ಕಾಮಗಾರಿ ವಿಳಂಬ; ಪ್ರವಾಸಿಗರಿಗೆ ಸಂಕಷ್ಟ
Team Udayavani, May 8, 2019, 12:22 PM IST
ತೀರ್ಥಹಳ್ಳಿ: ಆಗುಂಬೆ ಘಾಟಿಯ ಕಾಮಗಾರಿ ನಡೆಯುತ್ತಿರುವುದು.
ತೀರ್ಥಹಳ್ಳಿ: ಶಿವಮೊಗ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಘಾಟಿಯಾದ ಆಗುಂಬೆ ಘಾಟಿಯ ರಸ್ತೆ ಹಾಗೂ ತಡೆಗೋಡೆ ಕಾಮಗಾರಿ ವಿಳಂಬವಾಗಿದ್ದು ಮೇ 20ರ ನಂತರವೇ ಬಸ್ ಹಾಗೂ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಮತ್ತಷ್ಟು ಸಮಸ್ಯೆ ಉಂಟಾಗಿದೆ.
ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗೆ ಸೇರಿರುವ ಘಾಟಿನ ತಿರುವುಗಳ ಕಾಮಗಾರಿ ಭರದಿಂದ ಸಾಗುತ್ತಿದೆ. ಕೆಲವು ಅಪಾಯಕಾರಿ ತಿರುವುಗಳಲ್ಲಿ ಹಾಗೂ ಕಡಿದಾದ ಗುಡ್ಡ ಇರುವ ಜಾಗಗಳಲ್ಲಿ ಗುಣಮಟ್ಟದ ಕಾಕ್ರೀಟ್ ಕಾರ್ಯ ನಡೆಯುತ್ತಿದೆ.ಆಗುಂಬೆ ಘಾಟಿಯ ಪ್ರಮುಖ ಆಕರ್ಷಣೆಯ ಕೇಂದ್ರವಾದ ಸೂರ್ಯಾಸ್ತಮಾನ ಕೇಂದ್ರದಲ್ಲಿ 25 ಮೀಟರ್ ಕಾಕ್ರೀಟ್ ಹಾಕಲಾಗಿದ್ದು ಕ್ಯೂರಿಂಗ್ ಕೆಲಸ ನಡೆಯುತ್ತಿದೆ. ಕಾಕ್ರೀಟ್ ರಸ್ತೆಗೆ ನೀರು ಹಾಕುವ ಕ್ಯೂರಿಂಗ್ ಕೆಲಸಕ್ಕೆ ಕನಿಷ್ಠ 21 ದಿನಗಳು ನಡೆಯಬೇಕು. ಈ ಸಂದರ್ಭದಲ್ಲಿ ವಾಹನಗಳಿಗೆ ಸಂಚರಿಸಲು ಅವಕಾಶ ನೀಡಿದರೆ ರಸ್ತೆಗೆ ಧಕ್ಕೆಯಾಗುತ್ತದೆ ಎಂದು ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರು, ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಇನ್ನರೆಡು ದಿನಗಳಲ್ಲಿ ಬೈಕ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ರಸ್ತೆಯ ಸ್ಥಿತಿಗತಿಯನ್ನು ಪರಿಶೀಲಿಸಿ ಲಘು ವಾಹನಗಳಿಗೆ ಅವಕಾಶ ನೀಡಲಾಗುವುದು. ತುರ್ತುಸೇವೆಯ ಆ್ಯಂಬುಲೆನ್ಸ್‌ಗಳಿಗೆ ಕೆಲವೇ ದಿನಗಳಲ್ಲಿ ಅವಕಾಶ ಮಾಡಿಕೊಡಬೇಕು ಎಂಬುದು ಹಲವರ ಆಗ್ರಹವಾಗಿದೆ.
ಈಗಾಗಲೆ ಏ.10ರಿಂದ ಕಾಮಗಾರಿ ಆರಂಭಗೊಂಡು ತಿಂಗಳು ಮುಗಿಯುತ್ತ ಬಂದಿದೆ. ಬಸ್ ಸಂಚಾರ ಹಾಗೂ ಭಾರೀ ವಾಹನ ಓಡಾಟ ಬೇರೆ ಮಾರ್ಗದಲ್ಲಿ ಸಂಚರಿಸುತ್ತಿರುವುದರಿಂದ ಆಗುಂಬೆ ಪಟ್ಟಣದ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಬ್ದಗೊಂಡಿದೆ. ಜೊತೆಗೆ ಮಣಿಪಾಲ್ ಆಸ್ಪತ್ರೆಗೆ ತೆರಳುವ ರೋಗಿಗಳು ಹಾಗೂ ಸಾರ್ವಜನಿಕರು ಸಂಕಷ್ಟದೊಂದಿಗೆ ಬೇರೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಾರೆ. ಆದಷ್ಟು ಬೇಗ ಆಗುಂಬೆ ಘಾಟಿ ಕಾಮಗಾರಿ ಮುಗಿದು ಸಂಚಾರ ವ್ಯವಸ್ಥೆ ಮೊದಲಿನಂತಾಗಲಿ ಎಂದು ಮಲೆನಾಡಿಗರು ಕಾಯುತ್ತಿದ್ದಾರೆ.
ರಾಂಚಂದ್ರ ಕೊಪ್ಪಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.