ಆಲಮಟ್ಟಿಗೆ ಬರುವುದೇ ವ್ಯವಸ್ಥಾಪಕರ ಕಚೇರಿ

ಸರ್ಕಾರದ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು ಸ್ವತಃ ಸಿಎಂ ಹೇಳಿದ್ದರೂ ಸ್ಥಳಾಂತರವಾಗಿಲ್ಲ ಕಚೇರಿ

Team Udayavani, Nov 17, 2019, 11:59 AM IST

17-November-6

ಶಂಕರ ಜಲ್ಲಿ
ಆಲಮಟ್ಟಿ:
ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದ ಕೆಲ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಗೊಳಿಸಿ ಸರ್ಕಾರ ಆದೇಶ ನೀಡಿದ್ದರೂ ಆಲಮಟ್ಟಿಗೆ ಬರಬೇಕಿದ್ದ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕರ ಕಚೇರಿ ಬೆಂಗಳೂರಿನಲ್ಲೇ ಉಳಿದಿರುವುದು ಜನತೆ ಆಕ್ರೋಶಕ್ಕೆ ಕಾರಣವಾಗಿದೆ.

ಅಬಿವೃದ್ಧಿಯ ದೃಷ್ಟಿಯಿಂದ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗಕ್ಕೂ ಸ್ಥಳಾಂತರಿಸಬೇಕು ಎಂದು ಸ್ವತಃ ಮುಖ್ಯಮಂತ್ರಿಗಳೇ ಅಧಿವೇಶನದಲ್ಲಿ ಘೋಷಿಸಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು 10.1.2019ರಂದೇ ಆದೇಶಿಸಿದ್ದರು. ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲನಿಗಮದ ಆಡಳಿತ ಕಚೇರಿಯನ್ನು ನೋಂದಾಯಿತ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ಕರ್ನಾಟಕ ನೀರಾವರಿ ನಿಗಮವನ್ನು ದಾವಣಗೆರೆಗೆ ಸೇರಿದಂತೆ ಸೇರಿ ಒಟ್ಟು 9 ಇಲಾಖೆಗಳಿಗೆ ಸಂಬಂಧಿಸಿದ ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಿ 2019ರ ಏ.1ರಂದು ಜಾರಿಗೆ ಬರುತ್ತದೆ ಎಂದು ತಿಳಿಸಿದ್ದರು.

ಸ್ಥಳಾಂತರಗೊಳ್ಳದ ಕಚೇರಿಗಳು ಅಕ್ಟೋಬರ್‌ ಅಂತ್ಯದೊಳಗೆ ಸ್ಥಳಾಂತರಗೊಳ್ಳಬೇಕು ಎಂದು ಸರ್ಕಾರ ವತಿಯಿಂದ 23.9.2019ರಂದು ಮತ್ತೂಮ್ಮೆ ಆದೇಶ ಹೊರಡಿಸಲಾಗಿತ್ತು. ಇದರಿಂದ ವಿಚಲಿತರಾದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಶಕಗಳಿಂದ ರಾಜಧಾನಿಯಲ್ಲೇ ಉಳಿದ ನೌಕರರು ತಮ್ಮ ಕೈ ಚಳಕ ತೋರಿ ಆಲಮಟ್ಟಿಯಲ್ಲಿರುವ ಕಚೇರಿಗೆ ಬಾರದೇ ಕಚೇರಿಯ ನಾಮಫಲಕದಲ್ಲಿ ಕೃಷ್ಣಾಭಾಗ್ಯ ಜಲನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರು, ನೋಂದಾಯಿತ ಕಚೇರಿ ಆಲಮಟ್ಟಿ ಎಂದು ಬರೆದು ಅದರ ಕೆಳಭಾಗದಲ್ಲಿ ಸಂಪರ್ಕ ಕಚೇರಿ ಪಿಡಬ್ಲ್ಯೂಡಿ ಕಚೇರಿ ಪೂರಕ ಕಟ್ಟಡ 3ನೇ ಮಹಡಿ, ಕೆ.ಆರ್‌.ವೃತ್ತ ಬೆಂಗಳೂರು ಎಂದು ನಮೂದಿಸಿದ್ದಾರೆ.

