಯ ನದಿಯಲ್ಲಿ ನೀರು ತುಂಬಿದೆ. ಹೀಗಾಗಿ ಮರಳು ತೆಗೆಯುವುದು ಸಾಧ್ಯವಿಲ್ಲ. ಜಪ್ತಿ ಮಾಡಿದ ಮರಳನ್ನು ಮೊದಲು ಸರ್ಕಾರಿ ಕೆಲಸಗಳಿಗಾಗಿ ಮಾತ್ರ ಬಳಕೆಗೆ ನೀಡಬೇಕು. ನಂತರ ಮರಳು ಉಳಿದರೆ ಸಾರ್ವಜನಿಕರಿಗೆ ನೀಡಲು ಮುಂದಾಗಿ. ಮರಳನ್ನು ಒಳ ಜಿಲ್ಲೆ, ಹೊರ ಜಿಲ್ಲೆಗಳಲ್ಲಿ ಮಾತ್ರ ಸಾಗಣೆ ಮಾಡಲು ಅವಕಾಶವಿದೆ. ಹೊರ ರಾಜ್ಯಗಳಿಗೆ ಮರಳು ಸಾಗಾಟ ನಿಷೇಧವಿರುವುದರಿಂದ ಯಾವುದೇ ಕಾರಣಕ್ಕೂ ಮರಳು ಹೊರ ಹೋಗಲು ಬಿಡಬೇಡಿ. ಇದಕ್ಕಾಗಿಯೇ 5 ಜನರ ತಂಡ ರಚನೆ ಮಾಡಲಾಗಿದೆ. ಈ ತಂಡ ವಾರದಲ್ಲಿ ಎರಡು ಬಾರಿ ಗಸ್ತು ತಿರುಗಿ ಅಕ್ರಮ ಸಾಗಾಟ ತಡೆಯುವ ಕೆಲಸ ಮಾಡಲಿದೆ ಎಂದರು.
ಮರಳು ಸಮಿತಿಯಲ್ಲಿ ಕಂದಾಯ, ಭೂ ವಿಜ್ಞಾನ, ಜಿ.ಪಂ, ಪೊಲೀಸ್, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಗಳು ಸೇರಿದಂತೆ ಒಟ್ಟು 14 ಇಲಾಖೆಗಳು ಬರುತ್ತವೆ. ಎಲ್ಲರೂ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು. ಮರಳು ಸಮಿತಿಗೆ ಎ.ಸಿ ಅಧ್ಯಕ್ಷರಾಗಿರುತ್ತಾರೆ, ತಹಶೀಲ್ದಾರ್ ಕಾರ್ಯದರ್ಶಿಯಾಗಿರಲಿದ್ದಾರೆ. ಪ್ರತಿ ತಿಂಗಳು ಎಲ್ಲಾ ಅ ಧಿಕಾರಿಗಳು ಸಭೆ ನಡೆಸಬೇಕು ಎಂದು ತಾಕೀತು ಮಾಡಿದರು.
ತಹಶೀಲ್ದಾರ್ ಮಧುರಾಜ್ ಕೂಡಲಗಿ ಮಾತನಾಡಿ, ತಾಲೂಕಿನಲ್ಲಿ ಇದುವರೆಗೆ 10 ಸಾವಿರ ಮೆಟ್ರಿಕ್ ಟನ್ ಅಕ್ರಮ ಮರಳು ಸೀಜ್ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಡಿವೈಎಸ್‌ಪಿ ಮಲ್ಲಿಕಾರ್ಜುನ, ಸಿಪಿಐ ಮಹಾದೇವ ಪಂಚಮುಖೀ, ಪಿಎಸ್‌ಐ ಸಂತೋಷ ತಟ್ಟೆಪಳ್ಳಿ ಸೇರಿದಂತೆ 14 ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.