ಜಲಾಶಯ ಹಿನ್ನೀರು ನುಗ್ಗಿ ಬೆಳೆಹಾನಿ

ಅವಳಿ ಜಿಲ್ಲೆಯ ಕೆಲ ಗ್ರಾಮಗಳ ರೈತರಿಗೆ ಸಂಕಷ್ಟ •ಹೊರಹರಿವು 2,13,453 ಕ್ಯೂಸೆಕ್‌ ಹೆಚ್ಚಳ

Team Udayavani, Aug 2, 2019, 10:18 AM IST

2-Agust-4

ಆಲಮಟ್ಟಿ: ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರಿನಿಂದ ಅರಳದಿನ್ನಿ ಗ್ರಾಮದ ರೈತರ ಜಮೀನಿಗೆ ನೀರು ನುಗ್ಗಿದೆ.

ಆಲಮಟ್ಟಿ: ಲಾಲ್ ಬಹಾದ್ದೂರಶಾಸ್ತ್ರಿ ಜಲಾಶಯಕ್ಕೆ 1,98,752 ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದರಿಂದ 2,38,752 ಕ್ಯೂಸೆಕ್‌ ನೀರನ್ನು ಜಲಾಶಯದ ಗೇಟ್‌ಗಳ ಮೂಲಕ ನದಿಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ. ಇದರಿಂದ ನದಿ ತೀರದ ಜಮೀನುಗಳಿಗೆ ಬಸವಸಾಗರದ ಹಿನ್ನೀರು ಪ್ರವೇಶಿಸಿ ಬೆಳೆ ನಾಶಕ್ಕೆ ಕಾರಣವಾಗುವಂತಾಗಿದೆ.

ಆಲಮಟ್ಟಿ ಲಾಲ್ ಬಹಾದ್ದೂರಶಾಸ್ತ್ರಿ ಜಲಾಶಯದಲ್ಲಿ 2000ನೇ ಸಾಲಿನಿಂದ ನೀರು ನಿಲ್ಲಿಸಿ ಜಲಾಶಯದ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ನದಿ ಪಾತ್ರಕ್ಕೆ ನೀರು ಬಿಡಲಾಗುತ್ತಿದ್ದರೂ ಕೂಡ ಸುಮಾರು 15 ವರ್ಷಗಳಿಂದ ಬಸವಸಾಗರದ ಹಿನ್ನೀರು ಅವಳಿ ಜಿಲ್ಲೆಯ ಹಲವಾರು ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗುವುದರಿಂದ ರೈತರು ಹಾನಿಯನ್ನನುಭವಿಸುವಂತಾಗಿದೆ.

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಲಾಲ್ ಬಹಾದ್ದೂರಶಾಸ್ತ್ರಿ ಜಲಾಶಯಕ್ಕೆ ವ್ಯಾಪಕ ನೀರು ಹರಿದು ಬರುತ್ತಿರುವುದು ಮುಂದುವರಿದಿದೆ. ಮಹಾರಾಷ್ಟ್ರ ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆ ಸೇರಿದಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವದರಿಂದ ಕೊಯ್ನಾ ಹಾಗೂ ರಾಜಾಪುರ ಬ್ಯಾರೇಜ್‌ಗಳಿಂದ ವ್ಯಾಪಕವಾಗಿ ನದಿ ಪಾತ್ರಕ್ಕೆ ಹರಿದು ಬಿಡುತ್ತಿರುವದರಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರುಬರುತ್ತಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಕೃಷ್ಣಾಭಾಗ್ಯ ಜಲ ನಿಗಮದ ಅಧಿಕಾರಿಗಳು ಕರ್ನಾಟಕ ವಿದ್ಯುದಾಗಾರ ಆಲಮಟ್ಟಿ ಘಟಕ, 26 ಗೇಟ್‌ಗಳು ಹಾಗೂ ಕಾಲುವೆಗಳ ಮುಖಾಂತರ ಸೇರಿ ಒಟ್ಟು ಗುರುವಾರ ರಾತ್ರಿ 8 ಗಂಟೆಯಿಂದ 2,38,752 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ನೀರು ಹೊರಬಿಟ್ಟಂತಾಗಿದೆ.

