ಹೇಮರಡ್ಡಿ ಮಲ್ಲಮ್ಮ ಜಯಂತಿ ಎಲ್ಲರೂ ಆಚರಿಸುವಂತಾಗಲಿ
ಯಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ಆಶಯ
Team Udayavani, May 12, 2019, 4:41 PM IST
ಅಜ್ಜಂಪುರ ಸಮೀಪ ಗಿರಿಯಾಪುರ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮತ್ತು ಬಡಗನಾಡು ಹೇಮರಡ್ಡಿ ವೀರಶೈವಜನಾಂಗ ಸಂಘದ ಶತಮಾನೋತ್ಸವ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಮಾವೇಶವನ್ನು ವಿಧಾನಪರಿಷತ್‌ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಉದ್ಘಾಟಿಸಿದರು.
ಅಜ್ಜಂಪುರ: ಹೇಮರಡ್ಡಿ ಮಲ್ಲಮ್ಮ ಕೇವಲ ರಡ್ಡಿ ಜನಾಂಗಕ್ಕೆ ಸೀಮಿತ ಅಲ್ಲ. ಇಡೀ ನಾಡಿನ ಆಸ್ತಿ. ಅವರ ಜಯಂತಿಯನ್ನು ಎಲ್ಲ ವರ್ಗದ ಜನರೂ ಆಚರಿಸುವಂತಾಗಲಿ ಎಂದು ಯಡಿಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ಆಶಿಸಿದರು.
ಸಮೀಪದ ಗಿರಿಯಾಪುರ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಮತ್ತು ಬಡಗನಾಡು ಹೇಮರಡ್ಡಿ ವೀರಶೈವ ಜನಾಂಗ ಸಂಘದ ಶತಮಾನೋತ್ಸವ ಅಂಗವಾಗಿ ಶನಿವಾರ ನಡೆದ ಧಾರ್ಮಿಕ ಸಮಾವೇಶದಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್‌ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಬದುಕಿನ ನೋವುಗಳನ್ನು ಸಹಿಸಿದವರು. ಸೊಸೆಯಾಗಿ ಮನೆ ಗೌರವ ಕಾಪಾಡಿದವರು. ತಾಯಿಯಾಗಿ ಇಡೀ ಸಮುದಾಯಕ್ಕೆ ಸುಖ ಸಂಪತ್ತನ್ನು ವರವಾಗಿ ತಂದುಕೊಟ್ಟರು. ಇಂಥವರ ಜೀವನ ದಾರಿಯನ್ನು ಯುವಪೀಳಿಗೆಗೆ ತಿಳಿಸಬೇಕಿದೆ ಎಂದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ತಾಯಿ ಹಡೆದ ಹತ್ತು ಮಕ್ಕಳನ್ನು ಸಾಕುತ್ತಾಳೆ. ಆದರೆ ಹತ್ತು ಮಕ್ಕಳು ಸೇರಿ ಓರ್ವ ತಾಯಿಯನ್ನು ಸಲಹದೇ, ವೃದ್ಧಾಶ್ರಮಕ್ಕೆ ಕಳುಹಿಸುತ್ತಾರೆ. ಇದನ್ನು ತಪ್ಪಿಸಲು ತಂದೆ-ತಾಯಿಯರು ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕೃತಿ-ಸಂಸ್ಕಾರ ಕಲಿಸಬೇಕು ಎಂದು ಸಲಹೆ ನೀಡಿದರು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ಪ್ರಕೃತಿ ವಿಕೋಪ ಮತ್ತು ಸರ್ಕಾರದ ಕಡಗಣನೆಯಿಂದಾಗಿ ಕೃಷಿಕರ ಬದುಕು ಸಂಕಷ್ಟದಲ್ಲಿದೆ. ಕೃಷಿಯಿಂದ ವಿಮುಖರಾಗುವರ ಸಂಖ್ಯೆ ಹೆಚ್ಚಿದೆ. ಇದು ಮುಂದುವರೆದರೆ ಆಹಾರಕ್ಕಾಗಿ ಪರದಾಡುವ-ಹೋರಾಟ ನಡೆಸುವ ದಿನ ದೂರವಿಲ್ಲ ಎಂದು ಎಚ್ಚರಿಸಿದರು. ಮೈಸೂರು ಮುಕ್ತ ವಿವಿ ಪ್ರಾಧ್ಯಾಪಕಿ ಜ್ಯೋತಿ ಶಂಕರ್ ವಿಶೇಷ ಉಪನ್ಯಾಸವನ್ನು, ಬ್ರಹ್ಮಕುಮಾರಿ ಈಶ್ವರೀ ವಿವಿಯ ಸಂಚಾಲಕಿ ಬಿ.ಕೆ.ಭಾಗ್ಯ ಸಂದೇಶ ನೀಡಿದರು.ಮಲ್ಲಿಕಾಂಭ ಮಹಿಳಾ ಸಂಘದ ಉಷಾ ಮತ್ತು ಪದಾಧಿಕಾರಿಗಳು ಗೀತೆ ಹಾಡಿದರು. ಬೀರೂರಿನ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಕುಪ್ಪೂರು ಗದ್ದಿಗೆಯ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಡಗನಾಡು ಹೇಮರಡ್ಡಿ ಜನಾಂಗ ಸಂಘದ ಅಧ್ಯಕ್ಷ ಎಚ್.ಸಿ.ರೇವಣಸಿದ್ದಪ್ಪ, ಉಪಾಧ್ಯಕ್ಷ ಶಿವಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದೇಗೌಡ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.