ಅಲ್ಲದೇ ಎಂ.ಡಿ.ಯವರ ಕಚೇರಿಯನ್ನು ಬೆಂಗಳೂರಿನಲ್ಲೇ ಉಳಿಸಿಕೊಂಡಿದ್ದಾರೆ. ಇದರಿಂದ ಮೂಲ ಸ್ಥಾನ ಬಿಟ್ಟು ಸ್ಥಳಾಂತರವಾಗದಿರಲು ಮುಖ್ಯಮಂತ್ರಿ ಅವರು ಅಧಿವೇಶನದಲ್ಲಿ ನೀಡಿದ ಭರವಸೆ ಹಾಗೂ ಸರ್ಕಾರದ ಆದೇಶಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲದಂತಾಗಿದೆ ಎಂದು ಈ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಾಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ ಎಲ್‌), ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ಪೂರ್ಣ ಸ್ವಾಮ್ಯ ಹೊಂದಿರುವ ಒಂದು ನಿಗಮವನ್ನು 1994 ಆಗಸ್ಟ್‌ 19ರಂದು ಆಲಮಟ್ಟಿಯಲ್ಲಿ ಆರಂಭಿಸಿತು.

ನಿಗಮಕ್ಕೆ ಪ್ರಪ್ರಥಮ ವ್ಯವಸ್ಥಾಪಕ ನಿರ್ದೇಶಕರಾಗಿ ಕ್ಯಾಪ್ಟನ್‌ ಎಸ್‌.ರಾಜಾರಾವ್‌ 1994 ಸೆಪ್ಟೆಂಬರ್‌ 3ರಂದು ಅಧಿ ಕಾರ ಸ್ವೀಕರಿಸಿದರು. ನಂತರ 1995 ನ.8ರಂದು ಜೆ.ಎಂ.ರತ್ನಾನಾಯಕ ಇವರಿಬ್ಬರೂ ತಾಂತ್ರಿಕ ಇಲಾಖೆಯ ಅಧಿಕಾರಿಗಳಾಗಿದ್ದು 3ವರ್ಷ ಅಧಿಕಾರ ನಡೆಸಿದರು. ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ನಿರ್ಮಾಣ, ಕಾಲುವೆಗಳ ಜಾಲ ನಿರ್ಮಾಣ, ಜಲಾಶಯ ಕಟ್ಟಡ ನಿರ್ಮಾಣ ಹೀಗೆ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಆಗಿನ ಸರ್ಕಾರ ತಾಂತ್ರಿಕ ವರ್ಗದಿಂದ ಆಡಳಿತಾತ್ಮಕ ಅಂದರೆ ಐಎಎಸ್‌ ಅಧಿಕಾರಿ ಎಂ.ಬಿ. ಪ್ರಕಾಶ ಅವರನ್ನು 1997ಮೇ 8ರಂದು ನೇಮಿಸಿತ್ತು.

ಸೌಲಭ್ಯ ಇದ್ದರೂ ಬಾರದ ಕಚೇರಿ: ಕೋಟ್ಯಂತರ ರೂ. ವ್ಯಯ ಮಾಡಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಆಡಳಿತಾತ್ಮಕ ಹಾಗೂ ಆರ್ಥಿಕ ವಿಭಾಗದ ಇಬ್ಬರು ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ಸಿಬ್ಬಂದಿ ಹೀಗೆ ಎಲ್ಲ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಬೃಹತ್‌ ಕಟ್ಟಡ ನಿರ್ಮಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಸೇರಿ ಎಲ್ಲ ಅಧಿಕಾರಿಗಳು ವಾಸಿಸಲು ಸುಸಜ್ಜಿತ ಸೌಲಭ್ಯ ಹೊಂದಿರುವ ಬಂಗಲೆಗಳು ಇವೆ ಆದರಿಂದು ಭೂತ ಬಂಗಲೆಗಳಂತೆ ಬಿಕೋ ಎನ್ನುತ್ತಿವೆ.

ಈ ಕಚೇರಿ ವ್ಯಾಪ್ತಿಯಲ್ಲಿ ಆಲಮಟ್ಟಿ, ನಾರಾಯಣಪುರ, ಭೀಮರಾಯನಗುಡಿ, ರಾಂಪೂರ ಹೀಗೆ ನಾಲ್ಕು ವಲಯಗಳ ಸುಮಾರು 4 ಸಾವಿರ ಜನ ಸಿಬ್ಬಂದಿ, ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಯುಕೆಪಿಯ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರವು ಹೇಳುತ್ತದೆಯಾದರೂ ಅಧಿಕಾರಿಗಳು ಸ್ಥಾನಿಕವಾಗಿರದೇ ಬೆಂಗಳೂರಿನಲ್ಲಿ ಕುಳಿತು ಆಡಳಿತ ನಡೆಸುವುದರಿಂದ ಸಮಸ್ಯೆಯಾಗಿದೆ. ಉತ್ತರ ಕರ್ನಾಟಕ ಜೀವನಾಡಿ ಆಗಿರುವ ಕೃಷ್ಣೆಯ ನೀರನ್ನು ಬಳಸಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಬಾಗಲಕೋಟ, ವಿಜಯಪುರ, ಯಾದಗಿರಿ, ರಾಯಚೂರು ಮತ್ತಿತರ ಜಿಲ್ಲೆಗಳ ರೈತರನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.