ಇನ್ನೂ ಸ್ಥಳಾಂತರವಾಗದ 9 ಕಚೇರಿಗಳು
ಅಧಿವೇಶನದಲ್ಲಿ ಸಿಎಂ ನೀಡಿದ ಭರವಸೆ ಹುಸಿ •ಮತ್ತೆ ಹೋರಾಟಕ್ಕೆ ಸಜ್ಜಾದ ಉಕ ಜನ
Team Udayavani, Apr 27, 2019, 10:40 AM IST
ಆಲಮಟ್ಟಿ: ಕೃಷ್ಣಾಭಾಗ್ಯಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಆಡಳಿತ ಕಚೇರಿ.
ಆಲಮಟ್ಟಿ: ರಾಜ್ಯದ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಕೆಲ ಇಲಾಖೆಗಳ ಕೇಂದ್ರ ಕಚೇರಿಗಳನ್ನು ವರ್ಗಾಯಿಸಿದ್ದರೂ ಕೂಡ ಉತ್ತರ ಕರ್ನಾಟಕಕ್ಕೆ ಬಾರದೇ ಬೆಂಗಳೂರಿನಲ್ಲಿಯೇ ಮುಂದುವರಿಯುತ್ತಿರುವೆ!
ಸಮಗ್ರ ಅಭಿವೃದ್ಧಿಗಾಗಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ 9 ಕಚೇರಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ. ಬೆಂಗಳೂರಿನಲ್ಲಿರುವ ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಕೇಂದ್ರ ಸ್ಥಾನವಾಗಿದ್ದ ಆಲಮಟ್ಟಿಗೆ ನೋಂದಾಯಿತ ಕಚೇರಿಯಿಂದ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ನೀರಾವರಿ ನಿಗಮವನ್ನು ದಾವಣಗೆರೆಗೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮ) ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ. ನಗರಾಭಿವೃದ್ಧಿ ಇಲಾಖೆಯ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಪ್ರತ್ಯೇಕವಾಗಿ ಸ್ಥಾಪಿಸುವುದು ಹಾಗೂ ಮೈಸೂರಿನಲ್ಲಿದ್ದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆಯನ್ನು ಹಂಪಿಗೆ ಹಾಗೂ ಕಾನೂನು ಇಲಾಖೆಯ ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ವರ್ಗಾಯಿಸುವಂತೆ ಸೂಚಿಸಲಾಗಿತ್ತು.
ಬೆಂಗಳೂರಿನಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (ಸ್ಪಂದನ) ಇಲಾಖೆಯ ರಾಜ್ಯ ಮಾಹಿತಿ ಆಯೋಗದ ಆಯುಕ್ತರುಗಳ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿಗಳಲ್ಲಿ ಒಂದು ಪೀಠ ಕಲಬುರಗಿಗೆ ಹಾಗೂ ಒಂದು ಪೀಠ ಬೆಳಗಾವಿಗೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (ಜಾಗೃತ ವಿಭಾಗ) ಇಲಾಖೆಯ ಕರ್ನಾಟಕ ಲೋಕಾಯುಕ್ತದಲ್ಲಿರುವ ಎರಡು ಉಪ ಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪ ಲೋಕಾಯುಕ್ತ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾತರಿಸಿ 2019, ಏ.1ರಂದು ಜಾರಿಗೆ ಬರುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಮಾರ್ಚ್ ಮುಗಿದರೂ ಕೂಡ ಯಾವ ಕಚೇರಿಗಳೂ ಕೂಡ ತಮ್ಮ ಮೂಲ ಸ್ಥಾನ ಬಿಟ್ಟು ಕದಲಿಲ್ಲ. ಇದು ಉತ್ತರ ಕರ್ನಾಟಕ ಭಾಗದ ರೈತರು ಹಾಗೂ ಹೋರಾಟಗಾರರನ್ನು ಕೆರಳಿಸುವಂತಾಗಿದೆ.
ಆಡಳಿತ ಸರಳೀಕರಣಕ್ಕಾಗಿ ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳಿಸುವ ವಿಚಾರದಲ್ಲಿ ಸರ್ಕಾರ ಉತ್ತರ ಕರ್ನಾಟಕ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದೆ. ಉತ್ತರ ಕರ್ನಾಟಕದಲ್ಲಿದ್ದ ಕೆಲ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಗೊಳಿಸಿದ್ದಾರೆ. ಚುನಾವಣೆ ಮುಗಿದ ನಂತರ ಹೋರಾಟ ಮಾಡಲು ಅಣಿಯಾಗಬೇಕಾಗುತ್ತದೆ.
•ಬಸವರಾಜ ಕುಂಬಾರ,
ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ
ಕೃಷ್ಣಾ ಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಆಲಮಟ್ಟಿಯೇ ಆಗಿದೆ. ಅಲ್ಲಿ ವ್ಯವಸ್ಥಾಪಕ ನಿರ್ದೇಶಕರ ಕೊಠಡಿಗಳು ಸೇರಿದಂತೆ ಎಲ್ಲ ಸವಲತ್ತುಗಳಿವೆ. ಆದರೆ ರಾಜಧಾನಿಯಲ್ಲಿ ಹಲವಾರು ಸಭೆಗಳು, ಅಧಿವೇಶನಗಳು ಹೀಗೆ ಬಿಡುವಿಲ್ಲದ ಕಾರ್ಯವಿರುವುದರಿಂದ ಬೆಂಗಳೂರಿನಲ್ಲಿರುವ ಕಚೇರಿಯನ್ನು ಸಂಪರ್ಕ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ಇದರಿಂದ ಈಗ ಇರುವಂತೆಯೇ ಮುಂದುರಿಯಲಿದೆ.
• ವಿ.ಶಂಕರ,
ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕ
ಅಧಿವೇಶನದಲ್ಲಿ ಸಿಎಂ ನೀಡಿದ ಭರವಸೆಯಂತೆ ಆಲಮಟ್ಟಿಗೆ ಕೆಬಿಜೆಎನೆಲ್ ಎಂಡಿ ಕಚೇರಿ ಸ್ಥಳಾಂತರಗೊಳಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹಾಗೂ ಕುಮಾರಸ್ವಾಮಿ ಅವರನ್ನು ಸೋಮವಾರ ಭೇಟಿಯಾಗಿ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಗೊಳಿಸಲು ವಿನಂತಿಸಲಾಗುವುದು.
•ಎಂ.ಸಿ. ಮನಗೂಳಿ,
ಜಿಲ್ಲಾ ಉಸ್ತುವಾರಿ ಸಚಿವ
ಶಂಕರ ಜಲ್ಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.