519.60 ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ 123.081ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ ಗುರುವಾರ ಮುಂಜಾನೆ ಮಾಹಿತಿಯಂತೆ 518.55 ಮೀ. ಎತ್ತರದಲ್ಲಿ 105.872 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇನ್ನು ಒಳಹರಿವು 1,50,409 ಕ್ಯೂಸೆಕ್‌, ಹೊರಹರಿವು 2,13,453 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿತ್ತು.

ರಾತ್ರಿ 8ಗಂಟೆ ಸುಮಾರಿಗೆ ಒಳಹರಿವಿನಲ್ಲಿ ವ್ಯಾಪಕ ಏರಿಕೆಯಾಗಿ 1,98,752 ಕ್ಯೂಸೆಕ್‌ ನೀರು ಹರಿದುಬರುತ್ತಿರುವುದರಿಂದ ಜಲಾಶಯದ ವಿವಿಧ ಮೂಲಗಳಿಂದ 2,38,573 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಇತ್ತೀಚೆಗಷ್ಟೇ ಕೆಲವರು ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ ಬಿತ್ತನೆ ಮಾಡಿದ್ದರು. ಇನ್ನುಳಿದವರು ಕಬ್ಬು ಬೆಳೆ ಬೆಳೆಯುತ್ತಿದ್ದಾರೆ. ಇದರಿಂದ ಮುಂಗಾರು ಬಿತ್ತನೆ ಮಾಡಿದ ರೈತರ ಜಮೀನಿಗೆ ನೀರು ನುಗ್ಗಿದ್ದರಿಂದ ನೀರು ನಿಂತು ಬೆಳೆಗಳು ಕೊಳೆಯುವಂತಾಗುತ್ತದೆ. ಆದ್ದರಿಂದ ರೈತರ ಜಮೀನಿನಲ್ಲಿ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಹಿನ್ನೀರಿನಲ್ಲಿ ಏರಿಕೆ
ಆಲಮಟ್ಟಿ ಲಾಲ್ ಬಹಾದ್ದೂರಶಾಸ್ತ್ರಿ ಜಲಾಶಯದಿಂದ ವ್ಯಾಪಕವಾಗಿ ನೀರು ಹರಿದು ಬಿಡುತ್ತಿರುವದರಿಂದ ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರು ಏರಿಕೆಯಾಗಿ ಬಾಗಲಕೋಟೆ ಜಿಲ್ಲೆಯ ನಾಗಸಂಪಗಿ, ಮನಹಳ್ಳಿ ಸೇರಿದಂತೆ ನದಿತೀರದಲ್ಲಿರುವ ಗ್ರಾಮಗಳ ರೈತರ ಜಮೀನಿನಲ್ಲಿ ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹಾಗೂ ನಿಡಗುಂದಿ ತಾಲೂಕಿನ ಗ್ರಾಮಗಳಾದ ಮುದೂರ, ಕಾಳಗಿ, ಬಳಬಟ್ಟಿ, ವಡವಡಗಿ, ಮಸೂತಿ, ಯಲ್ಲಮ್ಮನಬೂದಿಹಾಳ, ಕಾಶಿನಕುಂಟಿ, ಯಲಗೂರ ಹಾಗೂ ಅರಳದಿನ್ನಿಯ ಯಲಗೂರದಪ್ಪ ಕೊಳ್ಳಾರ, ಯಲಗೂರದಪ್ಪ ಟುಬಾಕಿ, ಮಲ್ಲವ್ವ ಕೊಳ್ಳಾರ, ಚಂದ್ರಪ್ಪ ಕೊಳ್ಳಾರ, ಮಹಾಂತೇಶ ಕೊಳ್ಳಾರ, ಶೇಖಪ್ಪ ಟುಬಾಕಿ, ಅಯ್ಯಪ್ಪ ಚನಗೊಂಡ ಸೇರಿದಂತೆ ಯಲಗೂರದ ಗೋಪಾಲಗದ್ದನಕೇರಿ, ಪೂಜಾರಿ ಹೀಗೆ ಕೃಷ್ಣೆಯ ದಡದಲ್ಲಿರುವ ರೈತರ ಜಮೀನಿನಲ್ಲಿ ನೀರುನುಗ್ಗಿದೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.